Homeಕರ್ನಾಟಕಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

ಮಂಗಳೂರು | ಕಾಂಗ್ರೆಸ್‌ಗೆ ಸಾಮೂಹಿಕ ರಾಜೀನಾಮೆ ಘೋಷಿಸಿದ ಪಕ್ಷದ ಮುಸ್ಲಿಂ ಮುಖಂಡರು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಬೆಳವಣಿಗೆಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಗುರುವಾರ ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಮಂಗಳೂರಿನ ಬೋಳಾರದಲ್ಲಿರುವ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದು, ಈ ತೀರ್ಮಾನವನ್ನು ಪ್ರಕಟಿಸಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ವೇದಿಕೆಯಲ್ಲಿ ಮಾತನಾಡುತ್ತಿರುವಾಗ ಕೋಲಾಹಲ ಉಂಟಾದ ಘಟನೆಯೂ ನಡೆಯಿತು. ಜಿಲ್ಲಾ ಘಟಕದ ಕರೆಗೆ ಸ್ಪಂದಿಸಿದ್ದ ಕಾಂಗ್ರೆಸ್‌ನ ನೂರಾರು ಮುಸ್ಲಿಂ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಕಾರ್ಯಕರ್ತರ ಕೋಲಾಹಲದ ನಡುವೆಯೇ ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆಯನ್ನು ಘೋಷಿಸಿದ್ದಾರೆ.

ಈ ನಡುವೆ, ಸಚಿವ ಜಮೀರ್ ಖಾನ್ ಅವರು ಮೊಬೈಲ್‌ನಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಅವರಿಗೆ ಗುರುವಾರ ಬೆಳಗ್ಗೆ ಕರೆ ಮಾಡಿದ್ದರು. ಜೊತೆಗೆ ಸಿಎಂ ಸಿದ್ದರಾಮಯ್ಯ ಅವರು ಕೂಡಾ ಸಾಮೂಹಿಕ ರಾಜೀನಾಮೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿದ್ದರು. ಅದಾಗ್ಯೂ, ಪಕ್ಷ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಬಹಿರಂಗವಾಗಿ ಘೋಷಿಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಶಾಹುಲ್ ಹಮೀದ್ ಅವರು, “ದೇಶದ ಅಲ್ಪಸಂಖ್ಯಾತರ ರಕ್ತದಲ್ಲಿ ಕಾಂಗ್ರೆಸ್ ಹರಿಯುತ್ತಿದೆ. ಎಲ್ಲಾ ಸಂಕಷ್ಟದ ಸಮಯದಲ್ಲೂ ಅಲ್ಪಸಂಖ್ಯಾತರು ಕಾಂಗ್ರೆಸ್ ಜೊತೆ ನಿಂತಿದ್ದಾರೆ. ಆದರೆ ಅಲ್ಪಸಂಖ್ಯಾತರ ಮೇಲೆ ಬಿಜೆಪಿ ಮತ್ತು ಸಂಘಪರಿವಾರ ನಡೆಸುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕಾಂಗ್ರೆಸ್ ಸರಕಾರದಿಂದ ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದ ನೀವು ಕಾಂಗ್ರೆಸ್ ಪಕ್ಷದಲ್ಲಿ ಯಾಕೆ ಇದ್ದೀರಿ ಎಂದು ನಮ್ಮ ತಾಯಿ, ಹೆಂಡತಿ, ಮಕ್ಕಳೇ ಪ್ರಶ್ನಿಸುತ್ತಿದ್ದಾರೆ” ಎಂದು ಅವರು ಬೇಸರ ಹೊರಹಾಕಿದ್ದಾರೆ.

“ಅಬ್ದುಲ್ ರಹ್ಮಾನ್ ಹತ್ಯೆಯ ಬಳಿಕ ನಾವು ಆಸ್ಪತ್ರೆಗೆ ಹೋದಾಗ ಕಾಂಗ್ರೆಸ್ ನಲ್ಲಿರುವ ಮುಸ್ಲಿಮ್ ಕಾರ್ಯಕರ್ತರೇ ನಮ್ಮನ್ನು ತರಾಟೆಗೆ ತೆದುಕೊಳ್ಳುತ್ತಿದ್ದಾರೆ. ನಿಮ್ಮನ್ನು ಹತ್ಯೆ ಮಾಡಬೇಕಿತ್ತು. ನಿಮ್ಮ ಮಕ್ಕಳನ್ನು ಹತ್ಯೆ ಮಾಡಬೇಕಿತ್ತು ಎಂದು ನಮ್ಮ ಕಾರ್ಯಕರ್ತರೇ ನಮ್ಮ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಮುಸ್ಲಿಮರಿಗೆ ರಕ್ಷಣೆ ನೀಡಲು ಸಾಧ್ಯವಾಗದಿದ್ದರೆ ನೀವು ಕಾಂಗ್ರೆಸ್‌ನಲ್ಲಿ ಯಾಕೆ ಇದ್ದೀರಿ. ರಾಜೀನಾಮೆ ಕೊಟ್ಟು ಹೊರ ಬನ್ನಿ ಎಂದು ಸಮುದಾಯದಲ್ಲಿ ಒತ್ತಡ ಬರುತ್ತಿದೆ. ಈ ಹಿನ್ನೆಲೆಯಲ್ಲಿ ನಾವು ರಾಜೀನಾಮೆಗೆ ನಿರ್ಧಾರ ಮಾಡಿದ್ದೆವು. ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್‌ನ ಎಲ್ಲಾ ಮುಸ್ಲಿಮ್ ಕಾರ್ಯಕರ್ತರು, ನಾಯಕರು ಬೆಂಬಲ ಸೂಚಿಸಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

“ಬೂತ್‌ ಮಟ್ಟದಿಂದ ರಾಜ್ಯಮಟ್ಟದವರೆಗೆ ಇರುವ ಜಿಲ್ಲೆಯ ಎಲ್ಲಾ ಮುಸ್ಲಿಮ್ ಪದಾಧಿಕಾರಿಗಳು ಸಾಮೂಹಿಕ ರಾಜೀನಾಮೆ ಘೋಷಿಸುವ ಹಿನ್ನೆಲೆಯಲ್ಲಿ ಇಲ್ಲಿ ಇಂದು ಸಭೆ ಕರೆಯಲಾಗಿದೆ. ನಮ್ಮ ಸರಕಾರ ನಮ್ಮ ನಾಯಕರು ಇನ್ನಾದರೂ ಎಚ್ಚೆತ್ತು ಕೊಳ್ಳುತ್ತದೆಯೋ ಕಾದು ನೋಡಲು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ನಮ್ಮ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಹಾಗಾಗಿ, ಎಲ್ಲರೂ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದೇವೆ” ಎಂದು ಶಾಹುಲ್ ಹಮೀದ್ ತಿಳಿಸಿದ್ದಾರೆ.

“ನಮ್ಮನ್ನು ನಾಯಿ, ಎಸಿಯಲ್ಲಿ ಕೂತುಕೊಳ್ಳುವವರು ಎಂದು ನಿಂದಿಸಿದ್ದಾರೆ. ಗೃಹ ಸಚಿವ ಬಂದರೂ, ಉಸ್ತುವಾರಿ ಸಚಿವ ಬಂದರೂ ಜಿಲ್ಲೆಯಲ್ಲಿ ಶಾಂತಿ ನೆಲೆಸುತ್ತಿಲ್ಲ” ಎಂದು ಶಾಹುಲ್ ಹಮೀದ್ ನೋವು ತೋಡಿಕೊಂಡಿದ್ದಾರೆ. ಮಂಗಳೂರು | ಕಾಂಗ್ರೆಸ್‌ಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ಕೀನ್ಯಾದ ಕ್ರಾಂತಿಕಾರಿ ಲೇಖಕ, ಹೋರಾಟಗಾರ ಗೂಗಿ ವಾ ಥಿಯೊಂಗೊ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...