Homeಚಳವಳಿಮಂಗಳೂರು: ಪಿಎಫ್‌ಐ ಕಾರ್ಯಕರ್ತರ ಮೇಲಿನ ಲಾಠೀಚಾರ್ಜ್‌ಗೆ ತೀವ್ರ ಖಂಡನೆ- SP ಕಛೇರಿಗೆ ಮುತ್ತಿಗೆ

ಮಂಗಳೂರು: ಪಿಎಫ್‌ಐ ಕಾರ್ಯಕರ್ತರ ಮೇಲಿನ ಲಾಠೀಚಾರ್ಜ್‌ಗೆ ತೀವ್ರ ಖಂಡನೆ- SP ಕಛೇರಿಗೆ ಮುತ್ತಿಗೆ

ಇನ್ನೊಂದೆಡೆ ಇಂದು ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ಉಪ್ಪಿನಂಗಡಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪಿಎಫ್‌ಐ ಕಾರ್ಯಕರ್ತರ ಮೇಲೆ ಕ್ರೂರ ಲಾಠೀಚಾರ್ಜ್‌ ಅನ್ನು ಹಲವಾರು ಸಂಘಟನೆಗಳು ತೀವ್ರವಾಗಿ ಖಂಡಿಸಿವೆ. ಅದೇ ರೀತಿ ದೌರ್ಜನ್ಯವೆಸಗಿದ ಪೊಲೀಸರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಇಂದು ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ.

ಅಕ್ರಮವಾಗಿ ಬಂಧಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ 14 ಡಿಸೆಂಬರ್ 2021ರ ರಾತ್ರಿ ಮಂಗಳೂರಿನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹೊರಗೆ ಹಲವಾರು ಜನರು ಪ್ರತಿಭಟನೆ ನಡೆಸುತ್ತಿದ್ದಾಗ ಪೊಲೀಸರು ಅಮಾನವೀಯ ಲಾಠೀಚಾರ್ಜ್ ಮಾಡಿ, ಹಿಂಸಾಚಾರ ನಡೆಸಿರುವುದು ಕಾನೂನಿನ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಸಂಘಟನೆಗಳು ಕಿಡಿಕಾರಿವೆ.

ಮಂಗಳೂರು ಅಭಿವೃದ್ಧಿಗಾಗಿ ನಾಗರಿಕರ ವೇದಿಕೆ, ನಾವು ಮಹಿಳೆಯರು ಮಂಗಳೂರು, ಬಹುತ್ವ ಕರ್ನಾಟಕ, Hate Speech ಬೇಡ, ಡಿಫೆಂಡ್ ಡೆಮಾಕ್ರಸಿ ಕರ್ನಾಟಕ, ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ, ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (AISA) ಫಾರ್ವರ್ಡ್ ಟ್ರಸ್ಟ್, Health for ALL ಮತ್ತು ಲೇಖಕಿ ಪುಷ್ಪಾ ಅಕಾ ರಿತಾಶ್ ರವರು ಈ ಕುರಿತು ನೀಡಲಾದ ಜಂಟಿ ಪತ್ರಿಕೆ ಹೇಳಿಕೆಗೆ ಸಹಿ ಹಾಕಿದ್ದಾರೆ.

ಪೊಲೀಸರು ನಡೆಸಿದ ಲಾರಿ ಚಾರ್ಜ್ ಕ್ರೂರವಾಗಿತ್ತು ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂಬ ಸಂಗತಿಯು ವೀಡಿಯೊಗಳಿಂದ ತಿಳಿದು ಬರುತ್ತದೆ. ಹಲವಾರು ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಮತ್ತು ಇಬ್ಬರಿಗೆ ಐಸಿಯು ನಲ್ಲಿ ದಾಖಲಾಗುವ ತುರ್ತು ಪರಿಸ್ಥಿತಿ ಎದುರಾಗಿದೆ ಎಂದು ವರದಿಯಾಗಿದೆ. ಆಂಬುಲೆನ್ಸ್ ನಲ್ಲಿದ್ದ ಜನರನ್ನು ಸಹ ಬಿಡದೆ ಅಟ್ಟಾಡಿಸಿಕೊಂಡು ಹೊಡೆಯಲು ಪೊಲೀಸರು ಪ್ರಯತ್ನ ಪಟ್ಟಿದ್ದಾರೆ ಎಂಬ ಸಂಗತಿಯು ವಿಡಿಯೋಗಳ ಮೂಲಕ ತಿಳಿದು ಬರುತ್ತದೆ. ಇದು ಅಧಿಕಾರದ ದುರಪಯೋಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಪ್ರತಿಭಟನಾಕಾರರನ್ನು ಚದುರಿಸಲು ಯಾವುದೇ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಯೋಜನೆಯನ್ನು ಸಿದ್ಧಪಡಿಸಿಕೊಳ್ಳದೆ ಪೊಲೀಸರು ಹಿಂಸಾಚಾರದ ಮಾರ್ಗವನ್ನು ಅನುಸರಿಸಿದ್ದಾರೆ ಎಂಬುವುದು ಗಮನಿಸಬೇಕಾದ ಸಂಗತಿ. ಅನಿತಾ ಠಾಕೂರ್ ವಿರುದ್ಧ ಸ್ಟೇಟ್ ಆಫ್ ಜೆ & ಕೆ ((2016) 15 ಎನ್‌ಸಿಪಿ 525) ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯವು ಜನರ ಗುಂಪನ್ನು ಚದುರಿಸಲು ಪೊಲೀಸರು ಅತಿಯಾದ ಬಲಪ್ರಯೋಗ ಮಾಡುವುದು ವ್ಯಕ್ತಿಗಳ ಘನತೆಯ ಮೇಲಿನ ಆಕ್ರಮಣವೆಂದು ಹೇಳಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ.

ಲಾಠಿ ಚಾರ್ಜ್ ನಂತಹ ಅತಿಯಾದ ಬಲಪ್ರಯೋಗಕ್ಕೆ ಪೊಲೀಸರನ್ನು ತಕ್ಷಣವೇ ಹೊಣೆಗಾರರನ್ನಾಗಿ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ಪ್ರತಿಭಟನಾಕಾರರ ವಿರುದ್ಧ ಹಿಂಸಾಚಾರದ ಬಳಕೆಯ ಬಗ್ಗೆ ನ್ಯಾಯಾಂಗ ತನಿಖೆಗೆ ನಾವು ಒತ್ತಾಯಿಸುತ್ತೇವೆ. ಎಫ್‌ಐಆರ್ ದಾಖಲಿಸಬೇಕು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಕರ್ನಾಟಕ ಸರ್ಕಾರವು ಸಂತ್ರಸ್ತ ಪರಿಹಾರ ಯೋಜನೆಯ ಮೂಲಕ ಗಾಯಗೊಂಡ ಪ್ರತಿಭಟನಾಕಾರರ ಚಿಕಿತ್ಸೆಗೆ ಆರ್ಥಿಕ ನೆರವನ್ನು ನೀಡಬೇಕೆಂದು ಮತ್ತು ಆ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಕೋಮುವಾದ ಪ್ರಚೋದಿತ ಗಲಭೆಗಳನ್ನು ಗಂಭೀರವಾಗಿ ಗಮನಿಸಬೇಕಾಗಿದೆ ಮತ್ತು ಆ ಘಟನೆಗಳಲ್ಲಿ ಪೊಲೀಸರ ಸಹಭಾಗಿತ್ವದ ಪಾತ್ರವನ್ನು ನಿರ್ಲಕ್ಷಿಸಬಾರದು. ಈ ಜಿಲ್ಲೆಯಲ್ಲಿ ಪೊಲೀಸರು ಪ್ರದರ್ಶಿಸುತ್ತಿರುವ ಅತಿರೇಕಗಳನ್ನು ತಡೆಯುವುದಕ್ಕಾಗಿ ಸಾಂವಿಧಾನಿಕ ಮತ್ತು ಕರ್ನಾಟಕದ ಬಹುತ್ವದ ಮೌಲ್ಯಗಳನ್ನು ಪುನಶ್ಚತನಗೊಳಿಸಲು ರಾಜ್ಯ ಸರ್ಕಾರವು ದಕ್ಷಿಣ ಕನ್ನಡ ಪೊಲೀಸರಿಗೆ ತರಬೇತಿಯನ್ನು ಪ್ರಾರಂಭಿಸಬೇಕು ಎಂದು ಒತ್ತಾಯಿಸಲಾಗಿದೆ.

ಇನ್ನೊಂದೆಡೆ ಇಂದು ಪಿಎಫ್‌ಐ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ ಖಂಡಿಸಿ ಮಂಗಳೂರು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.


ಇದನ್ನೂ ಓದಿ: ಉಪ್ಪಿನಂಗಡಿ ಲಾಠಿಚಾರ್ಜ್‌: ಪಾಪ್ಯುಲರ್ ಫ್ರಂಟ್‌‌ ಆಫ್‌ ಇಂಡಿಯಾ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. You change title as Red langoti Gauri, twisting news, Police done correct at Uppinangady against goondas hence peace is not disturbed in Mangalore. There they used only lathi here only fire if they have gone out of path

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...