Homeಕರ್ನಾಟಕಮಂಗಳೂರು: ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ; ವಿಡಿಯೊ ವೈರಲ್‌

ಮಂಗಳೂರು: ಮತ್ತೊಂದು ಮತೀಯ ಗೂಂಡಾಗಿರಿ ಪ್ರಕರಣ; ವಿಡಿಯೊ ವೈರಲ್‌

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಗೂಂಡಾಗಿರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮತ್ತೊಂದು ಪ್ರಕರಣ ಶುಕ್ರವಾರ ನಡೆದಿದೆ.

ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಮತೀಯ ಗೂಂಡಾಗಿರಿ ನಡೆಸಿದ್ದು, ವಿಡಿಯೊ ವೈರಲ್‌ ಆಗಿದೆ.

ಶುಕ್ರವಾರ ಬೆಳಿಗ್ಗೆ ನಗರ ಸರ್ವಿಸ್ ಬಸ್ ನಿಲ್ಯಾಣದಲ್ಲಿದ್ದ ಬಸ್ಸಿನಿಂದ ಇಬ್ಬರು ವಿದ್ಯಾರ್ಥಿಗಳನ್ನು ಕೆಳಗಿಳಿಸಿ ಗೂಂಡಾಗಿರಿ ನಡೆಸಿರುವ ಆರೋಪ ಕೇಳಿ ಬಂದಿದೆ.

ಮಂಗಳೂರು ನಗರದ ಸ್ಟೇಟ್ ಬ್ಯಾಂಕ್‌ ಸಮೀಪದ ಖಾಸಗಿ ಬಸ್ ನಿಲ್ದಾಣದಲ್ಲಿ ಮಂಗಳೂರಿನಿಂದ ಉಡುಪಿಗೆ ತೆರಳಲು ಇಬ್ಬರು ಬಸ್ಸಿನಲ್ಲಿ ಕುಳಿತಿದ್ದರು. ಶಿವಮೊಗ್ಗ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಉಡುಪಿ ಮೂಲದವರು ಎಂದು ವರದಿಗಳಾಗಿವೆ.

ನಗರ ಹೊರವಲಯದ ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿರುವ ಇವರು ಉಡುಪಿಗೆ ತೆರಳುವ ಬಸ್ಸಿನಲ್ಲಿ ಕುಳಿತಿದ್ದುದನ್ನು ಕಂಡ ಸಂಘ ಪರಿವಾರದ ಕಾರ್ಯಕರ್ತರು ಬಸ್ಸಿನೊಳಗೆ ನುಗ್ಗಿ ವಿದ್ಯಾರ್ಥಿಗಳನ್ನು ಹೆದರಿಸಿ ಬಲವಂತವಾಗಿ ಕೆಳಗಿಳಿಸಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಯ ಗುರುತಿನ ಚೀಟಿ ಮತ್ತು ವಿಳಾಸವನ್ನು ಕೇಳಿ ಬೆದರಿಸಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯುಕ್ತ ಶಶಿಕುಮಾರ್, ‘ಪ್ರಕರಣದ ಬಗ್ಗೆ ಮತ್ತು ವಿದ್ಯಾರ್ಥಿಗಳು ಎಲ್ಲಿಯವರು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ತಿಳಿಸಿದ್ದಾರೆ ಎಂದು ‘ವಾರ್ತಾಭಾರತಿ’ ವರದಿ ಮಾಡಿದೆ.

ದಕ್ಷಿಣ ಕನ್ನಡದ ಹೆಚ್ಚುತ್ತಿದೆ ಕೋಮುದ್ವೇಷ

ಪೀಪಲ್ಸ್‌ ಯೂನಿಯನ್ ಫಾರ್‌ ಲಿಬರ್ಟೀಸ್‌ ಕರ್ನಾಟಕ (ಪಿಯುಸಿಎಲ್‌-ಕ) ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಷನ್‌ ಫಾರ್‌ ಜಸ್ಟಿಸ್‌ (ಎಐಎಲ್‌ಎಜೆ), ಆಲ್‌ ಇಂಡಿಯಾ ಪೀಪಲ್ಸ್ ಫೋರಮ್‌‌ (ಎಐಪಿಎಫ್‌) ಮತ್ತು ಗೌರಿ ಲಂಕೇಶ್‌ ನ್ಯೂಸ್‌.ಕಾಂ (gaurilankeshnews.com) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಕೋಮುದ್ವೇಷ ಅಪರಾಧ’ಗಳ ಕುರಿತು ಆತಂಕ ವ್ಯಕ್ತಪಡಿಸಿದೆ.

ಕರಾವಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರವರು ಮತೀಯ ಗೂಂಡಾಗಿರಿಯನ್ನು ಬಹಿರಂಗವಾಗಿ ಸಮರ್ಥಿಸಿ ಹೇಳಿಕೆ ನೀಡಿದ್ದನ್ನು, ಸಾಮಾಜಿಕ ಸಂಘಟನೆಗಳು, ನಾಗರಿಕರು, ವಿದ್ಯಾರ್ಥಿಗಳು, ವಕೀಲರು ಮತ್ತು ವಿರೋಧ ಪಕ್ಷದ ನಾಯಕರುಗಳು ತೀವ್ರವಾಗಿ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಎಂತಹ ಗಂಭೀರ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎನ್ನುವುದನ್ನು ಈ ವರದಿಯು ಉಲ್ಲೇಖಿಸುತ್ತದೆ.


ಇದನ್ನೂ ಓದಿರಿ: ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಅನ್ಯಧರ್ಮದ ಗೆಳತಿಯನ್ನು ಡ್ರಾಪ್ ಮಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಹಲ್ಲೆ


ಈ ವರದಿಯು ದಕ್ಷಿಣ ಕನ್ನಡದಲ್ಲಿ ಜನವರಿ 2021ರಿಂದ ಸೆಪ್ಟೆಂಬರ್‌ 2021ರವರೆಗೆ ನಡೆದ ಮತೀಯ ಗೂಂಡಾಗಿರಿ ಮತ್ತು ದ್ವೇಷದ ಅಪರಾಧಿಕ ಘಟನೆಗಳನ್ನು ವಿಶ್ಲೇಷಿಸಿದೆ. ಜೊತೆಗೆ ಆರು ವಿಭಿನ್ನ ಮಾದರಿಯ ಘಟನೆಗಳನ್ನು ಗುರುತಿಸುತ್ತದೆ. ಅವುಗಳೆಂದರೆ, 1. ಸಾಮಾಜಿಕ ಪ್ರತ್ಯೇಕತೆಯನ್ನು ಜಾರಿಗೊಳಿಸುವುದು 2. ಆತ್ಮೀಯ ಸಂಬಂಧಗಳನ್ನು ನಿಯಂತ್ರಿಸುವುದು. 3. ಆರ್ಥಿಕ ಸಾಮಾಜಿಕ ಬಹಿಷ್ಕಾರ. 4. ಗೋವಿನ ಹೆಸರಲ್ಲಿ ದಾಳಿಗಳು. 5. ಧಾರ್ಮಿಕ ಸ್ವಾತಂತ್ರ್ಯವನ್ನು ನಿಗ್ರಹಿಸುವುದು. 6. ದ್ವೇಷ ಹರಡುವ ಭಾಷಣಗಳನ್ನು ಮಾಡುವುದು.

ಕೋಮುದ್ವೇಷವನ್ನು ತಡೆಯುವಲ್ಲಿ ಪೊಲೀಸರ ಪಾತ್ರವನ್ನು ಈ ವರದಿ ಉಲ್ಲೇಖಿಸಿದೆ. ಜೊತೆಗೆ ಪೊಲೀಸರ ತಪ್ಪುಗಳನ್ನು ವರದಿ ಉಲ್ಲೇಖಿಸಿದೆ. ಅಂತರ ಧರ್ಮೀಯ ಸಂಬಂಧಗಳಿಗೆ ತೊಂದರೆಯುಂಟುಮಾಡಿದ ಹೆಚ್ಚಿನ ಸಂಖ್ಯೆಯ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿಲ್ಲ. ಬದಲಾಗಿ ಅಂತರ ಧರ್ಮೀಯ ಸ್ನೇಹಿತರು ಅಥವಾ ದಂಪತಿಗಳನ್ನೇ ಪೊಲೀಸ್ ಠಾಣೆಗೆ ಕರೆಸಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಒಂದೆಡೆ ಹಿಂಸಾಚಾರ ಎಸಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದರೂ ಪೊಲೀಸರು ಒಂದು ಹೆಜ್ಜೆ ಮುಂದೆ ಹೋಗಿ ಸಂತ್ರಸ್ತರನ್ನು ಠಾಣೆಗೆ ಕರೆದೊಯ್ದು ಪ್ರಶ್ನಿಸುವ ಮೂಲಕ ತಪ್ಪಿತಸ್ಥರೆಂದು ಪರಿಗಣಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅಂತರ ಧರ್ಮೀಯ ಸಂಬಂಧಗಳನ್ನು ಬಲವಂತವಾಗಿ ಪ್ರತ್ಯೇಕಿಸುವ ಪ್ರಕ್ರಿಯೆಯಲ್ಲಿ ಪೊಲೀಸರು ಆರೋಪಿಗಳ ಮಿತ್ರರಾಗಿದ್ದಾರೆ ಎಂದು ವರದಿಯು ಆತಂಕ ವ್ಯಕ್ತಪಡಿಸಿದೆ.


ಇದನ್ನೂ ಓದಿರಿ: ಶನಿವಾರಪೇಟೆ: ಬುರ್ಖಾ ಧರಿಸಿದಕ್ಕೆ ಅಮಾಯಕ ಬಾಲಕಿಯರ ಮೇಲೆ ಮತೀಯ ಗೂಂಡಾಗಿರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...