Homeಕರ್ನಾಟಕಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

- Advertisement -
- Advertisement -

ನಿದ್ದೆಯಲ್ಲಿದ್ದ ಯುವತಿಯ ಮೇಲೆ ಕೆಎಸ್‌ಆರ್‌ಟಿಸಿ ಕಂಡಕ್ಟರೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಚಲಿಸುತ್ತಿದ್ದ ಬಸ್‌ನಲ್ಲಿ ಹಾಡ ಹಗಲೆ ಈ ಘಟನೆ ನಡೆದಿದೆ. ಆರೋಪಿಯನ್ನು ಕೆಸ್‌ಆರ್‌ಟಿಸಿ ಕಂಡಕ್ಟರ್ ಬಾಗಲೆಕೋಟೆ ಮೂಲದ ಪ್ರದೀಪ್ ಎಂದು ಗುರುತಿಸಲಾಗಿದ್ದು, ಘಟನೆಯ ವಿಡಿಯೊ ಬಂದ ತಕ್ಷಣವೆ ಅವರನ್ನು ಅಮಾನತು ಮಾಡಲಾಗಿದೆ ಎಂದು ನಾನುಗೌರಿ.ಕಾಂಗೆ ಕೆಎಸ್‌ಆರ್‌ಟಿಸಿ ತಿಳಿಸಿದೆ. ಮಂಗಳೂರು

ಮಂಗಳೂರಿನಿಂದ ಮುಡಿಪು ಮಾರ್ಗದಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ನಗರ ಸಾರಿಗೆಯಲ್ಲಿ ಬುಧವಾರ ಈ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ಸಹ ಪ್ರಯಾಣಿಕರೊಬ್ಬರು ಘಟನೆಯ ವಿಡಿಯೊ ಮಾಡಿದ್ದು, ಅದರಲ್ಲಿ ದುಷ್ಕರ್ಮಿ ಕಂಡಕ್ಟರ್ ಪ್ರದೀಪ್ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ದಾಖಲಾಗಿದೆ. ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ಕೊಣಾಜೆ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, “ಆರೋಪಿ ಕಂಡಕ್ಟರ್ ಹೆಸರು ಪ್ರದೀಪ್ ಎಂದಾಗಿದೆ. ಮಂಗಳೂರಿನಿಂದ ಮುಡಿಪುವಿಗೆ ತೆರಳುವ ಸರ್ಕಾರಿ ಬಸ್‌ನ ವಿಡಿಯೊ ಇದಾಗಿದೆ. ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಈ ವಿಡಿಯೊದ ವರದಿ ನಮಗೆ 10 ಗಂಟೆಗೆ ಬಂದಿದ್ದು, ನಾವು ಅವರನ್ನು 10.15ಕ್ಕೆ ಅಮಾನತು ಮಾಡಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ, ಹಾಗಾಗಿಯೆ ತಕ್ಷಣವೆ ಅವರನ್ನು ಅಮಾನತು ಮಾಡಿದ್ದೇವೆ. ಮುಂದೆ ಅವನ ಮೇಲೆ ವಿಚಾರಣೆ ನಡೆಯಲಿದ್ದು, ವಿಚಾರಣೆಯಲ್ಲಿ ಕಂಡಕ್ಟರ್ ತಪ್ಪಿತಸ್ಥ ಎಂದು ಕಂಡು ಬಂದರೆ ಆತ ನೌಕರಿ ಕೂಡಾ ಕಳೆದುಕೊಳ್ಳಲಿದ್ದಾರೆ” ಎಂದು ಅವರು ಹೇಳಿದ್ದಾರೆ.

ಹಾಗೆ ನೋಡಿದರೆ, ಆತ ಲೈಂಗಿಕ ದೌರ್ಜನ್ಯ ಎಸಗುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕಾಣುತ್ತಿದ್ದು, ಉದ್ದೇಶಪೂರ್ವಕವಾಗಿ ಯುವತಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದಾನೆ. ಹಾಗಾಗಿ ಇದು ಗಂಭೀರ ವಿಚಾರವಾಗಿದ್ದು, ಆತನಿಗೆ ತನ್ನನ್ನು ಸಮರ್ಥಿಸಿಕೊಳ್ಳಲು ಕಾರಣಗಳೆ ಇಲ್ಲ ಎಂದು ರಾಜೇಶ್ ಹೇಳಿದ್ದಾರೆ.

“ಪ್ರಯಾಣಿಕರೊಂದಿಗೆ ಹೇಗೆ ವರ್ತಿಸಬೇಕು ಎಂಬ ಬಗ್ಗೆ ನಮ್ಮ ಸಿಬ್ಬಂದಿಗೆ ಪ್ರತಿದಿನ ನಿರ್ದೇಶನ ನೀಡುತ್ತೇವೆ. ಅದನ್ನು ಡಿಪೋಗಳಲ್ಲಿ ಪುನರಾವರ್ತಿತವಾಗಿ ನೀಡುತ್ತಲೆ ಇರುತ್ತೇವೆ. ಆದರೆ ಎಲ್ಲಾ ಕಡೆಯೂ ಒಬ್ಬರಿಬ್ಬರು ಇಂತವರು ಇದ್ದೇ ಇರುತ್ತಾರೆ. ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಈ ಘಟನೆಯು ವಿಡಿಯೊ ಮಾಡದೆ ಇದ್ದರೆ ನಮಗೆ ತಿಳಿದು ಬರುತ್ತಲೆ ಇರಲಿಲ್ಲ. ಆದ್ದರಿಂದ ಈ ವಿಡಿಯೊ ಮಾಡಿದವರಿಗೆ ಸೆಲ್ಯೂಟ್. ವಿಡಿಯೊ ಸ್ಪಷ್ಟವಾಗಿದ್ದು, ಕಂಡಕ್ಟರ್ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.” ಎಂದು ರಾಜೇಶ್ ಹೇಳಿದ್ದಾರೆ.

ಮಂಗಳೂರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

ಪತ್ನಿಯನ್ನು ಕೊಲೆಗೈದ ಸುಳ್ಳು ಆರೋಪ: 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಸುರೇಶ್ ‘ಗೌರವಯುತ’ ಖುಲಾಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...