Homeಕರ್ನಾಟಕಮಂಗಳೂರು: ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಸಬ್‌ ಇನ್ಸ್‌‌ಪೆಕ್ಟರ್‌‌

ಮಂಗಳೂರು: ಗುಂಡು ಹಾರಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಸಬ್‌ ಇನ್ಸ್‌‌ಪೆಕ್ಟರ್‌‌

- Advertisement -
- Advertisement -

ನವ ಮಂಗಳೂರು ಪೋರ್ಟ್ ಟ್ರಸ್ಟ್‌ನ (ಎನ್‌ಎಂಪಿಟಿ) ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜಸ್ಥಾನ ಮೂಲದ ಮಹಿಳಾ ಪೊಲೀಸ್ ಸಬ್‌ಇನ್‌ಸ್ಪೆಕ್ಟರೊಬ್ಬರು ಬುಧವಾರ ಬಂದರು ಟ್ರಸ್ಟ್‌ನ ಮುಖ್ಯ ಗೇಟ್‌ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿರುವ ಅಧಿಕಾರಿಯನ್ನು ರಾಜಸ್ಥಾನದ ಭರತ್‌ಪುರ ಮೂಲದ ಜ್ಯೋತಿ ಭಾಯಿ (33) ಎಂದು ಗುರುತಿಸಲಾಗಿದೆ. ಘಟನೆಯು ಬೆಳಿಗ್ಗೆ 6 ರಿಂದ 6.15 ರ ನಡುವೆ ನಡೆದಿದೆ ಎಂದು ವರದಿಯಾಗಿದೆ. ಗುಂಡೇಟಿನಿಂದಾಗಿ ಗಾಯಗೊಂಡಿರುವ ಇನ್ಸ್‌ಪೆಕ್ಟರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜ್ಯೋತಿ ಅವರ ಪತಿ ಓಂಬೀರ್‌ ಸಿಂಗ್‌ ಪರ್ಮಾರ್‌ ಅವರು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ನಲ್ಲಿ (ಎಂಆರ್‌ಪಿಎಲ್) ಸಹಾಯಕ ಕಮಾಂಡೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜ್ಯೋತಿ ಭಾಯಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಮುನ್ನ ಅವರು ಬರೆದ ಡೆತ್‌ನೋಟ್‌‌ನಲ್ಲಿ ಇದನ್ನು ಉಲ್ಲೇಖಿಸಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: ಬೀದರ್: ಮೊರಾರ್ಜಿ ಶಾಲೆಗಳಲ್ಲಿ RSS ಶಿಬಿರ ವಿರೋಧಿಸಿ ದಲಿತ ಸಂಘಟನೆಗಳ ಪ್ರತಿಭಟನೆ

‘‘ಆತ್ಮಹತ್ಯೆಗೆ ಯತ್ನಿಸುವ ಮುನ್ನ ಜ್ಯೋತಿ ಅವರು ಪತ್ರವೊಂದನ್ನು ಬರೆದಿದ್ದಾರೆ. ಅದರಲ್ಲಿ, ‘ಕ್ಷಮಿಸು ಅಮ್ಮಾ. ನಾನು ಸ್ವಇಚ್ಛೆಯಿಂದಲೇ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದೇನೆ. ಯಾರೂ ನನಗೆ ಒತ್ತಡ ಹಾಕಿಲ್ಲ’ ಎಂದು ಹಿಂದಿಯಲ್ಲಿ ಬರೆದು ದಿನಾಂಕವನ್ನೂ ನಮೂದಿಸಿದ್ದಾರೆ’’ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ ಎಂದು ಪ್ರಜಾವಾಣಿ ವರದಿ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೇಥಿ ಕಾಂಗ್ರೆಸ್ ಕಚೇರಿ ಮೇಲೆ ದಾಳಿ, ಕಾರ್ಯಕರ್ತನಿಗೆ ಹಲ್ಲೆ: ಬಿಜೆಪಿ ಮುಖಂಡರು ಸೇರಿ 10...

0
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ಮೇಲೆ ಭಾನುವಾರ (ಮೇ 5) ಮಧ್ಯರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ದಾಳಿ ಮಾಡಿದೆ. ಪಕ್ಷದ ಕಚೇರಿಯ ಹೊರಗೆ ನಿಲ್ಲಿಸಿದ್ದ ಹಲವು ವಾಹನಗಳನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳು,...