Homeಕರ್ನಾಟಕಜೂನ್ 1ರಿಂದ ನವೆಂಬರ್‌ 1ರ ವರೆಗೆ ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು

ಜೂನ್ 1ರಿಂದ ನವೆಂಬರ್‌ 1ರ ವರೆಗೆ ಮಂಗಳೂರು-ಬೆಂಗಳೂರು ರೈಲು ಸಂಚಾರ ರದ್ದು

- Advertisement -
- Advertisement -

ಜೂನ್ 1ರಿಂದ ನವೆಂಬರ್‌ 1ರ ವರೆಗೆ ಸಕಲೇಶಪುರದಿಂದ ಸುಬ್ರಹ್ಮಣ್ಯವರೆಗಿನ ರೈಲು ಮಾರ್ಗದಲ್ಲಿ ವಿವಿಧ ಕಾಮಗಾರಿ ನಡೆಯುವುದರಿಂದ ಬೆಂಗಳೂರು – ಮಂಗಳೂರು ರೈಲು ಪ್ರಯಾಣ 5 ತಿಂಗಳ ಕಾಲ ಸ್ಥಗಿತಗೊಳ್ಳಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಸಕಲೇಶಪುರ ಹಾಸನ ಜಿಲ್ಲೆಯಲ್ಲಿದ್ದು, ಸುಬ್ರಹ್ಮಣ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಜೂನ್ 1ರಿಂದ ನವೆಂಬರ್‌

ಈ ಬಗ್ಗೆ ಪ್ರಕರಣೆ ಹೊರಡಿಸಿರುವ ರೈಲ್ವೇ ಇಲಾಖೆ, “ಜೂನ್‌ 1ರಿಂದ ನವೆಂಬರ್ 1ರವರೆಗೆ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ರೈಲ್ವೇ ವಿದ್ಯುದ್ಧೀಕರಣ, ಸುರಕ್ಷತೆ ಸೇರಿದಂತೆ ಕೆಲವು ಪ್ರಮುಖ ಕಾಮಗಾರಿಗಳು ನಡೆಯಲಿವೆ. ಈ ಅವಧಿಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಬಹುತೇಕ ಎಲ್ಲ ರೈಲುಗಳ ಸಂಚಾರ ರದ್ದಾಗಲಿದೆ” ಎಂದು ಹೇಳಿದೆ.

ಸಂಚಾರ ಸ್ಥಗಿತಗೊಂಡ ರೈಲುಗಳ ವಿವರ ಕೆಳಗಿನಂತಿವೆ

  • ಯಶವಂತಪುರ-ಮಂಗಳೂರು ಜಂಕ್ಷನ್‌ ಸಾಪ್ರಾಹಿಕ ಎಕ್ಸ್‌ಪ್ರೆಸ್ (16540): ಪ್ರತಿ ಶನಿವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುವ ಈ ರೈಲು ಸಂಚಾರವು ಮೇ 31ರಿಂದ ನವೆಂಬರ್ 1ರವರೆಗೆ ರದ್ದಾಗಲಿದೆ.
  • ಮಂಗಳೂರು ಜಂಕ್ಷನ್ – ಯಶವಂತಪುರ ಸಾಪ್ರಾಹಿಕ ಎಕ್ಸ್‌ಪ್ರೆಸ್ (16539): ಪ್ರತಿ ಭಾನುವಾರ ಮಂಗಳೂರು ಜಂಕ್ಷನ್‌ನಿಂದ ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ ಪ್ರಯಾಣಿಸುತ್ತಿದ್ದ ಈ ರೈಲು ಜೂನ್ 1ರಿಂದ ನವೆಂಬರ್ 2ರವರೆಗೆ ರದ್ದಾಗಲಿದೆ.
  • ಯಶವಂತಪುರ – ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16575): ಪ್ರತಿ ಮಂಗಳವಾರ, ಗುರುವಾರ ಮತ್ತು ಭಾನುವಾರ ಯಶವಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲು ಜೂನ್ 1 ರಿಂದ ಅಕ್ಟೋಬರ್ 30ರವರೆಗೆ ರದ್ದಾಗಲಿದೆ.
  • ಮಂಗಳೂರು – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಂಗಳೂರಿನಿಂದ ಯಶವಂತಪುರಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 2ರಿಂದ ಅಕ್ಟೋಬರ್ 31ರವರೆಗೆದಂದು ಸ್ಥಗಿತಗೊಳ್ಳಲಿದೆ.
  • ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16515): ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಯಶವಂತಪುರದಿಂದ ಕಾರವಾರಕ್ಕೆ ತೆಳುತ್ತಿದ್ದ ರೈಲು ಸಂಚಾರವು ಜೂನ್ 2 ರಿಂದ ಅಕ್ಟೋಬರ್ 31ರವರೆಗೆ ರದ್ದಾಗಲಿದೆ.
  • ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16516): ಪ್ರತಿ ಮಂಗಳವಾರ, ಗುರುವಾರ ಮತ್ತು ಶನಿವಾರ ಕಾರವಾರದಿಂದ ಯಶವಂತಪುಕ್ಕೆ ಪ್ರಯಾಣಿಸುತ್ತಿದ್ದ ರೈಲು ಜೂನ್ 3ರಿಂದ ನವೆಂಬರ್ 1ರವರೆಗೆ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದೆ. ಜೂನ್ 1ರಿಂದ ನವೆಂಬರ್‌

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ಕಡ್ಡಾಯ ಮಾಡಿದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ; ತೀವ್ರ ಟೀಕೆ

ಅತಿಥಿ ಶಿಕ್ಷಕರಿಗೆ ಸಿಇಟಿ ಪರೀಕ್ಷೆ ಕಡ್ಡಾಯ ಮಾಡಿದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ; ತೀವ್ರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...