Homeಮುಖಪುಟಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

ಮಣಿಪುರ | ಕಸ್ಟಡಿ ಸಾವು ಖಂಡಿಸಿ ರಾಜ್ಯ ಬಂದ್‌ಗೆ ಕರೆಕೊಟ್ಟ ಹೋರಾಟಗಾರರು

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ಸಂಭವಿಸಿದ 27 ವರ್ಷದ ವ್ಯಕ್ತಿಯೊಬ್ಬರ ಕಸ್ಟಡಿ ಸಾವು ಖಂಡಿಸಿ ಮಣಿಪುರದಲ್ಲಿ ಹೋರಾಟಗಾರರ ಗುಂಪೊಂದು ಶುಕ್ರವಾರ (ಏ.25) ರಾಜ್ಯ ಬಂದ್‌ಗೆ ಕರೆ ನೀಡಿದೆ ಎಂದು ವರದಿಯಾಗಿದೆ.

ನಿಷೇಧಿತ ಸಂಘಟನೆಯಾದ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿ (ನೊಂಗ್ಡ್ರೆನ್‌ಖೋಂಬಾ) ಜೊತೆ ಸಂಬಂಧ ಹೊಂದಿರುವ ಆರೋಪದ ಮೇಲೆ ಮಾರ್ಚ್ 31ರಂದು ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಖೋಯಿಸ್ನಮ್ ಸನಾಜೋಬಾ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಅವರು ಏಪ್ರಿಲ್ 13 ರಂದು ಇಂಫಾಲ್‌ನ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾಗ ನಿಧನರಾಗಿದ್ದಾರೆ ಎಂದು ಇಂಡಿಯಾ ಟುಡೇ ಎನ್‌ಇ ವರದಿ ಮಾಡಿದೆ.

ಸನಾಜೋಬಾ ಅವರನ್ನು ಅವರು ಸಾವಿಗೀಡಾದ ದಿನವೇ ವೈದ್ಯಕೀಯ ಸಂಸ್ಥೆಗೆ ದಾಖಲಿಸಲಾಗಿತ್ತು. ಅವರನ್ನು ಏಪ್ರಿಲ್ 10 ರಂದು ಸಜಿವಾದಲ್ಲಿರುವ ಮಣಿಪುರ ಕೇಂದ್ರ ಕಾರಾಗೃಹಕ್ಕೆ ರಿಮಾಂಡ್ ಮಾಡಲಾಗಿತ್ತು.

ಸನಾಜೋಬಾ ಅವರಿಗೆ ನ್ಯಾಯ ದೊರಕಿಸಿಕೊಡಲು ರಚಿಸಲಾದ ಜಂಟಿ ಕ್ರಿಯಾ ಸಮಿತಿಯು ಅವರು ವಾಸ್ತವವಾಗಿ ‘ಗ್ರಾಮ ಸ್ವಯಂಸೇವಕ’ ಎಂದು ಹೇಳಿಕೊಂಡಿದ್ದು, ಅವರ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಸಮಿತಿಯ ಸದಸ್ಯರು ಸನಾಜೋಬಾ ಅವರಂತೆಯೇ ಇಂಫಾಲ್‌ನ ಖುರೈ ನಿಂಗ್‌ಥೌಬಂಗ್ ಲೈಕೈ ಪ್ರದೇಶದವರು.

ಮೇ 2023ರಲ್ಲಿ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವೆ ಜನಾಂಗೀಯ ಸಂಘರ್ಷ ಭುಗಿಲೆದ್ದಾಗಿನಿಂದ ಗ್ರಾಮಗಳನ್ನು ಕಾಯುತ್ತಿರುವ ಸಶಸ್ತ್ರ ನಾಗರಿಕರಿಗೆ ‘ಗ್ರಾಮ ಸ್ವಯಂಸೇವಕರು’ ಎಂಬ ಪದವನ್ನು ಬಳಸಲಾಗುತ್ತಿದೆ.

ಸಾವಿಗೀಡಾದ ಸನಾಜೋಬಾ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಅವರ ಹತ್ತಿರದ ಸಂಬಂಧಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಮರಣೋತ್ತರ ಪರೀಕ್ಷೆಯ ವರದಿ ಮತ್ತು ಪರೀಕ್ಷೆಯ ಕಚ್ಚಾ ವಿಡಿಯೋ ತುಣುಕನ್ನು ಸಾರ್ವಜನಿಕಗೊಳಿಸಬೇಕು ಎಂದು ಜಂಟಿ ಕ್ರಿಯಾ ಸಮಿತಿ ಒತ್ತಾಯಿಸಿದೆ.

ಮಣಿಪುರವು ಮೇ 2023ರಲ್ಲಿ ಭುಗಿಲೆದ್ದ ಮೈತೇಯಿ ಮತ್ತು ಕುಕಿ ಝೋ ಸಮುದಾಯಗಳ ನಡುವಿನ ಜನಾಂಗೀಯ ಸಂಘರ್ಷದ ಇದುವರೆಗೆ ಕನಿಷ್ಠ 258 ಜನರು ಸಾವನ್ನಪ್ಪಿದ್ದಾರೆ ಮತ್ತು 59,000ಕ್ಕೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದು ವಿವಿಧ ಪ್ರದೇಶಗಳಿಗೆ ಸ್ಥಳಾಂತರಗೊಂಡಿದ್ದಾರೆ.

ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಈ ವರ್ಷದ ಫೆಬ್ರವರಿಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ಏಪ್ರಿಲ್ 19 ಮತ್ತು ಏಪ್ರಿಲ್ 21ರ ನಡುವೆ, ಮಣಿಪುರ ಪೊಲೀಸರು ರಾಜ್ಯದಲ್ಲಿ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷ (ನೊಂಗ್ಡ್ರೆನ್‌ಖೋಂಬಾ) ಸೇರಿದಂತೆ ಹಲವಾರು ನಿಷೇಧಿತ ಸಂಘಟನೆಗಳ ಕನಿಷ್ಠ 18 ಸದಸ್ಯರನ್ನು ಬಂಧಿಸಿದ್ದಾರೆ.

‘ಪಹಲ್ಗಾಮ್‌ನಲ್ಲಿ ಭದ್ರತಾ ಲೋಪವಾಗಿದೆ’: ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡ ಮೋದಿ ಸರ್ಕಾರ; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...