Homeಕರ್ನಾಟಕಮಂಗಳೂರು: 'ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?': ಬಿಜೆಪಿಗೆ ಮತ ಹಾಕುವಂತೆ...

ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾನಕ್ಕೆ 24 ಗಂಟೆಗಳು ಮಾತ್ರ ಬಾಕಿ ಉಳಿದಿದೆ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಕಣದಲ್ಲಿದ್ದಾರೆ. ಹಿಂದುತ್ವದ ಮತ್ತು ಬಿಜೆಪಿಯ ಭದ್ರಕೋಟೆ ಎನ್ನಲಾಗುತ್ತಿದ್ದ ಕರವಾಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಗೆ ದೊಡ್ಡ ಸವಾಲು ಎದುರಾಗಿದೆ. ಬಂಟ ಸಮುದಾಯದ ನಳಿನ್‌ ಕುಮಾರ್‌ ಕಟೀಲ್‌ ವಿರುದ್ಧ ಪಕ್ಷದೊಳಗಿದ್ದ ಅಸಮಾಧಾನದಿಂದ ಈ ಬಾರಿ ಅದೇ ಸಮುದಾಯಕ್ಕೆ ಸೇರಿದ ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಬಿಜೆಪಿ ಟಿಕೆಟ್‌ ನೀಡಲಾಗಿತ್ತು. ಆದರೆ ಕಾಂಗ್ರೆಸ್‌ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ ಅವರಿಗೆ ಟಿಕೆಟ್‌ ನೀಡಿದೆ. ಇದರಿಂದಾಗಿ ಕ್ಷೇತ್ರದಲ್ಲಿ ನಿರ್ಣಾಯಕ ಮತದಾರರ ಸಂಖ್ಯೆಯನ್ನು ಹೊಂದಿರುವ ಬಿಲ್ಲವರ ಮತಗಳು ಈ ಬಾರಿ ಪದ್ಮರಾಜ್ ಪೂಜಾರಿ ಪಾಲಾಗುವ ಸಾಧ್ಯತೆ ಇದ್ದು, ಬಿಜೆಪಿಗೆ ದೊಡ್ಡ ಸವಾಲಾಗಿದೆ. ಇದರ ಬೆನ್ನಲ್ಲಿ ಬಂಟ ಬ್ರಿಗೇಡ್’ ಹೆಸರಲ್ಲಿ ಕರಪತ್ರವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದ್ದು, ‘ನಮ್ಮ ಸಮುದಾಯದ ಬ್ರಿಜೇಶ್‌ ಚೌಟರನ್ನು ಗೆಲ್ಲಿಸಲು ಬಂಟ ಮತದಾರರಿಗೆ ಮನವಿ’ ಎಂಬ ಶೀರ್ಷಿಕೆಯ ಕರಪತ್ರದಲ್ಲಿ ‘ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’ಎಂದು ಉಲ್ಲೇಖಿಸಲಾಗಿದೆ. ಈ ಕರಪತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಈ ಕರಪತ್ರದಲ್ಲಿ, ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು ಎಂದು ಉಲ್ಲೇಖಿಸಲಾಗಿದೆ.

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಬಗ್ಗೆ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದು ಕೂಡ ಉಲ್ಲೇಖಿಸಲಾಗಿದೆ.

ಕರಪತ್ರದ ವಿಶೇಷ ಸೂಚನೆಯಲ್ಲಿ ನಮ್ಮ ಸಮುದಾಯಕ್ಕೆ ಮಾತ್ರ ನೀಡಬೇಕು ಎಂದು ಉಲ್ಲೇಖಿಸಲಾಗಿದ್ದು, ಕೊನೆಗೆ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಬಂಟ ಬ್ರಿಗೇಡ್‌ ದಕ್ಷಿಣ ಕನ್ನಡ ಮಂಗಳೂರು ಎಂದು ಬರೆಯಲಾಗಿದೆ.

ವೈರಲ್‌ ಆದ ಕರಪತ್ರದಲ್ಲಿ ಏನೇನಿದೆ?

ಪ್ರೀತಿಯ ಸ್ವಜಾತಿ ಬಾಂಧವರೇ, ಚುನಾವಣೆಯ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರವರು ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಳಿಯಾಗಿದ್ದಾರೆ. ಒಂದು ಕಾಲದಲ್ಲಿ ಬಂಟ ನಾಯಕರನ್ನು ಮೂಲೆಗೆ ಸರಿಸಿ ಬಿಲ್ಲವರು ಮೆರೆದಾಡಿದ್ದ ಕ್ಷೇತ್ರ ನಂತರದ ದಿನದಲ್ಲಿ ನಮ್ಮ ಬಂಟರ ತೆಕ್ಕೆಗೆ ಬಂದಿದೆ. ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ಗೆಲ್ಲುವ ಮೂಲಕ ನಾವು ನಮ್ಮ ಒಗ್ಗಟ್ಟನ್ನು ಸಾಬೀತುಪಡಿಸಿದ್ದೇವೆ.

ಆದರೆ ಒಂದು ಕಾಲದಲ್ಲಿ ನಮ್ಮ ಒಕ್ಕಲಿನಲ್ಲಿದ್ದ ಬಿಲ್ಲವರು, ಜನಾರ್ದನ ಪೂಜಾರಿಯವರು ಸಂಸದರಾದ ನಂತರ ದೊಡ್ಡ ದೊಡ್ಡ ಉದ್ಯಮದಲ್ಲಿ ತೊಡಗಿಸಿಕೊಂಡು ಊರಿಗೆ, ಜಿಲ್ಲೆಗೆ, ಪರ ಊರಿನಲ್ಲಿ ಪ್ರಭಾವಿಯಾಗಿದ್ದ ನಮ್ಮ ಸಮಾಜದವರ ಪ್ರಭಾವವನ್ನು ತಗ್ಗಿಸಿ ಮೆರೆದಾಡತೊಡಗಿದ್ದರು. ಇಂತಹ ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ? ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಸೇಂದಿ ತೆಗೆದು, ಕೂಲಿ ನಾಲಿ ಮಾಡಿಕೊಂಡು ಬದುಕುತ್ತಿದ್ದವರು. ಇಂದು ನಮ್ಮ ಮೇಲೆ ಅಧಿಕಾರವನ್ನು ಚಲಾಯಿಸಲು ಹೊರಟರೆ ಅವರ ಕೈಕೆಳಗೆ ಬಾಳುವುದಕ್ಕೆ ನಮಗೆ ಸಾಧ್ಯವಿದೆಯೇ ಎನ್ನುವುದನ್ನು ಸ್ವಾಭಿಮಾನಿಗಳಾದ ನಾವು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ. ಜನಾರ್ದನ ಪೂಜಾರಿಯ ನಂತರ ಮತ್ತೊಮ್ಮೆ ಅವರ ಶಿಷ್ಯನಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ನಮ್ಮ ಬಂಟ ಸಮಾಜಕ್ಕೆ ಸವಾಲನ್ನು ಎಸೆದಿದೆ. ಈ ಸವಾಲನ್ನು ನಾವು ಸ್ವೀಕರಿಸುವ ಮೂಲಕ ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರನ್ನು ಲಕ್ಷ ಲಕ್ಷ ಬಹುಮತದಿಂದ ಗೆಲ್ಲಿಸುವುದಕ್ಕೆ ರಾತ್ರಿ ಹಗಲೆನ್ನದೆ ದುಡಿಯಬೇಕಾಗಿದೆ

ಒಂದು ವೇಳೆ ಶೂದ್ರ ವರ್ಗಕ್ಕೆ ಸೇರಿದವ ಗೆದ್ದು ಬಂದರೆ ಮುಂದಿನ ದಿನದಲ್ಲಿ ಇತರ ಶೂದ್ರ ವರ್ಗಕ್ಕೆ ಸೇರಿದವರು ಗೌಡರು, ಕುಲಾಲ್, ಕೊಟ್ಟಾರಿ, ಗಾಣಿಗ, ಭಂಡಾರಿ, ನಾಯ್ಕ, ಎಸ್ಸಿ-ಎಸ್ಟಿಗಳು ಒಗ್ಗಟ್ಟಾಗಿ ನಮ್ಮನ್ನು ಆಳಲು ಹೊರಟರೆ, ಬೇರೆ ಬೇರೆ ಚುನಾವಣೆಗಳಲ್ಲಿ ಸ್ಪರ್ಧಿಸಿ ನಮ್ಮವರನ್ನು ಮೂಲೆಗುಂಪು ಮಾಡಿದರೆ ಅದನ್ನು ನಮಗೆ ಸಹಿಸುವುದಕ್ಕೆ ಸಾಧ್ಯವಿದೆಯೇ? ಊರಿಗೆ ಪಟೇಲರಾಗಿ ವಿವಿಧ ಸ್ಥರಗಳಲ್ಲಿ ಜನಪ್ರತಿನಿಧಿಗಳಾಗಿ ಮೆರೆದಿದ್ದ ನಮ್ಮ ಸಮಾಜ ಇಂತಹ ಸಮಾಜದ ಶೂದ್ರರ ಮುಂದೆ ಕೈಕಟ್ಟಿಕೊಂಡು ನಿಲ್ಲಬೇಕೆ?

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಸತ್ಯವನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ. ಜನಾರ್ದನ ಪೂಜಾರಿ ಗೆದ್ದ ನಂತರದ ಪರಿಸ್ಥಿತಿ ಅವರ ಶಿಷ್ಯ ಗೆದ್ದ ನಂತರ ನಮಗೆ ಬಾರದಿರಲಿ ಎನ್ನುವುದಾದರೆ ನಮ್ಮ ಸಮಾಜದ ಸೈನಿಕ ಬ್ರಿಜೇಶ್ ಚೌಟ ಗೆಲ್ಲಲೇಬೇಕು.

ಸತ್ಯಜಿತ್ ಸುರತ್ಕಲ್, ಬಿರುವೆರ್ ಕುಡ್ಲದ ಉದಯ ಪೂಜಾರಿ ಬಲ್ಲಾಲ್ ಭಾಗ್ ಇಂತಹವರು ವಿವಿಧ ಸಂಘಟನೆಗಳನ್ನು ಕಟ್ಟಿಕೊಂಡು ನಮ್ಮವರಿಗೆ ಯಾವ ರೀತಿಯಲ್ಲಿ ಮಗ್ಗುಲ ಮುಳ್ಳಾಗಿದ್ದಾರೆ ಎನ್ನುವುದನ್ನು ನಾವು ಮರೆಯಲಾಗುತ್ತದೆಯೇ?

ನಮ್ಮ ಸಮಾಜದ ಒಬ್ಬ ಯುವಕನನ್ನು ಗೆಲ್ಲಿಸುವುದಕ್ಕೆ ಬೇರೆ ಬೇರೆ ರೀತಿಯಲ್ಲಿ ನಮ್ಮ ಸಮಾಜದ ಹಿರಿಯರ ಸೂಚನೆಯಂತೆ ಕೆಲಸ ಮಾಡಲಾಗಿದೆ. ನಮ್ಮ ಅಭ್ಯರ್ಥಿಯಾದ ಚೌಟರಿಗೆ ದೊಡ್ಡ ಮೊತ್ತದ ಹಣದ ನೆರವನ್ನು ಕೂಡ ನೀಡಲಾಗಿದೆ. ಇದು ಸಾಲದು. ನಮ್ಮ ಕೃಷಿ ಕಾರ್ಯದಲ್ಲಿ, ನಮ್ಮ ಮನೆಯ ಕೂಲಿ ಕೆಲಸದಲ್ಲಿ, ನಮ್ಮ ಉದ್ಯಮಗಳಲ್ಲಿ, ನಮ್ಮಲ್ಲಿ ಒಕ್ಕಲು ಇರುವವರನ್ನು ನಮ್ಮ ಪ್ರಭಾವವನ್ನು ಬಳಸಿಕೊಂಡು ಚೌಟರಿಗೆ ಮತದಾನ ಮಾಡಿಸುವ ದೊಡ್ಡ ಜವಾಬ್ದಾರಿಯನ್ನು ನಮ್ಮ ಸಮಾಜದವರು ನಿರ್ವಹಣೆ ಮಾಡಿ, ಶೂದ್ರನೊಬ್ಬ ನಮ್ಮನ್ನು ಆಳದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.

ನಿಮ್ಮ ವಾರ್ಡ್, ಗ್ರಾಮ ವ್ಯಾಪ್ತಿಯಲ್ಲಿ ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ. ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ ಎಂದು ಕರಪತ್ರದಲ್ಲಿ ಬರೆಯಲಾಗಿದೆ.

ಇದನ್ನು ಓದಿ: 2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nange yaw rithiya desha bhaktha pradani sikkidru… Namma e silly buddi bidadidre… Uddara illa…vnammolage heege ide… Innu Muslim navru yenadru madidre thappu helthiri… Yentha cheap mentality marre Karapatra maadiddu…yentha raajamanetganalla aalvike yella helike shoodra varga yella helike…just prabapranhithvakke bembala needi… Olle nayakannu gouravisi… Adu bittu shoodra bhanta yen nimdu.. useless things

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...