Homeಕರ್ನಾಟಕನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ನಾನು ದಲಿತ ಎಂಬ ಕಾರಣಕ್ಕೆ ದೇವಾಯಲದ ಹೊರಗೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ: ಡಾ.ಜಿ. ಪರಮೇಶ್ವರ್‌ ಆಕ್ರೋಶ

ಶಾಸಕ, ಸಚಿವ ಸೇರಿದಂತೆ ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ, ಆದರೆ ನನ್ನನ್ನು ದೇವಸ್ಥಾನದ ಒಳಗೆ ಸೇರಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಾನು ವಿದೇಶ ಸುತ್ತಿ ಬಂದಿದ್ದೇನೆ, ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಉಪಮುಖ್ಯಮಂತ್ರಿಯಾಗಿದ್ದೇನೆ, ಆದರೆ ದಲಿತ ಎಂಬ ಕಾರಣಕ್ಕೆ ನನ್ನನ್ನು ದೇವಸ್ಥಾನದ ಒಳಗಡೆ ಸೇರಿಸುವುದಿಲ್ಲ ಕಾಂಗ್ರೆಸ್ ಶಾಸಕ, ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌‌ ಅವರು ಗುರುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಅಂಬೇಡ್ಕರ್‌‌ ಜಯಂತಿಯಲ್ಲಿ ಅವರು ಮಾತನಾಡುತ್ತಿದ್ದರು.

ಕೊರಟಗೆರೆಯ ಪಟ್ಟಣ ಪಂಚಾಯಿತಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹಲವು ದೇಶಗಳನ್ನು ಸುತ್ತಿ ಬಂದಿದ್ದೇನೆ. ಆದರೆ ದಲಿತ ಎಂಬ ಕಾರಣಕ್ಕೆ ದೇವಸ್ಥಾನಕ್ಕೆ ಸೇರಿಸಲಿಲ್ಲ. ಶಾಸಕನಾಗಿದ್ದೇನೆ, ಸಚಿವನಾಗಿದ್ದೇನೆ, ಈ ರಾಜ್ಯದ ಉಪ ಮುಖ್ಯಮಂತ್ರಿಯಾಗಿದ್ದೇನೆ. ಆದರೆ ನನ್ನನ್ನು ದೇವಸ್ಥಾನಕ್ಕೆ ಸೇರಿಸಲಿಲ್ಲ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತಾನು ದೇವಸ್ಥಾನಕ್ಕೆ ಹೋದಾಗ ಹೊರಗಡೆಯೆ ನಿಲ್ಲಿಸಿ ಮಂಗಳಾರತಿ ತರುತ್ತಾರೆ, ದೇವಸ್ಥಾನ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಪರಮೇಶ್ವರ್‌ ಅವರು ಹೇಳಿದ್ದಾರೆ.

“ದೇವಸ್ಥಾನಕ್ಕೆ ಹೋದಾಗ ‘ಸ್ವಲ್ಪ ಅಲ್ಲೇ ನಿಲ್ಲಿ’ ಎಂದು ಹೇಳಿ ಅಲ್ಲೇ ಮಂಗಳಾರತಿ ತಂದು ಬಿಡುತ್ತಾರೆ. ಮಂಗಳಾರತಿಯನ್ನು ನನ್ನ ಬಳಿಯೆ ತರುತ್ತಾರೆ. ನಾನು ದೇವರ ಬಳಿ ಹೋಗಿ ಮಂಗಳಾರತಿ ತೆಗೆದುಕೊಳ್ಳುವ ಹಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ಇವನು ಒಳಗೆ ಬಂದುಬಿಡುತ್ತಾನೆ ಎಂದು ಮಂಗಳಾರತಿಯನ್ನು ಈಚೆಗೆ ಹಿಡಿದುಕೊಂಡು ಓಡಿ ಬರುತ್ತಾರೆ. ಈ ರೀತಿಯಾಗಿ ಇನ್ನೂ ಸಮಾಜದಲ್ಲಿ ನಡೆಯುತ್ತಿದೆ. ಈ ಪರಿಸ್ಥಿತಿಗೆ ನಾವು ಏನು ಹೇಳಬೇಕು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾತು ಮರೆತ ಭಾರತ; ಇದು ದಲಿತ ಭಾರತದ ಕಥನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

7 COMMENTS

  1. ಜಾತಿಯ ಭೂತ ಸಚಿವ, ಉಪ ಮುಖ್ಯಮಂತ್ರಿಗೆ ಬಿಟ್ಟಿಲ್ಲ ಎಂದರೆ ಇನ್ನು ಸಾಮಾನ್ಯರ ಪಾಡು ಹೇಗಿರಬಹುದು. ಸಮುದಾಯದ ನಾಯಕರು, ಯುವಕರು ಇದನ್ನು ಅರಿತುಕೊಳ್ಳಬೇಕು. ಕೋಮುವಾದಿ ಪಕ್ಷಗಳಿಂದ ದೂರ ಇರಬೇಕು. ಅಂದಹಾಗೆ ದೇವಸ್ಥಾನದೊಳಗೆ ಪ್ರವೇಶ ನಿರಾಕರಿಸಿದ್ದು ಯಾವಾಗ, ಎಲ್ಲಿ ಎಂಬ ಮಾಹಿತಿ ಇದ್ದರೆ ಸುದ್ದಿ ಪೂರ್ಣವಾಗುತ್ತಿದ್ದು…

  2. ಅಚ್ಚರಿ ಹುಟ್ಟಿಸುವ ಸಂಗತಿ

    ಈ ಸುದ್ದಿ ನಿಜವೇ ಅಥವಾ ಸುಳ್ಳು ಆಗಿರಬಹುದೇ…

    ನಿಜವಾಗಿರುವ ಸಾಧ್ಯತೆ ಕಡಿಮೆ ಎನ್ನುವುದೇ ನನ್ನ ನಂಬಿಕೆ….

  3. ಸರ್ ಒಮ್ಮೆ ಯೋಚಿಸಿ ನಿಮ್ಮಗಳ ಪರಿಸ್ಥಿತಿ ಹೀಗಿರುವಾಗ ಜನ ಸಾಮಾನ್ಯರ ಗತಿ ಏನು…? ಈ ದೇಶಕ್ಕೆ ಸಂವಿಧಾನವಿದ್ದು ಹೀಗಿರುವಾಗ ಬಾಬಾ ಸಾಹೇಬರು ಅಂದು ಅನುಭವಿಸಿದ ನೋವು ಉಹಿಸಿಕೊಂಡರೆ ಭಯವಾಗುತ್ತದೆ.
    ಇವಾಗಾದರು ಈ ಅಸ್ಪೃಶ್ಯತೆಯ ಪಿಡುಗು ತೊಲಗಲಿ ನಿಮ್ಮಂತಹವರು ಇದರ ವಿರುಧ್ದ ಧ್ವನಿ ಎತ್ತಿ ಧ್ವನಿ ಇಲ್ಲದವರಿಗೆ ಧ್ವನಿಯಾದರೆ ಅದೆ ನಮ್ಮ ಬಾಬಾ ಸಾಹೇಬರಿಗೆ ಅರ್ಪಿಸುವ ಕೊಡುಗೆ.

  4. ನಿಮ್ಮಂಥ ತಿಳುವಳಿಕೆ ಇರೋರು ರಾಜಕೀಯ ಶಕ್ತಿ ಇರೋರಿಗೆ ಈ ರೀತಿಯ ಅಪಮಾನ ಮಾಡುತ್ತಾರೆ ಎಂದರೆ ಸಾಮಾನ್ಯ ದಲಿತ ವರ್ಗದ ಜನರು ಬದುಕು ಹೇಗೆ ಇರಬೇಕು ಯೋಚಿಸಿ.

    ತಾವು ಬಲವಂತವಾಗಿ ಮಂದಿರ ಪ್ರವೇಶ ಮಾಡಬೇಕಿತ್ತು ಎಂಬುದು ನನ್ನ ಅನಿಸಿಕೆ.

    ದಲಿತರು ಮಂದಿರಕ್ಕೆ ಹೋದರೆ ಅವಮಾನ /ಅಪಮಾನ ಆಗುತ್ತೆ ಆಂತ ಗೊತ್ತಿದ್ರೆ ಆ ಮಂದಿರಕ್ಕೆ ಯಾಕೆ ನಾವು ಹೋಗ್ಬೇಕು?

  5. ನಿಮ್ಮ ಸಮಾಜ ಬಾಂಧವರು ಇಂತಹ ವಿಷಯಗಳ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಂಧ ಭಕ್ತರಾಗಿದ್ದಾರ

  6. ಸ್ವತಃ ಯಾದಗಿರಿ ಜಿಲ್ಲಾಧಿಕಾರಿ ರಾಗಪ್ರೀಯ ಮೇಡಂ ದಲಿತರಿಗೆ ದೇವಸ್ಥಾನದ ಒಳಗೆ ಪ್ರವೇಶಿಸಲು ಅನುಮತಿ ನೀಡಲು ಆದೇಶ ನೀಡಿದ್ದರು. ಇಂದು ಸಹ ದಲಿತರಿಗೆ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಸ್ಥಗಳನ್ನು ಹೊರತುಪಡಿಸಿ ಉಳಿದ ದೇವಾಲಯಗಳಿಗೆ ಅನುಮತಿ ಇಲ್ಲ ಸರ್. ಸ್ವತಃ ಪತ್ರಿಕೋದ್ಯಮದಲ್ಲಿ ಇರುವ ನನಗೆ ದೇವಸ್ಥಾನದ ಪ್ರವೇಶ ಮಾಡಲು ಬಿಡಲಿಲ್ಲ. ಊರಿನವರ ಎದುರು ಹಾಕಿಕೊಂಡು ಬಾಳಲು ಸಾಧ್ಯವಿಲ್ಲ ಎಂದು ದೇವಸ್ಥಾನಗಳಿಗೆ ಹೋಗುವುದು ಬಿಟ್ಟಿದ್ದೇನೆ.

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...