Homeಕರ್ನಾಟಕಮಂಗಳೂರು | ವಕ್ಫ್‌ ತಿದ್ದುಪಡಿ ವಿರೋಧಿಸಿ ಮುಸ್ಲಿಂ ಸಂಘಟನೆಗಳಿಂದ ನಾಳೆ ಬೃಹತ್ ರ‍್ಯಾಲಿ

ಮಂಗಳೂರು | ವಕ್ಫ್‌ ತಿದ್ದುಪಡಿ ವಿರೋಧಿಸಿ ಮುಸ್ಲಿಂ ಸಂಘಟನೆಗಳಿಂದ ನಾಳೆ ಬೃಹತ್ ರ‍್ಯಾಲಿ

- Advertisement -
- Advertisement -

ಕೇಂದ್ರ ಸರ್ಕಾರದ ವಿವಾದಿತ ವಕ್ಫ್‌ ತಿದ್ದುಪಡಿ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಮುಸ್ಲಿಂ ಸಂಘಟನೆಗಳು ಮಾರ್ಚ್‌ 9ರ ಭಾನುವಾರ ಮಂಗಳೂರಿನಲ್ಲಿ ಬೃಹತ್ ಕಾಲ್ನಡಿಗೆ ಜಾಥಾ ಹಮ್ಮಿಕೊಂಡಿದೆ. ಪ್ರಸ್ತುತ ಜಾಥಾವನ್ನು ಎರಡು ಪ್ರಬಲ ಸುನ್ನೀ ಮುಸ್ಲಿಂ ಗುಂಪುಗಳಾದ ಎಪಿ ಮತ್ತು ಇಕೆ ವಿಭಾಗವು ಒಗ್ಗಟ್ಟಾಗಿ ಮುನ್ನಡೆಸಲಿದೆ. ಮಂಗಳೂರು

ಎರಡು ಪ್ರಬಲ ಸುನ್ನೀ ಮುಸ್ಲಿಂ ಗುಂಪುಗಳ ಖಾಝಿಗಳಾದ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಮಾಣಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಪ್ರತಿಭಟನಾ ಜಾಥಾದಲ್ಲಿ ಎರಡೂ ವಿಭಾಗಗಳ ವಿವಿಧ ಸಂಘಟನೆಗಳ ಕಾರ್ಯರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಆಯೋಜಕರು ಹೇಳಿದ್ದಾರೆ. ಮಂಗಳೂರು

ಬೆಳಿಗ್ಗೆ 9.30ಕ್ಕೆ ಮಂಗಳೂರಿನ ಹಂಪನಕಟ್ಟೆಯಿಂದ ಪ್ರಾರಂಭಗೊಳ್ಳುವ ಕಾಲ್ನಡಿಗೆ ಜಾಥಾ ಕ್ಲಾಕ್ ಟವರ್‌ವರೆಗೆ ಸಾಗಲಿದೆ. ಎರಡೂ ವಿಭಾಗಗಳ ಧಾರ್ಮಿಕ ವಿದ್ವಾಂಸರು, ಸಂಘಟನಾ ಪ್ರಮುಖರು ಜಾಥಾದ ನೇತೃತ್ವ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

 

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಧಾರ್ಮಿಕ ವಿದ್ವಾಂಸ, ಪತ್ರಕರ್ತ ಕೆ.ಎಂ. ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, “ಸಾಮಾಜಿಕ ಅಗತ್ಯಗಳಿಗಾಗಿ ಮುಸ್ಲಿಂ ಸಮುದಾಯವು ಅಲ್ಲಾಹನ ಹೆಸರಿನಲ್ಲಿ ಸಮರ್ಪಿಸಿರುವ ಸ್ವತ್ತುಗಳನ್ನು ಸಂರಕ್ಷಿಸಲು ಬ್ರಿಟಿಷರ ಕಾಲದಿಂದಲೂ ವಕ್ಫ್ ಬೋರ್ಡ್ ವ್ಯವಸ್ಥೆ ಜಾರಿಯಲ್ಲಿದೆ. ಆ ಮೂಲಕ ವಕ್ಫ್ ಸ್ವತ್ತುಗಳನ್ನು ಸಂರಕ್ಷಿಸಲು ಮತ್ತು ಬಳಸಲು ವ್ಯವಸ್ಥೆ ಮಾಡಲಾಗುತ್ತಿದೆ. ಇದೀಗ ಕೇಂದ್ರ ಸರ್ಕಾರವು ಹೊಸ ತಿದ್ದುಪಡಿ ಮಸೂದೆಯ ಮೂಲಕ ವಕ್ಫ್ ಸ್ವತ್ತುಗಳನ್ನು ಕಬಳಿಸುವ ಸಂಚು ನಡೆಸುತ್ತಿದೆ” ಎಂದು ಹೇಳಿದ್ದಾರೆ.

ಪ್ರಸ್ತುತ ಮಸೂದೆಯು ಮುಸ್ಲಿಮರಲ್ಲಿ ತೀವ್ರವಾದ ಆತಂಕವನ್ನು ಉಂಟು ಮಾಡಿದ್ದು, ಆದ್ದರಿಂದ ಈ ಮಸೂದೆಯನ್ನು ಕೂಡಲೇ ಕೇಂದ್ರ ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ಈ ಜಾಥಾದ ಮೂಲಕ ಆಗ್ರಹಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ರಾಜ್ಯ ಸರ್ಕಾರಕ್ಕೆ ಶುಶ್ರೂಷಾಧಿಕಾರಿಗಳ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...