Homeಮುಖಪುಟಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

- Advertisement -
- Advertisement -

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಕಾರ್ಯಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತು ಇತರ ಪದಾಧಿಕಾರಿಗಳು ಪ್ರಶ್ನಿಸಿದ್ದರು.

ಈ ವೇಳೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಾಲಿಕೆಯ ವಲಯ ಆಯುಕ್ತರು (ಪ್ರಭಾರ) ಭಾರತಿ ಅವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ, ಸಂಘದ ಪರವಾಗಿ ಹಿರಿಯ ವಕೀಲ ಎಸ್. ಬಾಲನ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ ಕ್ರಿಮಿನಲ್ ನಡಾವಳಿಗೆ ತಡೆಯಾಜ್ಞೆ ಕೋರಿದ್ದರು.

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಬಾಲನ್ ಮತ್ತು ವಕೀಲೆ ರಕ್ಷಿತಾ ಸಿಂಗ್ ಅವರ ಮುಖ್ಯ ಅಂಶಗಳು:

ಮಹಾನಗರ ಪಾಲಿಕೆಯು ಯಾವುದೇ ಪೂರ್ವಭಾವಿ ನೋಟಿಸ್ ನೀಡದೆ ಹಾಗೂ ವಿಚಾರಣೆಗೆ ಅವಕಾಶ ಕಲ್ಪಿಸದೆ ಧ್ವಂಸ ಕಾರ್ಯಾಚರಣೆ ನಡೆಸಿದೆ. ಇದು ನೈಸರ್ಗಿಕ ನ್ಯಾಯದ ತತ್ವಕ್ಕೆ ವಿರುದ್ಧವಾಗಿದೆ.

ಅಧಿಕಾರಿಗಳು ಸುಪ್ರೀಂ ಕೋರ್ಟ್‌ನ Maniyar Iliyaz v. P. Ayyappan ತೀರ್ಪನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಆ ತೀರ್ಪು ಪಾದಚಾರಿಗಳಿಗೆ ಸೂಕ್ತ ಮೂಲಸೌಕರ್ಯ ಒದಗಿಸುವುದಕ್ಕೆ ಸಂಬಂಧಿಸಿದೆಯೇ ಹೊರತು, ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಅಥವಾ 2014ರ ಕಾಯ್ದೆಯಿಂದ ವಿನಾಯಿತಿ ಪಡೆಯಲು ಅವಕಾಶ ನೀಡುವುದಿಲ್ಲ.

ಘಟನೆಯ ವೀಡಿಯೋದಲ್ಲಿ ಇಮ್ತಿಯಾಝ್ ಅವರು ಕಾನೂನುಬದ್ಧ ಪ್ರಕ್ರಿಯೆ ಅನುಸರಿಸುವಂತೆ ಮನವಿ ಮಾಡುತ್ತಿರುವುದು ಸ್ಪಷ್ಟವಾಗಿದೆ. ಯಾವುದೇ ಹಲ್ಲೆ ನಡೆದಿಲ್ಲ. ಸಂಘವನ್ನು ಸಭೆಗೆ ಆಹ್ವಾನಿಸಿ ಮಾನ್ಯತೆ ನೀಡಿದ ಪಾಲಿಕೆಯೇ, ವ್ಯಾಪಾರಿಗಳ ಹಕ್ಕು ಪ್ರತಿಪಾದಿಸಿದ ಪದಾಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ಕಾನೂನಿನ ದುರುಪಯೋಗ.

ಹೈಕೋರ್ಟ್ ಮಹತ್ವದ ಆದೇಶ

ವಾದ ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಸುಪ್ರೀಂ ಕೋರ್ಟ್ ಆದೇಶವು ರಸ್ತೆಗಳ ಜೊತೆಗೆ ಸೂಕ್ತ ಫುಟ್‌ಪಾತ್ ಇರಬೇಕು ಎಂದಷ್ಟೇ ಹೇಳಿದೆ. ಸುಪ್ರೀಂ ಕೋರ್ಟ್ ಎಂದಿಗೂ ಬೀದಿ ಬದಿ ವ್ಯಾಪಾರಸ್ಥರ ಹಿತರಕ್ಷಣಾ ಕಾಯ್ದೆಯನ್ನು ರದ್ದುಗೊಳಿಸಿಲ್ಲ. ಹಾಗಾಗಿ ವ್ಯಾಪಾರಿಗಳಿಗೆ ಬೀದಿಯಲ್ಲಿ ವ್ಯಾಪಾರ ಮಾಡುವ ಹಕ್ಕಿದೆ. ಪುನರ್ವಸತಿಯ ಎಲ್ಲಾ ವ್ಯವಸ್ಥೆ ಹಾಗೂ ಕಾನೂನು ಪ್ರಕ್ರಿಯೆಯನ್ನು ಪಾಲಿಸಿ ಮಾತ್ರ ತೆರವುಗೊಳಿಸಬೇಕು ಎಂದು ಸರ್ಕಾರ ಮತ್ತು ಪಾಲಿಕೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...