Homeಕರ್ನಾಟಕಮಣಿಪುರ: ಬಿಜೆಪಿ ಮುನ್ನಡೆ; ಕಾಂಗ್ರೆಸ್‌ಗೆ ಹಿನ್ನಡೆ

ಮಣಿಪುರ: ಬಿಜೆಪಿ ಮುನ್ನಡೆ; ಕಾಂಗ್ರೆಸ್‌ಗೆ ಹಿನ್ನಡೆ

- Advertisement -
- Advertisement -

60 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಮಣಿಪುರದಲ್ಲಿ ಬಹುಮತಕ್ಕೆ 31 ಸ್ಥಾನಗಳು ಬೇಕಿದ್ದು, ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ 24 ಸ್ಥಾನ, ಕಾಂಗ್ರೆಸ್‌ 12 ಸ್ಥಾನ, ಎನ್‌ಪಿಪಿ 12, ಜೆಡಿಯು ನಾಲ್ಕು, ಪಕ್ಷೇತರರು 8 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಎರಡು ಹಂತಗಳಲ್ಲಿ ನಡೆದ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಯಿತು. 60 ಸ್ಥಾನಗಳ ಮಣಿಪುರ ವಿಧಾನಸಭೆಗೆ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ನಡೆದ ಚುನಾವಣೆಯಲ್ಲಿ 78.03 ಮತ್ತು 76.04ರಷ್ಟು ಮತದಾನವಾಗಿದೆ. 92 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಬಾರಿ ಬಿಜೆಪಿ ಏಕಾಂಗಿಯಾಗಿ ಕಣಕ್ಕಿಳಿದಿತ್ತು.

ಮಣಿಪುರದಲ್ಲಿ ಬಿಜೆಪಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಎಕ್ಸಿಟ್ ಪೋಲ್ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. 2017ರ ಚುನಾವಣೆಯಲ್ಲಿ ಕಾಂಗ್ರೆಸ್ 28 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 21 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿಯು, ಎನ್‌ಪಿಪಿ, ಎನ್‌ಪಿಎಫ್ ಮತ್ತು ಎಲ್‌ಜೆಪಿ ಜೊತೆ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿತ್ತು.


ಇದನ್ನೂ ಓದಿರಿ: ಅತಂತ್ರ ವಿಧಾನಸಭೆಯತ್ತ ಗೋವಾ: ಯಾರಿಗೂ ಬಹುಮತವಿಲ್ಲದಿದ್ದರೂ ಬಿಜೆಪಿ ಮೇಲುಗೈ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...