Homeಕರ್ನಾಟಕಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

ಮಂಗಳೂರು: ಅತ್ಯಾಚಾರ ಸಂತ್ರಸ್ತೆ ಮೇಲೆ ಲೈಂಗಿಕ ದೌರ್ಜನ್ಯ- ಪೊಲೀಸ್ ಪೇದೆ ಬಂಧನ

- Advertisement -
- Advertisement -

ಅತ್ಯಾಚಾರ ಪ್ರಕರಣದ ಸಂತ್ರಸ್ತೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಪೇದೆಯೊಬ್ಬರನ್ನು ಬಂಧಿಸಲಾಗಿದೆ. ಬಾಲಕಿ ತಂದೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ಬೀರಂತಡ್ಕ ಎಂಬಲ್ಲಿ ಈ ಘಟನೆ ನಡೆದಿದ್ದು, ಈ ಹಿಂದೆ ಅತ್ಯಾಚಾರ ಸಂತ್ರಸ್ತೆಯ ಜೊತೆ ಪೊಲೀಸ್ ಪೇದೆ ಶಿವರಾಜ್, ಪ್ರಕರಣದ ತನಿಖೆ ಮತ್ತು ಕಾನೂನು ಪ್ರಕ್ರಿಯೆಗಳ ವೇಳೆ ಜೊತೆಯಲ್ಲಿ ಇದ್ದ ಎನ್ನಲಾಗಿದೆ.

ಕಡಬ ಪೊಲೀಸ್ ಪೇದೆ ಆರೋಪಿ ಶಿವರಾಜ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆತನ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಇತರ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಮಹಿಳಾ ಕಾನ್‌ಸ್ಟೇಬಲ್ ಮೇಲೆ ಅತ್ಯಾಚಾರ-ಇಬ್ಬರ ಬಂಧನ

ಪ್ರಕರಣದ ವಿಚಾರಣೆ ಮುಗಿದರೂ ಕೂಡ ಹಲವು ನೆಪಗಳನ್ನು ಮಾಡಿಕೊಂಡು ಶಿವರಾಜ್ ಮನೆಗೆ ಬರುತ್ತಿದ್ದ ಎಂದು ಬಾಲಕಿ ತಂದೆ ಆರೋಪಿಸಿದ್ದಾರೆ. ಕಳೆದ ಆರು ತಿಂಗಳುಗಳಿಂದ ಶಿವರಾಜ್ ಸಂತ್ರಸ್ತೆ ಮನೆಗೆ ಹೋಗುತ್ತಿದ್ದು, ಮನೆಯವರು ಯಾರೂ ಇಲ್ಲದ ಸಂದರ್ಭದಲ್ಲಿ ಮದುವೆಯಾಗುವ ಭರವಸೆ ನೀಡಿ ಬಾಲಕಿಯ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಿದ್ದಾರೆ.

ಈಗ ಮಗಳು ಗರ್ಭಿಣಿಯಾಗಿದ್ದು, ಮದುವೆಯಾಗುವಂತೆ ಒತ್ತಾಯಿಸಿದ್ದಾರೆ. ಆತ ಮದುವೆಗೆ ಒಪ್ಪದೆ, ಗರ್ಭಪಾತ ಮಾಡಿಸಲು ಬಾಲಕಿಯ ತಾಯಿಗೆ 35,000 ರೂಪಾಯಿಗಳನ್ನು ನೀಡಿದ್ದಾನೆ. ಶಿವರಾಜ್ ತನ್ನ ಪ್ರಭಾವವನ್ನು ಬಳಸಿ ತಾಯಿ- ಮಗಳನ್ನು ಅಜ್ಞಾತ ಸ್ಥಳದಲ್ಲಿ ಇರಿಸಿದ್ದಾನೆ ಅವರನ್ನು ಹುಡುಕಿ ಕೊಡುವಂತೆ ಬಾಲಕಿಯ ತಂದೆ ಕಡಬ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, 26 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Yes it is 100 percent correct. These people came to power in the name of farmers and now they totally forgoten them. It’s really very unfortunate. Now a days it fashion to show sympathy towards farmers and after coming to power they will totally forgeting them. Onece or twice they can fool the mass but not always. What I believe.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...