Homeಕರ್ನಾಟಕಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

ಮಂಗಳೂರು | ದುಷ್ಕರ್ಮಿಗಳಿಂದ ಯುವಕರ ಮೇಲೆ ತಲವಾರು ದಾಳಿ, ಒಬ್ಬ ಸಾವು

- Advertisement -
- Advertisement -

ಇತ್ತಿಚೆಗಷ್ಟೆ ಕೋಮು ಘಟನೆಗೆ ನಲುಗಿ ಹೋಗಿದ್ದ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಅಪರಾಹ್ನ ಮತ್ತೊಂದು ಯುವಕನ ಕೊಲೆ ನಡೆದಿದ್ದು, ನಾಗರಿಕರನ್ನು ಆತಂಕ ಮೂಡಿಸಿದೆ. ಜಿಲ್ಲೆಯ ಬಂಟ್ವಾಳ ಬಳಿಯ ಕೊಲ್ತಮಜಲು ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಪಿಕ್‌ಅಪ್ ವಾಹನದಲ್ಲಿದ್ದ ಇಬ್ಬರ ಮೇಲೆ ತಲವಾರು ದಾಳಿ ನಡಸಿದ್ದು, ಈ ವೇಳೆ ಒಬ್ಬ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಘಟನೆಯಲ್ಲಿ ಮೃತಪಟ್ಟವರನ್ನು‌ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದ್ದು, ಗಾಯಗೊಂಡ ಯುವಕ ಕಲಂದರ್ ಶಾಫಿ ಎಂದು ತಿಳಿದು ಬಂದಿದೆ. ಇಬ್ಬರು ಯುವಕರ ಕೊಲ್ತಮಜಲು ಬಳಿ ಪಿಕ್‌ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗೆ ನಾಗರಿಕರು ಸೇರಿದಂತೆ ಜನಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಇದಕ್ಕೆಲ್ಲಾ ಕಾರಣ ರಾಜ್ಯದ ಸರ್ಕಾರ ಮತ್ತು ಜಿಲ್ಲೆಯ ಪೊಲೀಸರ ನಿಷ್ಕ್ರಿಯತೆ ಎಂದು ಆರೋಪಿಸಿದ್ದಾರೆ.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ, ಹೋರಾಟಗಾರ ಮುನೀರ್ ಕಾಟಿಪಳ್ಳ ಪ್ರತಿಕ್ರಿಯಿಸಿ, “ಮಂಗಳೂರಿನ ಹೊರ ವಲಯದಲ್ಲಿ ಮತ್ತೊಂದು ಯುವಕನ ಕೊಲೆಯಾಗಿದೆ. ದುಡಿಮೆಗೆ ಹೊರಟಿದ್ದ ಅಮಾಯಕ ಪಿಕಪ್ ಚಾಲಕ ಕತ್ತಿಯೇಟಿಗೆ ಬಲಿಯಾಗಿದ್ದಾನೆ. ಜನತೆ ಆತಂಕಗೊಂಡಿದ್ದಾರೆ. ಪ್ರತೀಕಾರದ, ದ್ವೇಷದ ಭಾಷಣಗಳು ಕರಾವಳಿಯನ್ನು ಸ್ಮಶಾನವಾಗಿಸುತ್ತಿದೆ.” ಎಂದು ಹೇಳಿದ್ದಾರೆ.

ರೌಡಿ ಸುಹಾಸ್ ಶೆಟ್ಟಿಯ ಕೊಲೆಯ ನಂತರ ಜಿಲ್ಲೆಯಲ್ಲಿ ಹಲವಾರು ಅಹಿತಕರ ಘಟನೆಗಳು ನಡೆದಿತ್ತು. ಜೊತೆಗೆ ಬಿಜೆಪಿ ನಾಯಕರು ತಮ್ಮ ಸಹ ಸಂಘಟನೆಗಳ ಜೊತೆಗೂಡಿ ನಡೆಸಿದ್ದ ಹಲವಾರು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ದ್ವೇಷ ಪ್ರಚೋದನೆ ನಡೆಸಿದ್ದರು. ಈ ಬಗ್ಗೆ ಪ್ರಕರಣ ಕೂಡಾ ದಾಖಲಾಗಿತ್ತು.

ಅಲ್ಲದೆ, ದಿನಗಳ ಹಿಂದೆಯಷ್ಟೆ ಬಿಜೆಪಿ ಪರ ಸಂಘಟನೆಗಳು ನಗರದ ಬಜ್ಪೆಯಲ್ಲಿ ರೌಡಿ ಸುಹಾಸ್ ಪರ ಸಭೆ ನಡೆಸಿದ್ದರು. ಈ ವೇಳೆ ಕೂಡಾ ದ್ವೇಷ ಭಾಷಣ ಮಾಡಲಾಗಿತ್ತು. ಅದಾಗಿ ಕೆಲವೆ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದ್ದು ನಾಗರಿಕರಲ್ಲಿ ಆತಂಕ ಹುಟ್ಟುಹಾಕಿದೆ. ಮಂಗಳೂರು | ದುಷ್ಕರ್ಮಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ತಿಪಟೂರು | ದಲಿತ ಪತ್ರಕರ್ತನ ಮೇಲೆ ಹಲ್ಲೆ ಖಂಡಿಸಿ ದಲಿತಪರ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...