ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿರುವ 20 ಕ್ಕೂ ಹೆಚ್ಚು ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ದ ಜಾಮೀನು ನೀಡಿ ಬುಧವಾರ ಆದೇಶ ಹೊರಡಿಸಿದೆ.
2019 ರ ಡಿಸೆಂಬರ್ 19 ರಂದು ಮಂಗಳೂರಿನಲ್ಲಿ ಸಿಎಎ ವಿರೋಧಿ ಪ್ರತಿಭಟನೆ ವೇಳೆ ಹಿಂಸಾಚಾರ ಮತ್ತು ಪೊಲೀಸರ ಮೇಲಿನ ಹಲ್ಲೆಯ ಆರೋಪದ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದ 20 ಕ್ಕೂ ಹೆಚ್ಚು ಪ್ರತಿಭಟನಾಕಾರರಿಗೆ ಜಾಮೀನು ನೀಡಲಾಗಿದೆ ಎಂದು ಕಾನೂನು ಸುದ್ದಿ ವೆಬ್‌ಸೈಟ್ ಲೈವ್ ಲಾ.ಇನ್ ವರದಿ ಮಾಡಿದೆ.
2019ರ ಡಿಸೆಂಬರ್ 19ರಂದು ಮಧ್ಯಾಹ್ನ ನಗರದ ಸ್ಟೇಟ್ ಬ್ಯಾಂಕ್ ಸಮೀಪ, ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ನಡೆಸಲಾಗಿತ್ತು. ಈ ಸಂದರ್ಭ ಪೊಲೀಸರು ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ನಡೆಸಿದ್ದರು.
ಇದನ್ನೂ ಓದಿ: ಮಂಗಳೂರು ಗೋಲಿಬಾರ್! ಸಂಘಿ ರಿಪಬ್ಲಿಕ್‍ನಲ್ಲಿ ಜಲಿಯನ್ ವಾಲಾಬಾಗ್ ಮರುಸೃಷ್ಟಿ!!
ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಆಲಿಸಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಭಾರತೀಯ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಗಲಭೆಯಲ್ಲಿ ಆರೋಪಿಗಳು ಭಾಗಿಯಾಗಿರುವುದಕ್ಕೆ ಸಾಕ್ಷಿಗಳಿವೆ. ಹಾಗಾಗಿ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು” ಎಂದು ವಾದಿಸಿದ್ದರು.
ಆರೋಪಿಗಳ ಪರ ವಕೀಲರಾದ, ಆರ್.ಬಸಂತ್ ನೇತೃತ್ವದ ತಂಡವು, “ಘಟನೆ ಬಳಿಕ ಹಲವು ತಿಂಗಳುಗಳಿಂದ ರೋಪಿಗಳು ಜೈಲುವಾಸ ಅನುಭವಿಸುತ್ತಿದ್ದು, ಆರೋಪಿಗಳಿಗೆ ಜಾಮೀನು ಮಂಜೂರು ಮಾಡಬೇಕು” ಎಂದು ಕೋರಿದ್ದರು.
ಕರ್ನಾಟಕ ಹೈಕೋರ್ಟ್‌ನ 17 ಫೆಬ್ರವರಿ ಆದೇಶವನ್ನು ಸುಪ್ರೀಂ ಕೋರ್ಟ್ 2020 ರ ಮಾರ್ಚ್ 6 ರಂದು ತಡೆಹಿಡಿದಿತ್ತು.
ಇದನ್ನೂ ಓದಿ: ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟವರು ಅಮಾಯಕರು: ವಿಧಾನಸಭಾ ಅಧಿವೇಶನದಲ್ಲಿ ಕುಮಾರಸ್ವಾಮಿ


