Homeಕರ್ನಾಟಕಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಕೀಲ ನ್ಯಾಯಾಲಯಕ್ಕೆ ಶರಣು

ಮಂಗಳೂರು: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಕೀಲ ನ್ಯಾಯಾಲಯಕ್ಕೆ ಶರಣು

- Advertisement -
- Advertisement -

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ, ಪ್ರಕರಣ ದಾಖಲಾದ ಬಂತರ ನಾಪತ್ತೆಯಾಗಿದ್ದ ಆರೋಪಿ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್‌ ಎರಡು ತಿಂಗಳ ಬಳಿಕ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. 

ಕಾನೂನು ಪದವಿ ಪಡೆಯುತ್ತಿದ್ದ ವಿದ್ಯಾರ್ಥಿನಿ ಇಂಟರ್ನ್‌ಶಿಪ್‌ಗಾಗಿ ವಕೀಲ ರಾಜೇಶ್‌ ಕಚೇರಿಗೆ ಬಂದಿದ್ದರು. ಈ ವೇಳೆ ಆಕೆಗೆ ವಕೀಲ ಲೈಂಗಿಕ ಕಿರುಕುಳ ನೀಡಿದ್ದು, ದೂರು ನೀಡದಂತೆ ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 19 ರಂದು ದೂರು ದಾಖಲಿಸಿದ್ದರು.

ಸಂತ್ರಸ್ತೆ ದೂರು ನೀಡಿದ ಬೆನ್ನಲ್ಲೇ ವಕೀಲ ರಾಜೇಶ್ ನಾಪತ್ತೆಯಾಗಿದ್ದರು. ಹೀಗಾಗಿ, ಆತನ ಬಂಧನಕ್ಕೆ ಬಲೆ ಬೀಸಿದ್ದ ಪೊಲೀಸರು, ನ್ಯಾಯಾಲಯದ ಮೂಲಕ ಆತನ ಬ್ಯಾಂಕ್ ಖಾತೆ ಸ್ಥಗಿತಗೊಳಿಸಿ, ಲುಕ್​​ಔಟ್ ನೋಟಿಸ್ ಜಾರಿಗೊಳಿಸಿದ್ದರು.

ಇದನ್ನೂ ಓದಿ: ಓಟರ್‌ ಐಡಿಯೊಂದಿಗೆ ಆಧಾರ್ ಲಿಂಕ್ ಮಾಡುವ ಮಸೂದೆ ಅಂಗೀಕರಿಸಿದ ಒಕ್ಕೂಟ ಸರ್ಕಾರ

ಲುಕ್​​ಔಟ್ ನೋಟಿಸ್ ಬಳಿಕ ಆರೋಪಿ ವಕೀಲ ಅನಾರೋಗ್ಯದ ಕಾರಣ ನೀಡಿ ಆತ ಮಧ್ಯಂತರ ಜಾಮೀನು ಪಡೆಯಲು ಅರ್ಜಿಯನ್ನೂ ಸಲ್ಲಿಸಿದ್ದರು. ಆದರೆ, ಕೋರ್ಟ್‌ ಅರ್ಜಿಯನ್ನು ತಿರಸ್ಕರಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಸಹಾಯ ಮಾಡಿದ್ದ ಆರೋಪಿಯ ಪತ್ನಿ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.

ಪತ್ನಿಯ ಬಂಧನವಾದರೂ ಆರೋಪಿಯ ಸುಳಿವಿರಲಿಲ್ಲ. ಇದೀಗ ಎರಡು ತಿಂಗಳ ಬಳಿಕ ಆಂಬ್ಯಲೆನ್ಸ್‌ನಲ್ಲಿ ಮಂಗಳೂರು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬಂದ ಅವರು ಕೋರ್ಟ್‌ನಲ್ಲಿ ಶರಣಾಗಿದ್ದಾರೆ. 

ಆರೋಪಿ ವಕೀಲರಿಗೆ ನ್ಯಾಯಾಂಗ ಬಂಧನ ವಿಧಿಸಿರುವ ಕೋರ್ಟ್‌ ಆತನಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಜೈಲಿನ ಅಧಿಕಾರಿಗಳಿಗೆ ಸೂಚಿಸಿದೆ. ಇಂದು ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದ್ದು, ಪೊಲೀಸರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಕೇಳುವ ಸಾಧ್ಯತೆ ಇದೆ. 


ಇದನ್ನೂ ಓದಿ: ಚೆನ್ನೈ: ’ಹೆಣ್ಣು ತಾಯಿಯ ಗರ್ಭ ಮತ್ತು ಸಮಾಧಿಯಲ್ಲಿ ಮಾತ್ರ ಸುರಕ್ಷಿತವಾಗಿರುತ್ತಾಳೆ’ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತೆ, ಯುವಕನ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...