Homeಕರ್ನಾಟಕಮಂಗಳೂರು | ಸಲೂನ್‌ ದಾಳಿ ಪ್ರಕರಣ : 14 ಜನರ ಬಂಧನ

ಮಂಗಳೂರು | ಸಲೂನ್‌ ದಾಳಿ ಪ್ರಕರಣ : 14 ಜನರ ಬಂಧನ

- Advertisement -
- Advertisement -

ಮಂಗಳೂರಿನಲ್ಲಿ ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿ, ಸಿಬ್ಬಂದಿಗೆ ಬೆದರಿಕೆ ಹಾಕಿದ್ದ ಹಿಂದುತ್ವ ಸಂಘಟನೆ ರಾಮಸೇನಾದ 14 ಮಂದಿಯನ್ನು ಗುರುವಾರ (ಜ.23) ಪೊಲೀಸರು ಬಂಧಿಸಿದ್ದಾರೆ.

ಫರಂಗಿಪೇಟೆಯ ಹರ್ಷರಾಜ್‌ ಅಲಿಯಾಸ್‌ ಹರ್ಷಿತ್‌, ವಾಮಂಜೂರು ಮೂಡುಶೆಡ್ಡೆಯ ಮೋಹನದಾಸ್ ಅಲಿಯಾಸ್‌ ರವಿ, ಕಾಸರಗೋಡು ಉಪ್ಪಳದ ಪುರಂದರ, ವಾಮಂಜೂರು ಅಂಬೇಡ್ಕರ್‌ ನಗರದ ಸಚಿನ್, ಉಳಾಯಿಬೆಟ್ಟುವಿನ ರವೀಶ್‌, ಬೆಂಜನಪದವು ಶಿವಾಜಿನಗರದ ಸುಕೇಶ್‌, ವಾಮಂಜೂರಿನ ಅಂಕಿತ್‌, ಮೂಡುಶೆಡ್ಡೆ ಶಿವಾಜಿನಗರದ ಕಲಿ ಮುತ್ತು, ದೀಪಕ್‌, ಪ್ರದೀಪ್ ಪೂಜಾರಿ, ಬೊಂಡಂತಿಲ ತಾರಿಗುಡ್ಡೆಯ ಅಭಿಲಾಷ್‌, ನೀರುಮಾರ್ಗ ಪೆದಮಲೆ ಸರಿಪಲ್ಲದ ವಿಘ್ನೇಶ್‌, ನಗರದ ಮಂಕಿಸ್ಟ್ಯಾಂಡ್‌ನ ಶರಣ್‌ರಾಜ್ (ಕ್ಯಾಮರಾಮ್ಯಾನ್) ಹಾಗೂ ನಗರದ ನಿದ್ದಲೆಯ ಪ್ರಸಾದ್ ಅತ್ತಾವರ ಬಂಧಿತರು.

ಇವರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 329(2) (ಅಕ್ರಮ ಪ್ರವೇಶ), ಸೆಕ್ಷನ್ 324(5) (ಸೊತ್ತುಗಳ ನಾಶ), ಸೆಕ್ಷನ್‌ 74 (ಮಹಿಳೆಯರ ಮೇಲೆ ಹಲ್ಲೆ, ಮಾನಭಂಗಯತ್ನ), ಸೆಕ್ಷನ್ 351 (3) (ಕ್ರಿಮಿನಲ್ ಬೆದರಿಕೆ ಒಡ್ಡುವುದು), ಸೆಕ್ಷನ್ 115 (2) (ಹಲ್ಲೆ ನಡೆಸುವುದು), ಸೆಕ್ಷನ್ 109 (ಕೊಲೆಯತ್ನ), ಸೆಕ್ಷನ್ 352 (ಅಪಮಾನಗೊಳಸಿ ಶಾಂತಿಭಂಗ ಮಾಡುವುದು) ಹಾಗೂ ಸೆಕ್ಷನ್ 190ರ (ಅಕ್ರಮ ಕೂಟ ರಚಿಸಿ ಅಪರಾಧ ಕೃತ್ಯ ನಡೆಸುವುದು) ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ನಗರದ ಬಿಜೈ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಕಲರ್ಸ್ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ದಾಂಧಲೆ ನಡೆಸಿದ್ದರು. ಈ ವೇಳೆ ಮಹಿಳೆಯರು ಸೇರಿದಂತೆ ಸಲೂನ್‌ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಸಲೂನ್‌ನ ಮಾಲೀಕ ನಗರದ ಆನೆಗುಂಡಿಯ ಸುಧೀರ್ ಶೆಟ್ಟಿ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಬರ್ಕೆ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಕ್ಯಾಮರಾಮ್ಯಾನ್ ಬಂಧನ : ಆರೋಪಿಗಳು ದಾಳಿ ಮಾಡಲು ತೆರಳಿದ್ದ ವೇಳೆ ಅವರ ಜೊತೆ ಸ್ಥಳೀಯ ಟಿವಿ ವಾಹಿನಿಯೊಂದರ ಕ್ಯಾಮರಾಮ್ಯಾನ್ ಶರಣ್‌ರಾಜ್‌ನನ್ನೂ ಕರೆದುಕೊಂಡು ಹೋಗಿದ್ದರು. ಆತ, ದಾಳಿಯ ವಿಡಿಯೊ ಚಿತ್ರೀಕರಿಸಿದ್ದಾನೆ. ಆತನನ್ನೂ ಬಂಧಿಸಲಾಗಿದೆ. ಈ ಹಿಂದೆ ಪಡೀಲ್‌ನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ದಾಳಿ ಪ್ರಕರಣದಲ್ಲೂ ಈತ ಬಂಧನಕ್ಕೊಳಗಾಗಿದ್ದ. ಆ ಪ್ರಕರಣದಲ್ಲಿ ದೋಷಮುಕ್ತನಾಗಿದ್ದ ಎಂದು ವರದಿಯಾಗಿದೆ.

ಮಂಗಳೂರು ಸಲೂನ್‌ ದಾಳಿ ಪ್ರಕರಣ | ಪ್ರಮುಖ ಆರೋಪಿ ಪ್ರಸಾದ್ ಅತ್ತಾವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...