ಮಂಗಳೂರಿನ ಸೂಪರ್ ಮಾರ್ಕೆಟ್ ಒಂದರಲ್ಲಿ ಮಾಸ್ಕ್ ಧರಿಸದೇ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವೈದ್ಯ ಡಾ.ಶ್ರೀನಿವಾಸ ಕಕ್ಕಿಲಾಯರವರ ವಿರುದ್ಧ ಪ್ರಕರಣ ದಾಖಲಾಗಿದೆ.
ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವೈದ್ಯರು ಸೂಪರ್ ಮಾರ್ಕೆಟ್ ಸಿಬ್ಬಂದಿಯೊಡನೆ ವಾಗ್ವಾದ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಂಗಳವಾರ ಬೆಳಿಗ್ಗೆ ಸೂಪರ್ ಮಾರ್ಕೆಟ್ ತೆರಳಿದ್ದು ಕಕ್ಕಿಲಾಯರು ಮಾಸ್ಕ್ ಧರಿಸಿಲ್ಲವೆಂದು ಸಿಬ್ಬಂದಿ ಪ್ರಶ್ನಿಸಿದ್ದಾರೆ. ಹೌದು ನಾನು ಧರಿಸುವುದಿಲ್ಲ ಎಂದು ಕಕ್ಕಿಲಾಯರು ತಿಳಿಸಿದ್ದಾರೆ. ಹಾಗಾಗಿ ಸೂಪರ್ ಮಾರ್ಕೆಟ್ ಸಿಬ್ಬಂದಿ ದೂರು ದಾಖಲಿಸಿದ್ದಾರೆ.
ಇಲ್ಲಿ ಎಲ್ಲರಿಗೂ ಒಂದೇ ನಿಯಮ.. ನೀವು ಮಾಸ್ಕ್ ಏಕೆ ಹಾಕಿಲ್ಲ ಎಂದು ಸಿಬ್ಬಂದಿ ಪ್ರಶ್ನಿಸಿದ್ದಾರೆ. ನನಗೆ ಕೋವಿಡ್‌ನಿಂದ ಗುಣಮುಖನಾಗಿದ್ದೇನೆ. ನಾನು ಸರ್ಕಾರದ ದಡ್ಡ ನಿಯಮಗಳನ್ನು ಪಾಲಿಸುವುದಿಲ್ಲ ಎಂದು ಶ್ರೀನಿವಾಸ ಕಕ್ಕಿಲಾಯರು ಉತ್ತರಿಸಿದ್ದಾರೆ. ಲಾಕ್‌ಡೌನ್ ಎಂಬುದು ವ್ಯರ್ಥ ನಿಯಮ ಇದನ್ನು ನೀವು ಏಕೆ ವಿರೋಧಿಸುವುದಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.
ನಾನು ವಿಜ್ಞಾನವನ್ನು ಅನುಸರಿಸುತ್ತೇನೆ ಹೊರತು ಸರ್ಕಾರದ ದಡ್ಡ ನಿಯಮಗಳನ್ನಲ್ಲ ಎಂದು ಶ್ರೀನಿವಾಸ ಕಕ್ಕಿಲಾಯರು ಹೇಳಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.
ಇದನ್ನೂ ಓದಿ: ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ



ಶ್ರೀನಿವಾಸ್ ಕಕ್ಕಿಲಾಯ ಅಂತವರ ಮಾರ್ಗದರ್ಶನ ಸರ್ಕಾರಕ್ಕೆ ಬೇಕಿಲ್ಲ. ಇದು ತಾನು ಮಾಡಿರುವ ದಡ್ಡ ನಿಯಮಗಳು ಸರಿಯೋ ತಪ್ಪೋ ಅದನ್ನು ಪಾಲಿಸಬೇಕು ಎನ್ನುವುದು ಸರಕಾರದ ನೀತಿ.
We as doctors should set good example for the people to follow in a public health emergency even if we personally differ from the current public advice on the health policy.