ಮಣಿಪುರದ ಭದ್ರತಾ “ಸವಾಲು” ಮತ್ತು ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 5,000 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಒಳಗೊಂಡಿರುವ ಹೆಚ್ಚುವರಿ 50 ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPF) ಕಂಪನಿಗಳನ್ನು ಮಣಿಪುರಕ್ಕೆ ಕಳುಹಿಸಲು ಕೇಂದ್ರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. ಈ ವಾರದೊಳಗೆ ಹೆಚ್ಚುವರಿ 50 ಕಂಪನಿಗಳನ್ನು ಮಣಿಪುರಕ್ಕೆ ಕಳುಹಿಸಲು ಆದೇಶಿಸಲಾಗಿದೆ. ಮಣಿಪುರ
ಜಿರಿಬಾಮ್ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದು ಇತರ ಸ್ಥಳಗಳಿಗೆ ಹರಡಿದ ನಂತರ ನವೆಂಬರ್ 12 ರಂದು ಹೊರಡಿಸಿದ ಆದೇಶದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ 20 ಹೆಚ್ಚುವರಿ CAPF ಕಂಪನಿಗಳನ್ನು ಕಳುಹಿಸಿತ್ತು. ಅದರಲ್ಲಿ ಸಿಆರ್‌ಪಿಎಫ್‌ನ 15 ಮತ್ತು ಬಿಎಸ್‌ಎಫ್‌ನಿಂದ ಐದು ಕಂಪನಿಗಳು ಹೊಂದಿತ್ತು. ಅದರ ನಂತರ ಮತ್ತೆ 50 ಕಂಪೆನಿಗಳನ್ನು ಕಳುಹಿಸುವ ಬಗ್ಗೆ ನಿರ್ಧರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈಗ ಮತ್ತೆ ಕಳುಹಿಸಲು ಉದ್ದೇಶಿಸಿರುವ ಕಂಪೆನಿಗಳಲ್ಲಿ 35 ತುಕಡಿಗಳನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯಿಂದ ಪಡೆಯಲಾಗುವುದು, ಉಳಿದವು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ನಿಂದ ಪಡೆಯಲಾಗುವುದು ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಸಿಆರ್‌ಪಿಎಫ್ ಮಹಾನಿರ್ದೇಶಕ (ಸಿಆರ್‌ಪಿಎಫ್) ಎ ಡಿ ಸಿಂಗ್ ಮತ್ತು ಇತರ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಸಿಎಪಿಎಫ್) ಹಿರಿಯ ಅಧಿಕಾರಿಗಳು ಸಹ ರಾಜ್ಯದಲ್ಲಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಮಣಿಪುರ
ಹಿಂಸಾಚಾರ ಪೀಡಿತ ಜಿರಿಬಾಮ್ ಸೇರಿದಂತೆ ಮಣಿಪುರದ ಆರು ಪೊಲೀಸ್ ಠಾಣಾ ಪ್ರದೇಶಗಳಲ್ಲಿ ಕೇಂದ್ರ ಸರ್ಕಾರವು ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯ್ದೆಯನ್ನು (ಎಎಫ್‌ಎಸ್‌ಪಿಎ) ಗುರುವಾರ ಮರು ಜಾರಿಗೊಳಿಸಿದೆ. ಕಳೆದ ವಾರದ ನಿಯೋಜನೆಯೊಂದಿಗೆ, ಕಳೆದ ವರ್ಷ ಮೇ ತಿಂಗಳಿನಿಂದ ಜನಾಂಗೀಯ ಕಲಹದಿಂದ ತತ್ತರಿಸುತ್ತಿರುವ ಮಣಿಪುರದಲ್ಲಿ ಒಟ್ಟು 218 ಸಿಎಪಿಎಫ್ ಕಂಪನಿಗಳು ನಿಯೋಜನೆಯಲ್ಲಿವೆ.
ಚಾಲ್ತಿಯಲ್ಲಿರುವ ಅಸ್ಥಿರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಕರ್ಫ್ಯೂ ಜಾರಿಯಲ್ಲಿರುವ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ಸೋಮವಾರ ಮತ್ತು ಮಂಗಳವಾರ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶಿಸಿದೆ. ಹಿಂಸಾಚಾರ ಪೀಡಿತ ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಸತತ ಎರಡನೇ ದಿನ ರಾಜ್ಯದ ಭದ್ರತಾ ಪರಿಸ್ಥಿತಿ ಮತ್ತು ಸೈನಿಕರ ನಿಯೋಜನೆಯನ್ನು ಪರಿಶೀಲಿಸಿದ್ದಾರೆ ಎಂದು ವರದಿಯಾಗಿದ್ದು, ಸಾಧ್ಯವಾದಷ್ಟು ಬೇಗ ಅಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಗಮನಹರಿಸುವಂತೆ ಉನ್ನತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉನ್ನತ ಅಧಿಕಾರಿಗಳೊಂದಿಗೆ ಗೃಹ ಸಚಿವರು ಮಣಿಪುರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದಿಂದ ಯಾವುದೇ ಅಕ್ರಮ ಇಲ್ಲ: ಹೈಕೋರ್ಟ್
ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧದಿಂದ ಯಾವುದೇ ಅಕ್ರಮ ಇಲ್ಲ: ಹೈಕೋರ್ಟ್


