Homeಕರ್ನಾಟಕಮಂಗಳೂರು | ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

ಮಂಗಳೂರು | ರೌಡಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 8 ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರಿನ ಹೊರವಲಯದಲ್ಲಿ ಕೊಲೆಗೀಡಾದ ರೌಡಿ ಸುಹಾಸ್ ಶೆಟ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. 2022 ರ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯೂ ಆಗಿದ್ದ ರೌಡಿ ಸುಹಾಸ್‌ ಅವರನ್ನು ಗುರುವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಹತ್ಯೆ ಮಾಡಿತ್ತು.

ಘಟನೆಯ ನಂತರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಅಶಾಂತಿಯನ್ನು ಹುಟ್ಟುಹಾಕಿತ್ತು. ಇದಕ್ಕೆ ಪ್ರತಿಕ್ರಿಯೆಯಾಗಿ ಅಧಿಕಾರಿಗಳು ನಿಷೇಧಾಜ್ಞೆಗಳನ್ನು ಜಾರಿ ಮಾಡಿದ್ದರು. ಅದಾಗ್ಯೂ, ಶುಕ್ರವಾರ ರೌಡಿಯ ಮೃತದೇಹ ಮೆರವಣಿಗೆ ವೇಳೆ ಹಿಂಸಾಚಾರ ಕೂಡಾ ಸಂಭವಿಸಿತ್ತು. ಅಲ್ಲದೆ, ಅವಳಿ ಜಿಲ್ಲೆಗಳಲ್ಲಿ ಹಿಂಸಾಚಾರದ ಐದು ಪ್ರತ್ಯೇಕ ಘಟನೆಗಳು ಸಂಭವಿಸಿತ್ತು.

ಕೊಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಪಟ್ಟಿ ಕೆಳಗಿನಂತಿವೆ.

  1. ಶಾಂತಿಗುಡ್ಡೆ ಪೇಜಾವರ ಗ್ರಾಮದ ನಿವಾಸಿ ಅಬ್ದುಲ್ ನಾಸಿರ್ ಅವರ ಪುತ್ರ ಅಬ್ದುಲ್ ಸಫ್ವಾನ್ (29) ಈತ ಚಾಲಕನಾಗಿ ದುಡಿಯುತ್ತಿದ್ದ.
  2. ಬಜ್ಪೆ ನಿವಾಸಿ ಅಬೂಬಕ್ಕರ್ ಅವರ ಪುತ್ರ ನಿಯಾಝ್ (28), ಈತ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ.
  3. ಕೆಂಜಾರು ನಿವಾಸಿ ಅಬ್ದುಲ್ ರಝಾಕ್ ಅವರ ಪುತ್ರ ಮುಹಮ್ಮದ್ ಮುಝಮ್ಮಿಲ್ (32), ಸೌದಿ ಅರೇಬಿಯಾದಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಈತ ಕಳೆದ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದಾನೆ.
  4. ಕಳವಾರು ನಿವಾಸಿ ಮುಹಮ್ಮದ್ ಅವರ ಪುತ್ರ ಕಲಂದರ್ ಶಾಫಿ (31), ಈತ ಬೆಂಗಳೂರಿನಲ್ಲಿ ಸೇಲ್ಸ್ ಮ್ಯಾನ್ ಆಗಿ ದುಡಿಯುತ್ತಿದ್ದ.
  5. ಚಿಕ್ಕಮಗಳೂರಿನ ಕಳಸ ನಿವಾಸಿ ರಾಜೇಶ್ ಅವರ ಪುತ್ರ ರಂಜಿತ್ (19), ಈತ ಚಾಲಕನಾಗಿ ದುಡಿಯುತ್ತಿದ್ದ.
  6. ಚಿಕ್ಕಮಗಳೂರಿನ ಕಳಸ ನಿವಾಸಿ ಮಾರಿ ಮುತ್ತು ಅವರ ಪುತ್ರ ನಾಗರಾಜ್ (20), ಈತ ಶಾಮಿಯಾನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ.
  7. ಜೋಕಟ್ಟೆ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರ ಮುಹಮ್ಮದ್ ರಿಝ್ವಾನ್ (28), ಈತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ.
  8. ಉಮರುಲ್‌ ಫಾರೂಕ್‌ ಅವರ ಪುತ್ರ ಆದಿಲ್‌ ಮೆಹರೂಫ್. ಈತ 2022 ರಲ್ಲಿ ಕೊಲೆಯಾದ ಫಾಝಿಲ್‌ ಅವರ ಸಹೋದರ.

ಯಾರು ಈ ರೌಡಿ ಸುಹಾಸ್ ಶೆಟ್ಟಿ?

42 ವರ್ಷದ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕ್ರಿಮಿನಲ್ ದಾಖಲೆಯಿರುವ ವ್ಯಕ್ತಿಯಾಗಿದ್ದಾರೆ. ಅವರ ವಿರುದ್ಧ ಐದು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ ದಕ್ಷಿಣ ಕನ್ನಡದಲ್ಲಿ ಒಂದು ಮತ್ತು ಮಂಗಳೂರು ನಗರದಲ್ಲಿ ನಾಲ್ಕು ದಾಖಲಾಗಿವೆ. ಒಟ್ಟು ಪ್ರಕರಣಗಳಲ್ಲಿ ಎರಡು ಕೊಲೆ ಪ್ರಕರಣ ಮತ್ತು ದಲಿತ ದೌರ್ಜನ್ಯ ಸೇರಿದಂತೆ ಇತರ ಪ್ರಕರಣಗಳು ಅವರ ಮೇಲೆ ಇದ್ದವು.

2022 ರಲ್ಲಿ ಕಾಟಿಪಳ್ಳದ ಮಂಗಳಪೇಟೆಯ ಮುಸ್ಲಿಂ ಯುವಕ 23 ವರ್ಷದ ಮೊಹಮ್ಮದ್ ಫಾಜಿಲ್ ಹತ್ಯೆಯಲ್ಲಿ ರೌಡಿ ಸುಹಾಸ್‌ನ ಮೊದಲ ಆರೋಪಿಯಾಗಿದ್ದರು.

ಸುಹಾಸ್ ಕೊಲೆ ರಾಜಕೀಯ ಮತ್ತು ಕೋಮು ಅಶಾಂತಿಗೆ ಕಾರಣವಾಗಿದೆ. ಬಿಜೆಪಿ ಪರ ಸಂಘಟನೆಯಾದ ವಿಎಚ್‌ಪಿ ದುಷ್ಕರ್ಮಿ ಸಂಘಟನೆಗಳು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಈ ವೇಳೆ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ಮೇಲೆ ಹಲವಾರು ಕಲ್ಲು ತೂರಾಟದ ಘಟನೆಗಳು ವರದಿಯಾಗಿವೆ. ರೌಡಿ ಸುಹಾಸ್ ಶೆಟ್ಟಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ ದುಷ್ಕರ್ಮಿಗಳು

ಭಯೋತ್ಪಾದನಾ ವಿರೋಧಿ ರ‍್ಯಾಲಿಯಲ್ಲಿ ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ದಾಳಿ ಮಾಡಿದ ಹಿಂದುತ್ವ ಸಂಘಟನೆಗಳ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...