Homeಮುಖಪುಟಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಮಣಿಪುರ ಚುನಾವಣೆ: ಬಿಜೆಪಿಯಿಂದ ಸಿಗದ ಟಿಕೆಟ್- ಮೋದಿ, ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ ಕಾರ್ಯಕರ್ತರ ಪ್ರತಿಭಟನೆ

ಬಿಜೆಪಿಗೆ ಸೇರ್ಪಡೆಗೊಂಡಿರುವ 10 ಮಂದಿ ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ

- Advertisement -
- Advertisement -

ಈ ತಿಂಗಳು ನಡೆಯಲಿರುವ ಮಣಿಪುರ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದು ಟಿಕೆಟ್ ಆಕಾಂಕ್ಷಿಗಳಿಗೆ ಭಾರಿ ನಿರಾಸೆ ಉಂಟು ಮಾಡಿದ್ದು, ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಹಿಂಸಾತ್ಮಕ ಪ್ರತಿಭಟನೆ ನಡೆದಿವೆ. ಜೊತೆಗೆ ಹಲವು ಬಿಜೆಪಿ ಮುಖಂಡರ ರಾಜೀನಾಮೆಗೆ ಕಾರಣವಾಗಿದೆ.

ಬಿಜೆಪಿ ಬೆಂಬಲಿಗರು ಪ್ರಧಾನಿ ನರೇಂದ್ರ ಮೋದಿ ಮತ್ತು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪ್ರತಿಕೃತಿಗಳನ್ನು ದಹಿಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಬಿಜೆಪಿ ಧ್ವಜಕ್ಕೆ ಬೆಂಕಿ ಹಚ್ಚಿ, ರಸ್ತೆಗಿಳಿದು ಕಲ್ಲುತೂರಾಟ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ವಿವಿಧೆಡೆ ಪಕ್ಷದ ಕಚೇರಿಗಳನ್ನು ಧ್ವಂಸಗೊಳಿಸಲಾಗಿದ್ದು, ಹಲವು ಪ್ರದೇಶಗಳಲ್ಲಿ ಪ್ರತಿಭಟನಾಕಾರರು ಬಿಜೆಪಿ ವಿರುದ್ಧದ ಫಲಕಗಳನ್ನು ಹಿಡಿದು ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆಯಾಗಿ ಇಂಫಾಲದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯ ಸುತ್ತಮುತ್ತ ಬಿಗಿ ಭದ್ರತೆ  ಮಾಡಲಾಗಿದೆ.

ಇದನ್ನೂ ಓದಿ: ಮೌನಕ್ಕೆ ಶರಣಾದ ಯುಪಿ ಮತದಾರರು, ಆತಂಕದಲ್ಲಿ ಅಭ್ಯರ್ಥಿಗಳು

bgg96808

ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 60 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಬಿಜೆಪಿ ಘೋಷಿಸಿದೆ. ಬಿಜೆಪಿಗೆ ಸೇರ್ಪಡೆಗೊಂಡ ಕನಿಷ್ಠ 10 ಮಾಜಿ ಕಾಂಗ್ರೆಸ್ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಮಣಿಪುರ ಬಿಜೆಪಿ ಮೂರು ಮಹಿಳೆಯರು ಮತ್ತು ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಮಾತ್ರ ಕಣಕ್ಕಿಳಿಸಿದೆ. ಮುಖ್ಯಮಂತ್ರಿಯವರ ಬಹುತೇಕ ನಿಷ್ಠಾವಂತರಿಗೆ ಪಕ್ಷದ ಟಿಕೆಟ್ ಸಿಕ್ಕಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಪ್ರತಿಭಟನೆ ನಂತರ ಟಿಕೆಟ್ ಸಿಗದೆ ನಿರಾಶೆಗೊಂಡವರು ಬಿಜೆಪಿಗೆ ರಾಜೀನಾಮೆ ನೀಡಿ ಹೊರ ನಡೆಯುತ್ತಿದ್ದಾರೆ. ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಲಿರುವ ಕಾಂಗ್ರೆಸ್ ಅಥವಾ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವ ಆಸಕ್ತಿ ತೋರಿದ್ದಾರೆ. ಈಗಾಗಲೇ ಹಲವು ನಾಯಕರು ಕಾಂಗ್ರೆಸ್ ಸೇರಿದಂತೆ ಬೇರೆ ಪಕ್ಷಗಳಿಗೆ ಸೇರ್ಪಡೆಯಾಗಿದ್ದಾರೆ.

ಮೊಯಿರಾಂಗ್ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಪಿ.ಶರತ್ ಚಂದ್ರ ಸಿಂಗ್ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದಾರೆ. ಸೆಕ್ಮೈ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ನಿಂಗ್‌ತೋಜಮ್ ಬಿರೆನ್ ಮತ್ತು ನಿಂಗ್‌ತೋಜಮ್ ಜೋಯ್‌ಕುಮಾರ್ ಸಿಂಗ್ ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಬಿಜೆಪಿ ವಿರುದ್ಧ ಅಸಮಾಧಾನವಿರುವ ಇನ್ನೂ 12 ಬಿಜೆಪಿ ನಾಯಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇನ್ನು ಬಿಜೆಪಿಯಿಂದ ಪಕ್ಷಕ್ಕೆ ಬರುವವರಿಗೆ ಸ್ವಾಗತ ಎಂದು ಮಣಿಪುರ ಕಾಂಗ್ರೆಸ್ ಉಪಾಧ್ಯಕ್ಷ ಮತ್ತು ವಕ್ತಾರ ಕೆ.ಎಚ್.ದೇವಭ್ರತ ತಿಳಿಸಿದ್ದಾರೆ.

2017ರ ನಂತರ ಪಕ್ಷಕ್ಕೆ ಸೇರ್ಪಡೆಯಾದ ನಾಯಕರಿಗೆ ಬಿಜೆಪಿ ಮನ್ನಣೆ ನೀಡಿ ಟಿಕೆಟ್ ಘೋಷಿಸಿದೆ. ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ 16 ಮಂದಿ ಕಾಂಗ್ರೆಸ್‌ ನಾಯಕರಲ್ಲಿ ಹತ್ತು ಮಂದಿ ಕಾಂಗ್ರೆಸ್‌ನವರಿಗೆ ಟಿಕೆಟ್ ನೀಡಲಾಗಿದೆ. 4 ಮಂದಿ ಇತರ ಪಕ್ಷಗಳಿಂದ ಬಂದವರಿಗೂ ಟಿಕೆಟ್ ನೀಡಲಾಗಿದೆ.

2017 ರ ಚುನಾವಣೆಯಲ್ಲಿ, ಮಣಿಪುರದಲ್ಲಿ ಬಿಜೆಪಿ 21 ಸ್ಥಾನಗಳನ್ನು ಗೆದ್ದುಕೊಂಡಿತು. ಆದರೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ಸರ್ಕಾರ ರಚಿಸಿತು. ಈ ಪೈಕಿ 19 ಶಾಸಕರಿಗೆ ಪಕ್ಷದ ಟಿಕೆಟ್ ನೀಡಲಾಗಿದ್ದು, ಮೂವರನ್ನು ಕೈಬಿಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊಲೆಗಾರನೊಂದಿಗೆ ಕುಳಿತುಕೊಳ್ಳಲಾರೆ: ಬಿಜೆಪಿ ಸಂಸದನ ಉಪಸ್ಥಿತಿ ವಿರೋಧಿಸಿ ವೇದಿಕೆ ತ್ಯಜಿಸಿದ ಟಿಎಂಸಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....