Homeಕರ್ನಾಟಕಮಂಗಳೂರು - ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

ಮಂಗಳೂರು – ರಾಮ ಸೇನಾ ದುಷ್ಕರ್ಮಿಗಳ ದಾಳಿಯ ನಂತರ ನಗರಾದಾದ್ಯಂತ ಸಲೂನ್‌ಗಳ ಪರಿಶೀಲನೆಗೆ ಸಜ್ಜಾದ ಪಾಲಿಕೆ!

- Advertisement -
- Advertisement -

ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ನಗರದ ವ್ಯಾಪ್ತಿಯಲ್ಲಿ ಸಲೂನ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳ ಪರವಾನಗಿ ಉಲ್ಲಂಘನೆಯನ್ನು ಪರಿಶೀಲಿಸಲು ಅಧಿಕಾರಿಗಳನ್ನು ಒಳಗೊಂಡ ತಂಡಗಳನ್ನು ರಚಿಸುವುದಾಗಿ ಮೇಯರ್ ಮನೋಜ್ ಕುಮಾರ್ ಹೇಳಿದ್ದಾರೆ. ಬಹುತೇಕ ಸಲೂನ್‌ಗಳು, ಬ್ಯೂಟಿ ಪಾರ್ಲರ್‌ಗಳು, ಸ್ಪಾ, ಮಸಾಜ್ ಸೆಂಟರ್‌ಗಳು ಪಾಲಿಕೆಯಿಂದ ಪರವಾನಗಿ ಪಡೆದಿವೆ ಎಂದು ಮೇಯರ್ ಹೇಳಿದರು.

ಜನವರಿ 23ರ ಗುರುವಾರದಂದು ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಇರುವ ‘ಕಲರ್ಸ್’ ಎಂಬ ಯೂನಿಸೆಕ್ಸ್ ಸಲೂನ್‌ಗೆ ರಾಮ ಸೇನಾ ನಾಯಕ ಪ್ರಸಾದ್ ಅತ್ತಾವರ್ ನೇತೃತ್ವದ ದುಷ್ಕರ್ಮಿಗಳು ನುಗ್ಗಿ ಪೀಠೋಪಕರಣಗಳಿಗೆ ಹಾನಿ, ಗಾಜು ಒಡೆದು, ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ಮತ್ತು ಬೆದರಿಕೆ ಹಾಕಿದ್ದರು. ಈ ಘಟನೆಯ ನಂತರ ಮಹಾನಗರ ಪಾಲಿಕೆ ಈ ಹೇಳಿಕೆ ನೀಡಿದೆ. ಮಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಪರವಾನಗಿ ಷರತ್ತುಗಳ ಉಲ್ಲಂಘನೆಯಾಗಿದೆಯೇ ಎಂದು ಪರಿಶೀಲಿಸುವುದು ನಮ್ಮ ಕರ್ತವ್ಯ. ಅಧಿಕಾರಿಗಳ ತಂಡವು ದಾಖಲೆಗಳನ್ನು ಪರಿಶೀಲಿಸುತ್ತದೆ ಮತ್ತು ಪರವಾನಗಿ ಷರತ್ತುಗಳನ್ನು ಪಾಲಿಸಲಾಗಿದೆಯೇ ಎಂದು ಆವರಣದಲ್ಲಿ ಪರಿಶೀಲಿಸುತ್ತದೆ. ಸಲೂನ್‌ಗಳು ಮತ್ತು ಬ್ಯೂಟಿ ಪಾರ್ಲರ್‌ಗಳ ಹೆಸರಿನಲ್ಲಿ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

“ಅಧಿಕಾರಿಗಳು ಪರವಾನಗಿಯನ್ನು ಯಾವ ಉದ್ದೇಶಕ್ಕಾಗಿ ನೀಡಲಾಗಿದೆ ಎಂಬುದನ್ನು ಪರಿಶೀಲಿಸುತ್ತಾರೆ. ಪರವಾನಗಿ ಹೊಂದಿರುವವರು ಪರವಾನಗಿಗಳನ್ನು ಉಲ್ಲಂಘಿಸುತ್ತಿದ್ದಾರೆಯೇ? ಎಂದು ಪರಿಶೀಲಿಸಲಾಗುತ್ತದೆ. ತಂಡಗಳ ಭೇಟಿಯ ಸಮಯದಲ್ಲಿ ಯಾವುದೇ ಉಲ್ಲಂಘನೆಗಳು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

2017 ರಲ್ಲಿ ಮಂಗಳೂರು ಮೇಯರ್ ಆಗಿದ್ದ ಕವಿತಾ ಸನಿಲ್ ಅವರು ಹಲವಾರು ಅಕ್ರಮ ಮಸಾಜ್ ಕೇಂದ್ರಗಳು, ಸ್ಕಲ್ ಗೇಮ್ ಕೇಂದ್ರಗಳ ಮೇಲೆ ದಾಳಿ ನಡೆಸಿ ಅವುಗಳನ್ನು ಸೀಲ್‌ ಮಾಡಿದ್ದರು.

ಮಾಸಿಕ ಫೋನ್-ಇನ್ ಕಾರ್ಯಕ್ರಮದ ಸಮಯದಲ್ಲಿ, ಬೋಂಡೆಲ್‌ನಿಂದ ಕರೆ ಮಾಡಿದ್ದ ವ್ಯಕ್ತಿಯೊಬ್ಬರು ಈ ಪ್ರದೇಶದಲ್ಲಿ ಹೋಂಸ್ಟೇ ಕಾರ್ಯನಿರ್ವಹಿಸುತ್ತಿದ್ದು, ನಿವಾಸಿಗಳಿಗೆ ಅನಾನುಕೂಲತೆಯನ್ನುಂಟುಮಾಡುತ್ತಿದೆ ಎಂದು ಹೇಳಿದ್ದರು, ಅಧಿಕಾರಿಗಳು ಈ ಸಮಸ್ಯೆಯನ್ನೂ ಪರಿಶೀಲಿಸುತ್ತಾರೆ ಎಂದು ಮೇಯರ್ ಹೇಳಿದ್ದಾರೆ.

ಮಾಹಾನಗರ ಪಾಲಿಕೆ ಹೋಂ ಸ್ಟೇಗಾಗಿ ಕಟ್ಟಡ ಪರವಾನಗಿಗಳನ್ನು ಮಾತ್ರ ನೀಡುತ್ತದೆ ಎಂದು ಮೇಯರ್ ಹೇಳಿದ್ದು, ಇತರ ಪರವಾನಗಿಗಳು ಮತ್ತು ಅನುಮೋದನೆಗಳನ್ನು ಪ್ರವಾಸೋದ್ಯಮ ಇಲಾಖೆಯಿಂದ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ಕೇಂದ್ರೀಯ ವಿವಿಯ ಬಾಕಿ ಇರುವ ಪ್ರಸ್ತಾವನೆಗಳ ಬಗ್ಗೆ ಕ್ರಮಕೈಗೊಳ್ಳಿ – ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...