Homeಕರ್ನಾಟಕಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

ಮಂಗಳೂರು ವಿಶ್ವವಿದ್ಯಾಲಯ | 7 ಕೋಟಿ ರೂ. ಖರ್ಚು ಮಾಡಿ ಕಟ್ಟಿದ 2 ಹಾಸ್ಟೆಲ್ ನಾಪತ್ತೆ!

- Advertisement -
- Advertisement -

ಸುಮಾರು 7 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಎರಡು ಹಾಸ್ಟೆಲ್‌ಗಳು ನಾಪತ್ತೆಯಾಗಿರುವ ಘಟನೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ. ತಜ್ಞರ ಸಮಿತಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ. ವಿಶ್ವಿವಿದ್ಯಾಲಯವು ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಡೆಕ್ಕನ್ ಹೆರಾಲ್ಡ್ (DH) ವರದಿ ಮಾಡಿದೆ. ಮಂಗಳೂರು ವಿಶ್ವವಿದ್ಯಾಲಯ

ರಾಷ್ಟ್ರೀಯ ಉಚ್ಛತರ್ ಶಿಕ್ಷಾ ಅಭಿಯಾನ (RUSA-1) ಅಡಿಯಲ್ಲಿ ಬಾಲಕ ಮತ್ತು ಬಾಲಕಿಯರ ಹಾಸ್ಟೆಲ್‌ಗಳ ನಿರ್ಮಾಣಕ್ಕಾಗಿ ಪಡೆದ 7 ಕೋಟಿ ರೂ.ಗಳನ್ನು ಮಂಗಳೂರು ವಿಶ್ವವಿದ್ಯಾಲಯ ದುರುಪಯೋಗಪಡಿಸಿಕೊಂಡಿದೆ ಎಂದು ಪತ್ರಿಕೆ ವರದಿ ಮಾಡಿದೆ. ನಿಧಿ ಬಳಕೆಯ ಪರಿಶೀಲನೆಗಾಗಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿಯು ರಚಿಸಿದ ತಜ್ಞರ ಸಮಿತಿಯ ಭೇಟಿಯ ವೇಳೆ ಇದು ಬಹಿರಂಗವಾಗಿದೆ.

ವಿಶ್ವವಿದ್ಯಾಲಯ ಆವರಣದಲ್ಲಿ ಯಾವುದೇ ಹಾಸ್ಟೆಲ್ ಕಟ್ಟಡಗಳು ಕಾಣಿಸದಿದ್ದರಿಂದ ಪರಿಶೀಲನೆಗಾಗಿ ತೆರಳಿದ್ದ ತಜ್ಞರ ಸಮಿತಿ ಆಘಾತಕ್ಕೊಳಗಾಯಿತು ಎಂದು ವರದಿ ಉಲ್ಲೇಖಿಸಿದೆ. ಈ ವೇಳೆ ಸಮಿತಿಯು ಅಧಿಕಾರಿಗಳನ್ನು ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿದಾಗ, ಅಧಿಕಾರಿಗಳು “ಅಂತರರಾಷ್ಟ್ರೀಯ ಹಾಸ್ಟೆಲ್” ನಿರ್ಮಾಣಕ್ಕಾಗಿ ಹಣವನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಹೇಳುವ ಮೂಲಕ ಸಮಿತಿಯನ್ನು “ತಪ್ಪುದಾರಿಗೆಳೆಯಲು” ಪ್ರಯತ್ನಿಸಿದರು ಎಂದು ಡೆಕ್ಕನ್ ಹೆರಾಲ್ಡ್‌ ವರದಿ ತಿಳಿಸಿದೆ.

ಕುತೂಹಲಕಾರಿ ವಿಚಾರ ಏನೆಂದರೆ, ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸಿದ ಬಳಕೆಯ ಪ್ರಮಾಣಪತ್ರದಲ್ಲಿ, ವಿಶ್ವವಿದ್ಯಾಲಯವು ಎರಡು ಹಾಸ್ಟೆಲ್‌ಗಳನ್ನು ನಿರ್ಮಿಸಿದೆ ಎಂದು ಹೇಳಿಕೊಂಡಿದೆ.

ಘಟನೆ ಹಿನ್ನಲೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಯೋಜನಾ ನಿರ್ದೇಶಕರ (SPD) ಸಭೆಯ ಮುಂದೆಯೂ ಇಡಲಾಯಿತು. ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡ ನಂತರ ವಿಶ್ವವಿದ್ಯಾಲಯ ಅಧಿಕಾರಿಗಳಿಗೆ ಶೋ-ಕಾಸ್ ನೋಟಿಸ್ ನೀಡಲಾಗಿದ್ದು, ಆದಾಗ್ಯೂ, ನೀಡಲಾದ ವಿವರಣೆಯು ತೃಪ್ತಿಕರವಾಗಿಲ್ಲ ಎಂದು ಇಲಾಖೆಯ ಮೂಲಗಳು ತಿಳಿಸಿವೆ ಎಂದು DH ವರದಿ ಹೇಳಿದೆ.

“ವಿಶ್ವವಿದ್ಯಾನಿಲಯವು ದುರುಪಯೋಗಪಡಿಸಿಕೊಂಡ ಹಣವನ್ನು ವಸೂಲಿ ಮಾಡಲು ಮತ್ತು ದಂಡ ವಿಧಿಸಲು ಉನ್ನತ ಶಿಕ್ಷಣ ಮಂಡಳಿ ಶಿಫಾರಸು ಮಾಡಿದೆ. ಹೊಸ ಕಾರ್ಯದರ್ಶಿ ಈಗ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಮತ್ತು ನಾವು ಈ ವಿಷಯವನ್ನು ಅವರ ಮುಂದೆ ಇಡುತ್ತೇವೆ” ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಇಲಾಖೆಯ ಅಧಿಕಾರಿಗಳು ವಿವರಿಸಿದಂತೆ, RUSA ಅಡಿಯಲ್ಲಿ ಬಿಡುಗಡೆಯಾದ ಹಣವನ್ನು ಅವುಗಳನ್ನು ಹಂಚಿಕೆ ಮಾಡಿದ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. RUSA ನಿಧಿಯ ಶೇಕಡಾ 60 ರಷ್ಟು ಕೇಂದ್ರದಿಂದ ಬಂದಿದ್ದರೆ, ರಾಜ್ಯವು ಉಳಿದ ಶೇಕಡಾ 40 ರಷ್ಟು ಕೊಡುಗೆ ನೀಡುತ್ತದೆ.

RUSA-1 ಅನ್ನು 2013 ಮತ್ತು 2017 ರ ನಡುವೆ ಜಾರಿಗೆ ತರಲಾಯಿತು. ಹಣವನ್ನು ಹಂಚಿಕೆ ಮಾಡಿದ ಯೋಜನೆಗಳು ಪೂರ್ಣಗೊಂಡ ನಂತರ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಬಳಕೆಯ ಪ್ರಮಾಣಪತ್ರವನ್ನು ಸಲ್ಲಿಸಲು ಕೇಳಲಾಯಿತು. ಮಂಗಳೂರು ವಿಶ್ವವಿದ್ಯಾಲಯಕ್ಕೆ ಮಂಜೂರು ಮಾಡಲಾದ 7 ಕೋಟಿ ರೂ.ಗಳಲ್ಲಿ, 3.5 ಕೋಟಿ ರೂ. ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ ಮತ್ತು 3.5 ಕೋಟಿ ರೂ. ಬಾಲಕಿಯರ ಹಾಸ್ಟೆಲ್‌ಗಾಗಿ ಖರ್ಚು ಮಾಡಬೇಕಿತ್ತು. ಮಂಗಳೂರು ವಿಶ್ವವಿದ್ಯಾಲಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ಮಹಿಳಾ ಬ್ಯೂಟಿ ಪಾರ್ಲರ್‌ಗಳಲ್ಲಿ ‘ಲವ್ ಜಿಹಾದ್’? ಮುಸ್ಲಿಂ ಪುರುಷರ ನೇಮಕ ನಿಷೇಧಿಸಲು ಬಲಪಂಥೀಯ ಸಂಘಟನೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ನಾಯಕನಹಟ್ಟಿ (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ...

ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ : ಚುನಾವಣೆಗೆ ಸ್ಪರ್ಧಿಸಲು ಅವಕಾಶ ಕೋರಿದ್ದ ಮಹಿಳೆಯ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಿರುವ ಮಹಿಳೆಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ (ಏ.10) ತಿರಸ್ಕರಿಸಿದೆ ಎಂದು ಕಾನೂನು...

ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ....

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...