ರೌಡಿ ಸುಹಾಸ್ ಶೆಟ್ಟಿಯ ಕೊಲೆಯನ್ನು ಬಿಜೆಪಿ ಮತ್ತು ಅದರ ದುಷ್ಕರ್ಮಿ ಸಂಘಟನೆಗಳು ಕೋಮು ಆಯಾಮ ನೀಡಿದ ನಂತರ ಉದ್ವಿಗ್ನಗೊಂಡಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ತಲವಾರು ದಾಳಿ ನಡೆದಿದೆ. ಸಂಜೆ ವೇಳೆ ನಾಲ್ವರು ವ್ಯಕ್ತಿಗಳ ಗುಂಪೊಂದು ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಬಂಟ್ವಾಳ ಬಳಿಯ ಪಾಣೆಮಂಗಳೂರಿನ ಅಕ್ಕರಂಗಡಿ ಬಸ್ ನಿಲ್ದಾಣದ ಹತ್ತಿನ ನಡೆದಿದೆ. ದಾಳಿಕೋರರು ಯುವಕನನ್ನು ಗಾಯಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಮಂಗಳೂರು | ಯುವಕನ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ
ಗಾಯಾಳುವನ್ನು ಪೈಂಟಿಂಗ್ ಕೆಲಸ ಮಾಡುವ ಹಮೀದ್ (38) ಎಂದು ಗುರುತಿಸಲಾಗಿದೆ. ಅವರ ಕೈಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ನಿವಾಸಿಗಳು ಅವರನ್ನು ತಕ್ಷಣ ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಹಮೀದ್ ಅಲ್ಲಿರುವುದನ್ನು ಗಮನಿಸಿ ಜನಸಂಚಾರ ವಿರಳವಾದ ಬಳಿಕ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ವರದಿಗಳು ಹೇಳಿವೆ.
ರೌಡಿ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ನಂತರ ಸಹಜ ಸ್ಥಿತಿಗೆ ಮರಳುತ್ತಿದ್ದ ದಕ್ಷಿಣ ಕನ್ನಡದಲ್ಲಿ ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಕಳವಳ ಮೂಡಿಸಿದೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ ಎಂದು ವರದಿಯಾಗಿದ್ದು, ಸ್ಥಳೀಯ ಅಧಿಕಾರಿಗಳು ಇದರ ಹಿಂದಿನ ಕಾರಣಗಳನ್ನು ನಿರ್ಧರಿಸಲು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ ಎಂದು ದೈಜಿವಲ್ಡ್ ವರದಿ ಹೇಳಿದೆ.
ನಗರ ಪೊಲೀಸ್ ಠಾಣೆ ಎಸ್.ಐ. ರಾಮಕೃಷ್ಣ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿಂಸಾತ್ಮಕ ಘಟನೆಗೆ ಕಾರಣವೇನು ಎಂಬುದನ್ನು ಅರ್ಥಮಾಡಿಕೊಳ್ಳಲು ಅಧಿಕಾರಿಗಳು ಸುಳಿವುಗಳನ್ನು ಹುಡುಕುತ್ತಿದ್ದಾರೆ ಎಂದು ವರದಿ ತಿಳಿಸಿದೆ. ಗಾಯಾಳು ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು | ಯುವಕನ ಮೇಲೆ ದುಷ್ಕರ್ಮಿಗಳಿಂದ ತಲವಾರು ದಾಳಿ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ
ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

