Homeಕರ್ನಾಟಕಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಮೃತದೇಹ ಪತ್ತೆ

- Advertisement -
- Advertisement -

ಮಂಗಳೂರಿನ ಸುರತ್ಕಲ್‌ ಪ್ರದೇಶದ ಶಾಲೆಯೊಂದರ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.

ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಪುತ್ರ ಯಶ್ಚಿತ್ ( 15) , ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ ಪುತ್ರ ರಾಘವೇಂದ್ರ (15),ಸುರತ್ಕಲ್ ಗುಡ್ಡೆಕೊಪ್ಲ ನಿವಾಸಿ ವಿಶ್ವನಾಥ ಎಂಬವರ ಪುತ್ರ ನಿರೂಪ್ (15), ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ ಪುತ್ರ ಅನ್ವಿತ್ (15) ಮೃತಪಟ್ಟ ವಿದ್ಯಾರ್ಥಿಗಳು. ಇವರು ಸುರತ್ಕಲ್‌ನ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿದ್ದರು.

ನಿನ್ನೆ ಶಾಲೆಯಲ್ಲಿ ಎಸೆಸೆಲ್ಸಿ ಇಂಗ್ಲೀಷ್‌ ಪೂರ್ವ ಸಿದ್ಧತಾ ಪರೀಕ್ಷೆ ಮುಗಿಸಿದ ಬಳಿಕ ವಿದ್ಯಾರ್ಥಿಗಳು ಮನೆಗೆ ತೆರಳದೆ ನಾಪತ್ತೆಯಾಗಿದ್ದರು. ಮಕ್ಕಳು ಸಂಜೆಯಾದರೂ ಮನೆಗೆ ಬರದ ಹಿನ್ನೆಲೆ ಪೋಷಕರು ಹುಡುಕಾಟವನ್ನು ನಡೆಸಿದ್ದು, ಬಳಿಕ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ವಿದ್ಯಾರ್ಥಿಗಳಿಗಾಗಿ ಹುಡುಕಾಟ ನಡೆಸಿದ ಪೊಲೀಸರು ವಿವಿಧೆಡೆ ಸಿಸಿ ಟಿವಿ ಪರಿಶೀಲಿಸಿದ್ದಾರೆ. ಈ ವೇಳೆ, ವಿದ್ಯಾರ್ಥಿಗಳು ಸುರತ್ಕಲ್ ಬಸ್ ನಿಲ್ದಾಣದಿಂದ ಬಸ್ ಹತ್ತಿ ಹಳೆಯಂಗಡಿಯಲ್ಲಿ ಇಳಿದು ಮುಂದಕ್ಕೆ ತೆರಳಿದ್ದಾರೆ ಎಂಬುದು ಗೊತ್ತಾಗಿದೆ. ಬಳಿಕ, ವಿದ್ಯಾರ್ಥಿಯೋರ್ವನ ಬಳಿಯಿದ್ದ ಮೊಬೈಲ್ ನ ಟವರ್ ಲೋಕೇಷನ್ ಆಧಾರದಲ್ಲಿ ಅವರು ನದಿ ತೀರಕ್ಕೆ ಹೋಗಿದ್ದಾರೆಂದು ಪೊಲೀಸರು ಕಂಡುಕೊಂಡಿದ್ದಾರೆ. ನದಿ ಬಳಿ ಪರಿಶೀಲನೆ ನಡೆಸಿದಾಗ, ವಿದ್ಯಾರ್ಥಿಗಳ ಬ್ಯಾಗ್‌, ಚಪ್ಪಲಿಗಳು ಪತ್ತೆಯಾಗಿವೆ. ನಂತರ ನದಿಯಲ್ಲಿ ಶೋಧ ನಡೆಸಿದ್ದು, ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿವೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ವಿದ್ಯಾರ್ಥಿಗಳು ಈಜಲೆಂದು ನದಿಗಿಳಿದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರರೆ ಎನ್ನಲಾಗಿದ್ದು, ನಾಲ್ಕು ಮಂದಿ ಮಕ್ಕಳು ತಮ್ಮ ಶಾಲಾ ಚೀಲಗಳನ್ನು ನದಿಯ ದಡದಲ್ಲಿಟ್ಟು ನೀರಿನಲ್ಲಿ ಇಳಿದಿದ್ದರು. ಸ್ನೇಹಿತರು ನೀರಿನಲ್ಲಿ ಮುಳುಗುತ್ತಿದ್ದಂತೆಯೇ ಜೊತೆಗಿದ್ದ ಮೂವರು ಸ್ಥಳದಿಂದ ತಮ್ಮ ಮನೆಗಳಿಗೆ ತೆರಳಿದ್ದರು ಎನ್ನಲಾಗುತ್ತಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನು ಓದಿ: ಲೋಕಪಾಲ್‌ ಮುಖ್ಯಸ್ಥರಾಗಿ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...