Homeಮುಖಪುಟಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

ಮಣಿಪುರ:ಅಸ್ಸಾಂ ರೈಫಲ್ಸ್ ವಿರುದ್ಧ ಕೇಸ್ ದಾಖಲಿಸಿದ ಸ್ಥಳೀಯ ಪೊಲೀಸರು

- Advertisement -
- Advertisement -

ಮಣಿಪುರದಲ್ಲಿ ಅಸ್ಸಾಂ ರೈಪಲ್ಸ್ ಘಟಕದ ವಿರುದ್ಧ ಸ್ಥಳೀಯ ಪೊಲೀಸರು ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಡಿದ್ದಾರೆ.

ಮಣಿಪುರ ಪೊಲೀಸರು, ಅಸ್ಸಾಂ ರೈಫಲ್ಸ್ ಘಟಕದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.ಆಗಸ್ಟ್ 5 ರಂದು ತಮ್ಮ ಕರ್ತವ್ಯವನ್ನು ನಿರ್ವಹಿಸದಂತೆ ಪೊಲೀಸ್ ತಂಡವನ್ನು ಅಡ್ಡಿ ಮಾಡಿದ್ದಾರೆ ಮತ್ತು ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾದಲ್ಲಿ ಕುಕಿ ದಂಗೆಕೋರರು ಮೂವರು ಮೈತೈ ಜನರನ್ನು ಕೊಲೆ ಮಾಡಿ ಪಲಾಯನ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಷ್ಣುಪುರ್ ಜಿಲ್ಲೆಯ ಫೌಗಕ್ಚಾವೊ ಪೊಲೀಸ್ ಠಾಣೆಯಲ್ಲಿ ಈ ಕುರಿತು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಲಾಗಿದೆ. ಆಗಸ್ಟ್ 5 ರ ಬೆಳ್ಳಂಬೆಳಗ್ಗೆ ಮೂವರ ಹತ್ಯೆಯಾದಾಗಿನಿಂದ ಗುಂಡಿನ ಚಕಮಕಿಯ ಘಟನೆಗಳು ವರದಿಯಾಗಿವೆ.

ಮಣಿಪುರ ಪೊಲೀಸರು  ಅಸ್ಸಾಂ ರೈಫಲ್ಸ್ ಗಳ ಬದಲಿಗೆ ಸಿಆರ್‌ಪಿಎಫ್ ಮತ್ತು ಮಣಿಪುರ ಪೊಲೀಸ್ ಸಿಬ್ಬಂದಿಯನ್ನು ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್-ಕಾಂಗ್‌ವೈ ರಸ್ತೆಯ ಚೆಕ್ ಪೋಸ್ಟ್‌ನಲ್ಲಿ ನಿಯೋಜಿಸಲು ನಿರ್ಧರಿಸಿದ್ದಾರೆ.

ಮೈತೈ ಪ್ರಭಾವಿ ಮಹಿಳಾ ಜಾಗೃತ ವಿಭಾಗ “ಮೀರಾ ಪೈಬಿಸ್” ಅಸ್ಸಾಂ ರೈಫಲ್ಸ್ ನ್ನು ಸಂಘರ್ಷ ಪೀಡಿತ ರಾಜ್ಯದಿಂದ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಅಸ್ಸಾಂ ರೈಫಲ್ಸ್  ಪಕ್ಷಪಾತ ಮಾಡಿದೆ ಎಂದು ಆರೋಪಿಸಲಾಗಿದೆ.

ಇನ್ನೊಂದು ಕಡೆ ಅಸ್ಸಾಂ ರೈಫಲ್ಸ್ ಘಟಕ ಮತ್ತು ಭಾರತೀಯ ಸೇನೆ ಮೈತೈ ಮಹಿಳಾ ಗುಂಪುಗಳು ತಮ್ಮ ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಫೌಗಕ್‌ಚಾವೊ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ, ಆಗಸ್ಟ್ 5 ರಂದು ಬೆಳಿಗ್ಗೆ 6.30 ರ ಸುಮಾರಿಗೆ 9 ಅಸ್ಸಾಂ ರೈಫಲ್ಸ್‌ಗಳು ತಮ್ಮ ವಾಹನಗಳನ್ನು ಬಳಸಿ ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯಲ್ಲಿ ಪೊಲೀಸ್ ತಂಡವನ್ನು ತಡೆದಿದ್ದಾರೆ ಎಂದು ಪ್ರಭಾರಿ ಅಧಿಕಾರಿ ಎನ್. ದೇವದಾಸ್ ಸಿಂಗ್ ಆರೋಪಿಸಿದ್ದಾರೆ.

ಕ್ವಾಕ್ಟಾ ಮತ್ತು ಫೋಲ್ಜಾಂಗ್ ರಸ್ತೆಯ ನಡುವಿನ ಕ್ವಾಕ್ಟಾದ ವಾರ್ಡ್ ಸಂಖ್ಯೆ 8 ರಲ್ಲಿ ಕುಕಿ ದಂಗೆಕೋರರು ಆಶ್ರಯ ಪಡೆದಿದ್ದಾರೆ ಎಂಬ ಮಾಹಿತಿಯ ಆಧಾರದ ಮೇಲೆ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ. ಫೋಲ್ಜಾಂಗ್ ನೆರೆಯ ಚುರಾಚಂದಪುರ ಜಿಲ್ಲೆಯಲ್ಲಿದೆ.ಮೂವರು ಮೈತೈ ಸಮುದಾಯದ  ಹತ್ಯೆಯಲ್ಲಿ ಕುಕಿ ದಂಗೆಕೋರರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.ಆರೋಪಿಗಳಿಗೆ ಸುಲಭವಾಗಿ ತಪ್ಪಿಸಿಕೊಳ್ಳಲು ಅಸ್ಸಾಂ ರೈಫಲ್ಸ್ ಘಟಕ ಅನುವು ಮಾಡಿಕೊಟ್ಟಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೇ 3 ರಿಂದ ಮಣಿಪುರದಲ್ಲಿ ಮೈತೈ ಮತ್ತು ಕುಕಿ ಸಮುದಾಯಗಳ ನಡುವಿನ ಹಿಂಸಾಚಾರದಿಂದಾಗಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಭದ್ರತಾ ತಂಡಗಳ ನಿಯೋಜನೆಯ ಹೊರತಾಗಿಯೂ ಪರಿಸ್ಥಿತಿ ಇನ್ನೂ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ: ಮಹಾತ್ಮ ಗಾಂಧಿ ಮರಿ ಮೊಮ್ಮಗ ತುಷಾರ್ ಗಾಂಧಿ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...