Homeಕರ್ನಾಟಕಮಂಗಳೂರು: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

ಮಂಗಳೂರು: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು

- Advertisement -
- Advertisement -

ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

ನಗರದ ಕೆ.ಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ದಂಪತಿ ಮತ್ತು ಅವಳಿ ಹೆಣ್ಣು ಮಕ್ಕಳು ಮೃತಪಟ್ಟಿದ್ದಾರೆ. ಮೃತರನ್ನು ದೇವೇಂದ್ರ (48), ನಿರ್ಮಲಾ (48), ಚೈತ್ರಾ (09), ಚೈತನ್ಯ (09) ಎಂದು ಗುರುತಿಸಲಾಗಿದೆ.

ಆತ್ಮಹತ್ಯೆ ಸ್ಥಳದಲ್ಲಿ ಡೆತ್‌ ನೋಟ್‌ ಸಿಕ್ಕಿದ್ದು, ಈ ಕುಟುಂಬದವರು ಮೈಸೂರಿನ ವಿಜಯನಗರ ಮೂಲದವರು ಎಂದು ತಿಳಿದುಬಂದಿದೆ. ಸಾಲ ತೀರಿಸಲಾಗದೇ ಸಾಲಗಾರರ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಡೆತ್‌ ನೋಟ್‌ನಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ತಿಳಿಸಲಾಗಿದೆ.

ಮೃತ ದೇವೇಂದ್ರ ಕುಟುಂಬ ಮಾರ್ಚ್‌ 27ರಂದು ನಗರದ ಕರುಣಾ ಲಾಡ್ಜ್‌ನಲ್ಲಿ ರೂಮ್‌ ಬುಕ್‌ ಮಾಡಿತ್ತು. ಒಂದು ದಿನಕ್ಕಾಗಿ ರೂಮ್‌ ಬುಕ್ ಮಾಡಿದ್ದ ಕುಟುಂಬ, ಬಳಿಕ ಎರಡು ದಿ‌ನಕ್ಕಾಗಿ ರೂಮ್‌ ಬುಕ್ಕಿಂಗ್‌ ಅನ್ನು ವಿಸ್ತರಣೆ ಮಾಡಿತ್ತು.

ಇದನ್ನೂ ಓದಿ: ಜನಸಾಮಾನ್ಯರಿಗೆ ಹೊರೆ: 15 ದಿನಗಳಲ್ಲೇ ಬೆಂಗಳೂರು-ಮೈಸೂರು ರಸ್ತೆ ಟೋಲ್ ದರ ಹೆಚ್ಚಳ

ಗುರುವಾರ ಸಂಜೆಯೇ ರೂಮ್‌ ಚೆಕ್‌ ಔಟ್‌ ಮಾಡಬೇಕಿತ್ತು. ಆದರೆ, ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ತಪಾಸಣೆ ನಡೆಸಿದಾಗ ಶುಕ್ರವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪತ್ನಿ ಮತ್ತು ಮಕ್ಕಳಿಗೆ ವಿಷ ಕೊಟ್ಟು ದೇವೇಂದ್ರ ನೇಣು ಬಿಗಿದುಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ದೇಶದಲ್ಲಿ ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಚರ್ಚೆ ಆರಂಭವಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...