Homeಕರ್ನಾಟಕಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಇಬ್ಬರ ಬಂಧನ

ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ: ಇಬ್ಬರ ಬಂಧನ

- Advertisement -
- Advertisement -

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮತೀಯ ಗೂಂಡಾಗಿರಿ ನಡೆದಿದ್ದು, ಒಂದೇ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ-ಯುವತಿ ಜೊತೆಯಾಗಿ ಹೋಗುವಾಗ ಹಿಂಬಾಲಿಸಿಕೊಂಡು ಹೋಗಿ ತಡೆದು ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಸೋಮವಾರ ರಾತ್ರಿ 8 ಗಂಟೆಯ ವೇಳೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಸ್ಪೋರ್ಟ್ಸ್ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ  ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಇವರನ್ನು ತಡೆದು ನೀವು ಹಿಂದೂ -ಮುಸ್ಲಿಮ್ ಎಲ್ಲಿಗೆ ಹೋಗುತ್ತಿದ್ದೀರಿ? ಎಂದು ನಿಂದಿಸಿ ಗೂಂಡಾಗಿರಿ ನಡೆಸಿದ್ದಾರೆ.

ಈ ವೇಳೆ ಹೊಯ್ಸಳ ವಾಹನದ ಪೊಲೀಸರು ಇಬ್ಬರು ಉದ್ಯೋಗಿಗಳನ್ನು ರಕ್ಷಣೆ ಮಾಡಿ ಪೊಲೀಸ್‌ ಠಾಣೆಗೆ ಕರೆ ತಂದಿದ್ದಾರೆ. ಈ ಕುರಿತು ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 354ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪಾಂಡೇಶ್ವರ ಠಾಣಾ ಪೊಲೀಸರು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಮಂಗಳೂರಿನಲ್ಲಿ ಮತೀಯ ಗೂಂಡಾಗಿರಿ ಪದೇ ಪದೇ ನಡೆಯುತ್ತಿತ್ತು. ಕಾಂಗ್ರೆಸ್‌ ಸರಕಾರ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಕರಾವಳಿಯಲ್ಲಿ ನಡೆಯುತ್ತಿದ್ದ ಮತೀಯ ಗೂಂಡಾಗಿರಿಗೆ ಬ್ರೇಕ್ ಹಾಕುವುದಾಗಿಯೂ ಹೇಳಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೂ ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಮುಂದುವರಿದಿದೆ.

ಕಳೆದ ಜುಲೈನಲ್ಲಿ ಬಂಟ್ವಾಳದಲ್ಲಿ ಪೊಲೀಸ್ ಮೇಲೆಯೇ ಮತೀಯ ಗೂಂಡಾಗಿರಿ ನಡೆಸಿದ ಘಟನೆ ನಡೆದಿತ್ತು. ಬಿ.ಸಿ.ರೋಡ್ ನಿವಾಸಿಯಾಗಿರುವ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಪತ್ನಿ ಮತ್ತು ಸಹೊದರಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅವರ ಮೇಲೆ ಗೂಂಡಾಗಿರಿ ನಡೆಸಲಾಗಿತ್ತು. ಇದು ಕರಾವಳಿಯಲ್ಲಿ ಮತೀಯ ಗೂಂಡಾಗಿರಿ ಎಷ್ಟರ ಮಟ್ಟಿಗೆ ಇದೆ ಎಂಬುವುದಕ್ಕೆ ಸ್ಪಷ್ಟವಾದ ಉದಾಹರಣೆಯಾಗಿದೆ.

ಆ.3ರಂದು ಆಟೋದಲ್ಲಿ ಪ್ರಯಾಣಿಕರನ್ನು ಕೂರಿಸಿಕೊಂಡು ಹೋಗುತ್ತಿದ್ದ ಆಟೋ ಚಾಲಕ ಮಹಮ್ಮದ್ ಆಶಿಕ್‌ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಕರಾವಳಿಯಲ್ಲಿ ಮತೀಯ ಗೂಂಡಾಗಿರಿಯನ್ನು ಸಂಪೂರ್ಣವಾಗಿ ತಡೆಯುವುದಾಗಿ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದರು. ಆದರೆ ಕರಾವಳಿಯಲ್ಲಿ ಮತ್ತೆ- ಮತ್ತೆ ಘಟನೆಗಳು ಮರುಕಳಿಸುತ್ತಿದ್ದು, ಟೀಕೆಗೆ ಕಾರಣವಾಗಿದೆ.

ಇದನ್ನು ಓದಿ: ಗಾಝಾ ಕರಾವಳಿ ಪಟ್ಟಿಗೆ ನೆತನ್ಯಾಹು ಭೇಟಿ: ಇಸ್ರೇಲ್‌ ನಿಯಂತ್ರಣದಲ್ಲಿ ಹಮಾಸ್‌ ಆಳ್ವಿಕೆಯ ಭೂ ಪ್ರದೇಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...