Homeಮುಖಪುಟಮಂಗಳೂರು: ಜಲೀಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ; ನಾಲ್ವರು ಆರೋಪಿಗಳ ಬಂಧನ

ಮಂಗಳೂರು: ಜಲೀಲ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ; ನಾಲ್ವರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರಿನ ಸುರತ್ಕಲ್ ಸಮೀಪದ ಕೃಷ್ಣಾಪುರದಲ್ಲಿ ಡಿಸೆಂಬರ್ 24ರಂದು ಹತ್ಯೆಯಾದ ಅಬ್ದುಲ್ ಜಲೀಲ್‌ಗೆ ನ್ಯಾಯ ಸಿಗಬೇಕು ಎಂದು ಆಗ್ರಹಿಸಿ ಇಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ಎಸ್‌ಎಸ್‌ಎಫ್, ಎಸ್‌ವೈಎಸ್‌ ಸಂಘಟನೆಗಳು ಕರೆ ನೀಡಿದ್ದ ಪ್ರತಿಭಟನೆಯಲ್ಲಿ ನೂರಾರು ಜನರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಹಾಕುವ ಸರ್ಕಾರವನ್ನು ನಾಡಿನ ಜನತೆ ಎಂದೂ ಕ್ಷಮಿಸುವುದಿಲ್ಲ, ಜಿಲ್ಲೆಯ ಶಾಂತಿಗೆ ಬೆಂಕಿ ಇಟ್ಟು ಮಣ್ಣಿನ ಶಾಪಕ್ಕೆ ಗುರಿಯಾಗಿರುವ ಜನಪ್ರತಿನಿಧಿಗಳೆ ಆಲಿಸಿ ಆಡಳಿತವೆಂಬುದು ಶಾಶ್ವತವಲ್ಲ ಎಂಬ ಘೋಷಣೆಗಳನ್ನು ಕೂಗಲಾಯಿತು.

ನಾಲ್ಕನೇ ಆರೋಪಿ ಲಕ್ಷ್ಮೀಶ ದೇವಾಡಿಗ ಬಂಧನ

ಅಬ್ದುಲ್ ಜಲೀಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇಂದು ನಾಲ್ಕನೇ ಆರೋಪಿ ಲಕ್ಷ್ಮೀಶ ದೇವಾಡಿಗ ಎಂಬಾತನನ್ನು ಬಂಧಿಸಿದ್ದಾರೆ. ಆತ ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಎಂದು ತಿಳಿದುಬಂದಿದೆ.

ಇದುವರೆಗೂ ಕೃಷ್ಣಾಪುರ ನೈತಂಗಡಿ ನಿವಾಸಿ ಶೈಲೇಶ್ ಅಲಿಯಾಸ್ ಶೈಲೇಶ್ ಪೂಜಾರಿ(21), ಉಡುಪಿಯ ಹೆಜಮಾಡಿ ನಿವಾಸಿ ಸುವಿನ್ ಕಾಂಚನ್ ಅಲಿಯಾಸ್ ಮುನ್ನ (24) ಹೆಜಮಾಡಿ ಉಡುಪಿ, ಕೃಷ್ಣಾಪುರ 3ನೇ ಬ್ಲಾಕ್ ನಿವಾಸಿ ಪವನ್ ಅಲಿಯಾಸ್ ಪಚ್ಚು (23) ಎಂಬವರನ್ನು ಮಂಗಳೂರು ಪೊಲೀಸರು ಸೋಮವಾರ ಬಂಧಿಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ಶೈಲೇಶ್ ಪೂಜಾರಿ ರೌಡಿ ಶೀಟರ್ ಆಗಿದ್ದು, ಹಲವು ಪ್ರಕರಣಗಳಲ್ಲಿ ಶೈಲೇಶ್ ಆರೋಪಿಯಾಗಿದ್ದಾನೆ. ಸುವಿನ್ ಕಾಂಚನ್ ಸಹ ಮೂಲ್ಕಿ ಹಾಗು ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು ಈತನ ವಿರುದ್ಧ ಮೂಲ್ಕಿ ಮೈಸೂರು, ಪಡುಬಿದ್ರೆ, ಸುರತ್ಕಲ್ ಠಾಣೆಗಳಲ್ಲಿ ಹಲವು ಪ್ರಕರಣಗಳಿವೆ ಎಂದು ತಿಳಿದುಬಂದಿದೆ.

ಶನಿವಾರ ಕಾಟಿಪಳ್ಳ 4ನೇ ಬ್ಲಾಕ್‌ನ ನೈತಂಗಡಿ ಎಂಬಲ್ಲಿರುವ ಅಬ್ದುಲ್ ಜಲೀಲ್ ಅವರ ಲತೀಫಾ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗವೇ ಚೂರಿಯಿಂದ ಇರಿದು, ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ: ಚೂಪಾದ ಆಯುಧಗಳನ್ನಿಟ್ಟುಕೊಳ್ಳಿ, ವಿರೋಧಿಗಳ ತಲೆ ಕಡಿಯಿರಿ: ಕೋಮು ಪ್ರಚೋದನಾ ಭಾಷಣ ಮಾಡಿದ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...