Homeಕರ್ನಾಟಕದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ:...

ದಕ್ಷಿಣ ಕನ್ನಡ | ಸಂಘಪರಿವಾರದ ದುಷ್ಕರ್ಮಿಗಳ ಸಹಿತ 36 ಜನರ ಗಡೀಪಾರಿಗೆ ಮುಂದಾದ ಪೊಲೀಸ್ ಇಲಾಖೆ: ಪಟ್ಟಿ ಬಿಡುಗಡೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕೋಮು ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪೊಲೀಸ್ ಮುಂದಾಗಿದ್ದು, ಸುಮಾರು 36 ಮಂದಿ ರೌಡಿಗಳನ್ನು ಗಡೀಪಾರು ಮಾಡಲು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ವರದಿಯಾಗಿದೆ.ದಕ್ಷಿಣ ಕನ್ನಡ | ಸಂಘಪರಿವಾರದ

ಈ ಬಗ್ಗೆ ಸುಮಾರು 36 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, “ಒಟ್ಟು 36 ಆಸಾಮಿಗಳನ್ನು ಗಡೀಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿದ್ದ ಯುವತಿ ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಂಘಪರಿವಾರದ ಅರುಣ್ ಕುಮಾರ್ ಪುತ್ತಿಲ, ಭರತ್ ಕುಮ್ದೇಲು ಸೇರಿದಂತೆ ಒಟ್ಟು 36 ಜನರ‌ ಪಟ್ಟಿಯನ್ನು ಪೊಲೀಸ್ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ.

ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ. ಕರ್ನಾಟಕ ಪೊಲೀಸ್ ಅಧಿನಿಯಮ, 1963 ಕಲಂ: 58ರಡಿ ಈ ನೋಟಿಸ್ ಜಾರಿ ಮಾಡಲಾಗಿದೆ. ಅರುಣ್ ಕುಮಾ‌ರ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್‌ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಈಗಾಗಲೇ ಪೊಲೀಸರು ಸೂಚನೆ ನೀಡಿದ್ದರು.

ಇದರ ಬೆನ್ನಲ್ಲೇ ಪೊಲೀಸ್‌ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ, ಬೆಳ್ಳಾರೆ, ವಿಟ್ಲ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ದುಷ್ಕರ್ಮಿಗಳನ್ನು, ಸಂಘಪರಿವಾರದಲ್ಲಿ ಗುರುತಿಸಿಕೊಂಡವರನ್ನು ಪಟ್ಟಿ ರೆಡಿ ಮಾಡಿದ್ದಾರೆ. ಈಗಾಗಲೆ ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ.

ವಿವಿಧ ಪೊಲೀಸ್ ಠಾಣೆಗಳಿಂದ ಗಡಿಪಾರು ಮಾಡಲು ಪ್ರಸ್ತಾವನೆ ಸಲ್ಲಿಸಲಾದ ಅಸಾಮಿಗಳ ಪಟ್ಟಿ ಕೆಳಗಿನಂತಿವೆ.

  1. ಬಂಟ್ವಾಳ ನಗರ ಠಾಣೆ: ಹಸೈನಾರ್, ಮುಹಮ್ಮದ್ ಸಫ್ವಾನ್, ರಾಜು ಯಾನೆ ರಾಜೇಶ್, ಭುವಿ ಯಾನೆ ಭುವಿತ್ ಶೆಟ್ಟಿ.
  2. ಬಂಟ್ವಾಳ ಗ್ರಾಮಾಂತರ ಠಾಣೆ: ಪವನ್ ಕುಮಾರ್, ಚರಣ್ ಯಾನೆ ಚರಣ್ ರಾಜ್, ಅಬ್ದುಲ್ ಲತೀಫ್, ಮುಹಮ್ಮದ್ ಅಶ್ರಫ್, ಮೊಯ್ದಿನ್ ಅದ್ನಾನ್ ಯಾನೆ ಅದ್ದು, ಭರತ್ ರಾಜ್ ಬಿ ಯಾನೆ ಭರತ್ ಕುಮ್ಡೇಲು.
  3. ವಿಟ್ಲ ಪೊಲೀಸ್ ಠಾಣೆ: ಗಣೇಶ ಯಾನೆ ಗಣೇಶ ಪೂಜಾರಿ, ಅಬ್ದುಲ್ ಖಾದರ್ ಯಾನೆ ಶೌಕತ್, ಚಂದ್ರಹಾಸ.
  4. ಪೂಂಜಾಲಕಟ್ಟೆ ಠಾಣೆ: ಅಶ್ರಫ್ ಬಿ ಯಾನೆ ಗರಗಸ ಅಶ್ರಫ್.
  5. ಬೆಳ್ತಂಗಡಿ ಠಾಣೆ: ಮನೋಜ್ ಕುಮಾರ್, ಮಹೇಶ ಶೆಟ್ಟಿ ತಿಮರೋಡಿ.
  6. ಪುತ್ತೂರು ನಗರ ಠಾಣೆ: ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ ಯಾನೆ ಅಬ್ದುಲ್ ಹಕೀಂ, ಅಜಿತ್ ರೈ, ಮನೀಶ್ ಎಸ್., ಅಬ್ದುಲ್ ರಹಿಮಾನ್, ಕೆ.ಅಝೀಝ್.
  7. ಪುತ್ತೂರು ಗ್ರಾಮಾಂತರ ಠಾಣೆ: ಕಿಶೋರ್, ರಾಕೇಶ್ ಕೆ., ನಿಶಾಂತ್ ಕುಮಾರ್.
  8. ಕಡಬ ಠಾಣೆ: ಮುಹಮ್ಮದ್ ನವಾಝ್.
  9. ಉಪ್ಪಿನಂಗಡಿ ಠಾಣೆ: ಸಂತೋಷ್ ಕುಮಾರ್ ರೈ ಯಾನೆ ಸಂತು ಅಡೆಕ್ಕಲ್, ಜಯರಾಮ, ಸಂಶುದ್ದೀನ್, ಸಂದೀಪ್, ಮುಹಮ್ಮದ್ ಶಾಕಿರ್, ಅಬ್ದುಲ್ ಅಝೀಝ್ ಯಾನೆ ಕರಾಯ ಅಝೀಝ್.
  10. ಸುಳ್ಯ ಠಾಣೆ: ಲತೇಶ್ ಗುಂಡ್ಯ, ಮನೋಹರ ಯಾನೆ ಮನು.
  11. ಬೆಳ್ಳಾರೆ ಠಾಣೆ: ಪ್ರಸಾದ್, ಶಮೀರ್ ಕೆ. ದಕ್ಷಿಣ ಕನ್ನಡ | ಸಂಘಪರಿವಾರದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ಸಿಕ್ಕಿಂ | ಸೇನಾ ಶಿಬಿರದಲ್ಲಿ ಭೂಕುಸಿತ, ಮೂವರು ಸೈನಿಕರು ಸಾವು, 6 ಮಂದಿ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...