Homeಮುಖಪುಟಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

ಮಣಿಪುರ ಚುನಾವಣೆ: ಡಗ್ಸ್ ಮಾಫಿಯಾ ವಿರುದ್ಧ ಹೋರಾಡಿದ್ದ ಪೊಲೀಸ್ ಅಧಿಕಾರಿ ವಿರುದ್ದ ಅಮಿತ್ ಶಾ ಪ್ರಚಾರ!

- Advertisement -
- Advertisement -

ಮಣಿಪುರ ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾದ ವಿರುದ್ಧ ಹೋರಾಡಿದ್ದ ದಕ್ಷ ಪೊಲೀಸ್ ಅಧಿಕಾರಿ ಬೃಂದಾ ತೌನೋಜಮ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪೂರ್ವ ಇಂಫಾಲದ ಯೈಸ್ಕುಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಚುನಾವಣಾ ಕಣಕ್ಕಿಳಿದಿದ್ದಾರೆ. ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನೆ ಮನೆ ಪ್ರಚಾರ ಮಾಡುತ್ತಿದ್ದಾರೆ.

ಬೃಂದಾ ತೌನೋಜಮ್ ಅವರು ಜೆಡಿ(ಯು) ಪಕ್ಷದಿಂದ ಬಿಜೆಪಿಯ ಹಾಲಿ ಶಾಸಕ ಮತ್ತು ಹಾಲಿ ಮಣಿಪುರ ಕಾನೂನು ಸಚಿವ ತೊಕ್ಚೋಮ್ ಸತ್ಯಬ್ರತ ಸಿಂಗ್ ವಿರುದ್ಧ ಚುನಾವಣೆ ಎದುರಿಸುತ್ತಿದ್ದಾರೆ.

43 ವರ್ಷದ ಬೃಂದಾ ತೌನೋಜಮ್ ಅಪಾರ ಯುವ ಅಭಿಮಾನಿಗಳನ್ನು ಹೊಂದಿದ್ದಾರೆ. ಮಣಿಪುರ ಪೊಲೀಸರ ಮಾದಕ ದ್ರವ್ಯ ವಿರೋಧಿ ಘಟಕದ ಉಪ ಮುಖ್ಯಸ್ಥರಾಗಿದ್ದ ಅವರು ತಮ್ಮ ನೇತೃತ್ವದಲ್ಲಿ 2018 ರಲ್ಲಿ ₹ 27 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಉನ್ನತ ಪ್ರಕರಣದ ನಂತರ ಪ್ರಸಿದ್ಧರಾದರು. ಆ ವರ್ಷ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೆ ಶೌರ್ಯ ಪ್ರಶಸ್ತಿಯನ್ನು ನೀಡಿತ್ತು. ಆದರೆ ಆ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯನ್ನು ಖುಲಾಸೆಗೊಳಿಸಲು ಸಿಎಂ ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದ ಬೃಂದಾ ತೌನೋಜಮ್ ಪ್ರಶಸ್ತಿ ವಾಪಸ್ ಮಾಡಿದರು ಮಾತ್ರವಲ್ಲದೆ ಸಿಎಂ ಜೊತೆ ಜಗಳವಾಡಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.

“ಬಿಜೆಪಿಯ ಹಾಲಿ ಸಚಿವರಿಗೆ ನನ್ನ ವಿರುದ್ಧ ಪ್ರಚಾರ ಮಾಡಲು ಕೇಂದ್ರ ಗೃಹ ಸಚಿವರನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದರೆ ಅದನ್ನು ನಾನು ಪ್ರಶಂಸೆಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಹೋರಾಟ ಡ್ರಗ್ಸ್ ಹಾವಳಿ ಮತ್ತು ಭ್ರಷ್ಟಾಚಾರದ ವಿರುದ್ಧ. ಒಬ್ಬ ಪೋಲೀಸ್ ಆಗಿ ಜನರಿಗೆ ಹೆಚ್ಚಿನ ಕೆಲಸ ಮಾಡಲು ಸಾಧ್ಯವಾಗಲಿಲ್ಲ. ನಾನು ರಾಜ್ಯ ವಿಧಾನಸಭೆಯಲ್ಲಿ ಪ್ರಭಾವ ಬೀರಲು ಬಯಸುತ್ತೇನೆ” ತೌನೋಜಮ್ ಹೇಳಿದ್ದಾರೆ.

ಮಣಿಪುರದಲ್ಲಿ ಹಾಲಿ ಆಡಳಿತರದಲ್ಲಿರುವ ಎನ್‌ಡಿಎ ಸರ್ಕಾರವು ಡ್ರಗ್ಸ್ ಮಾಫಿಯಾವನ್ನು ಬೆಂಬಲಿಸುತ್ತಿದೆ ಎಂದು ಮಾಜಿ ಪೊಲೀಸ್ ಅಧಿಕಾರಿ ಆರೋಪಿಸಿದ್ದಾರೆ. ಖುದ್ದು ಸಿಎಂ ಆರೋಪಿಗಳ ರಕ್ಷಣೆಗೆ ನಿಲ್ಲುತ್ತಾರೆ. ಹಾಗಾಗಿ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬುದು ಅವರ ಅಭಿಮತವಾಗಿದೆ. ಅವರ ಮಾವ ರಾಜ್ಯದ ವಿರುದ್ಧದ ಶಸಸ್ತ್ರ ಹೋರಾಟದ ನೇತೃತ್ವ ವಹಿಸಿದ್ದರು. ಆದರೆ ತನೋಜಮ್ ಉತ್ತರ ಪೊಲೀಸ್ ಅಧಿಕಾರಿಯಾಗಿ ಹೆಸರು ಗಳಿಸಿದ್ದಾರೆ.

2017 ರಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ (ಎಎಫ್‌ಎಸ್‌ಪಿಎ) ವಿರುದ್ಧ ಪ್ರತಿಭಟನೆಯ ಸಂಕೇತವಾಗಿ 16 ವರ್ಷಗಳ ಅಪ್ರತಿಮ ಉಪವಾಸವನ್ನು ಕೊನೆಗೊಳಿಸಿದ “ಮಣಿಪುರದ ಉಕ್ಕಿನ ಮಹಿಳೆ” ಇರೋಮ್ ಶರ್ಮಿಳಾ ಚಾನು ಕೂಡ ಯುವಜನರಿಂದ ಭಾರಿ ಬೆಂಬಲ ಪಡೆದಿದ್ದರು. ಅವರು ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಅವು ಮತಗಳಾಗಿ ಬದಲಾಗಲಿಲ್ಲ. ಹಾಗಾಗಿ ಅವರು ಸೋಲಬೇಕಾಯಿತು. ಅದನ್ನು ತನೋಜಮ್ ಮುರಿಯುವರೆ ಕಾದು ನೋಡಬೇಕಿದೆ.

ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 05 ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ : ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...