Homeಕರ್ನಾಟಕಮಂಗಳೂರು | ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಬೃಹತ್ ಪ್ರತಿಭಟನೆ

ಮಂಗಳೂರು | ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ಏಪ್ರಿಲ್ 18ರಂದು ಬೃಹತ್ ಪ್ರತಿಭಟನೆ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್‌ (ತಿದ್ದುಪಡಿ) ಕಾಯ್ದೆ-2025 ವಿರೋಧಿಸಿ ಮಂಗಳೂರಿನಲ್ಲಿ ಏಪ್ರಿಲ್ 18ರ ಶುಕ್ರವಾರದಂದು ಬೃಹತ್ ಪ್ರತಿಭಟನೆಗೆ ರಾಜ್ಯದ ಧಾರ್ಮಿಕ ಸಂಘಟನೆಗಳ ಒಕ್ಕೂಟ ಮುಂದಾಗಿದೆ. ಈ ಹಿಂದೆ ಎನ್‌ಆರ್‌ಸಿ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದ್ದ ಬೆಂಗಳೂರು – ಮಂಗಳೂರು ಹೆದ್ದಾರಿಯ ಪಕ್ಕದಲ್ಲಿರುವ ಅಡ್ಯಾರ್‌ ಎನ್‌ಆರ್‌ಸಿ ಮೈದಾನದಲ್ಲಿ ಈ ಪ್ರತಿಭಟನೆಗೆ ಸಿದ್ದತೆ ಪ್ರಾರಂಭವಾಗಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ.

ಸುನ್ನಿ ಧಾರ್ಮಿಕ ಸಂಘಟನೆಗಳ ಒಕ್ಕೂಟವಾದ ‘ಕರ್ನಾಟಕ ಉಲಮಾ ಒಕ್ಕೂಟ’ದ ಅಡಿಯಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಲಿದ್ದು, ಕರಾವಳಿಯಾದ್ಯಂತ ಈ ಬಗ್ಗೆ ವ್ಯಾಪಕ ಪ್ರಚಾರ ಕಾರ್ಯ ಪ್ರಾರಂಭವಾಗಿದೆ. ಏಪ್ರಿಲ್ 11ರ ಶುಕ್ರವಾರದ ಜುಮಾ ನಮಾಜಿನ ಬಳಿಕ ಎಲ್ಲಾ ಮಸೀದಿಗಳಲ್ಲಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಲು ‘ಕರ್ನಾಟಕ ಉಲಮಾ ಒಕ್ಕೂಟ’ ಕರೆ ನೀಡಿದೆ.

ಮಂಗಳೂರು ಖಾಝಿ ತ್ವಾಖ ಅಹ್ಮದ್ ಮುಸ್ಲಿಯಾರ್ ಮತ್ತು ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯ ರೂಪುರೇಷೆಗಳ ಬಗ್ಗೆ ಶನಿವಾರ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ಲಭ್ಯವಾಗಲಿದೆ ಎಂದು ಮೂಲವೊಂದು ನಾನುಗೌರಿ.ಕಾಂಗೆ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹರಿಯಾಣ| ದಲಿತ ವರನ ಮದುವೆ ಮೆರವಣಿಗೆಗೆ ಅಡ್ಡಿ; 8 ಜನರ ವಿರುದ್ಧ ಪ್ರಕರಣ ದಾಖಲು

ಹರಿಯಾಣ| ದಲಿತ ವರನ ಮದುವೆ ಮೆರವಣಿಗೆಗೆ ಅಡ್ಡಿ; 8 ಜನರ ವಿರುದ್ಧ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...