Homeಮುಖಪುಟಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

ಮಣಿಪುರ ಸರ್ಕಾರ ಅತಂತ್ರ; ಆಗಸ್ಟ್ 10ಕ್ಕೆ ವಿಶ್ವಾಸ ಮತ ಪ್ರಕ್ರಿಯೆ- ಎನ್ ಬಿರೆನ್ ಸಿಂಗ್

- Advertisement -
- Advertisement -

ಮಣಿಪುರದಲ್ಲಿ ಅಂತಂತ್ರ ಸರ್ಕಾರ ನಿರ್ಮಾಣವಾಗಿದ್ದು ಆಡಳಿತರೂಢ ಎನ್‌ಡಿಎ ಮತ್ತು ವಿಪಕ್ಷ ಕಾಂಗ್ರೆಸ್ ಎರಡು ಸಂಕಷ್ಟದಲ್ಲಿವೆ. ಕಾಂಗ್ರೆಸ್ ತನ್ನ ಇಬ್ಬರು ಶಾಸಕರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಮುಂದಾದ ಸಂದರ್ಭದಲ್ಲಿ ಮುಖ್ಯಮಂತ್ರಿ ಎನ್. ಬಿರೆನ್ ಸಿಂಗ್ ಅವರು ಆಗಸ್ಟ್ 10 ಸೋಮವಾರದಂದು ವಿಶ್ವಾಸಮತ ಯಾಚನೆಗೆ ಮುಂದಾಗಿದ್ದಾರೆ.

ರಾಜ್ಯಸಭಾ ಚುನಾವಣೆಯ ವೇಳೆ ತಮ್ಮ ಪಕ್ಷದ ಇಬ್ಬರು ಶಾಸಕರು ವಿಪ್‌ ಉಲ್ಲಂಘಿಸಿರುವುದರ ಕುರಿತು ನೀಡಿರುವ ನೋಟಿಸ್‌ಗೆ ಅವರ ಉತ್ತರ ತೃಪ್ತಿದಾಯಕವಾಗಿಲ್ಲ. ಇಂತಹ ಸಮಯದಲ್ಲಿ ವಿಶ್ವಾಸಮತ ಯಾಚನೆ ನಡೆಯುವುದು ಸರಿಯಿಲ್ಲ ಎಂದು ಕಾಂಗ್ರೆಸ್ ಹೇಳಿದೆ.

ಮುಖ್ಯಮಂತ್ರಿಯವರು ವಿಶ್ವಾಸಮತ ಯಾಚನೆಗೆ ಮುಂದಾಗಿರುವುದರಿಂದ ಕಾಂಗ್ರೆಸ್ ಈ ಹಿಂದೆ ಮಂಡಿಸಿದ ವಿಶ್ವಾಸಮತಮತದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ತಿರಸ್ಕರಿಸಲಾಗಿದೆ ಎಂದು ಮಣಿಪುರ ವಿಧಾನಸಭಾ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

60 ಸದಸ್ಯ ಬಲದ ಮಣಿಪುರ ವಿಧಾನ ಸಭೆಯಲ್ಲಿ ಒಬ್ಬರು ರಾಜಿನಾಮೆ ನೀಡಿದ್ದಾರೆ. 6 ಜನರನ್ನು ಅನರ್ಹಗೊಳಿಸಲಾಗಿದೆ. ಉಳಿದ 53 ಸದಸ್ಯರಲ್ಲಿ ಕಾಂಗ್ರೆಸ್ 24, ಬಿಜೆಪಿ 18, ಎನ್‌ಪಿಪಿ 4, ಎನ್‌ಪಿಎಫ್ 4, ಎಲ್‌ಜೆಪಿ 1, ಟಿಎಂಸಿ 1 ಹಾಗೂ ಒಬ್ಬ ಸ್ವಾತಂತ್ರ್ಯ ಸದಸ್ಯರನ್ನು ಹೊಂದಿದೆ.

ಜೂನ್‌ನಲ್ಲಿ ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿ ಲೀಶೆಂಬಾ ಸನಾಜೋಬಾ ಪರವಾಗಿ ಮತ ಚಲಾಯಿಸಿದ್ದಕ್ಕಾಗಿ ಇಬ್ಬರು ಶಾಸಕರಾದ ಆರ್‌ಕೆ ಇಮೋ ಸಿಂಗ್ ಮತ್ತು ಒಕ್ರಮ್ ಹೆನ್ರಿ ಸಿಂಗ್ ತಮಗೆ ನೀಡಿದ ಶೋ-ಕಾಸ್ ನೋಟಿಸ್‌ಗೆ ನೀಡಿದ ಉತ್ತರದಿಂದ ಪಕ್ಷವು ತೃಪ್ತಿ ಹೊಂದಿಲ್ಲ ಎಂದು ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಎಂ ಒಕೆಂಡ್ರೊ ಹೇಳಿದ್ದಾರೆ.

“ನಾವು ಈ ಪ್ರಕರಣವನ್ನು ಮುಂದಿನ ಕ್ರಮಗಳಿಗಾಗಿ ಪಕ್ಷದ ಶಿಸ್ತಿನ ಕ್ರಿಯಾ ಸಮಿತಿಗೆ ಕಳುಹಿಸುತ್ತಿದ್ದೇವೆ. ಏಕೆಂದರೆ ಅವರ ವಿವರಣೆಗಳು ತೃಪ್ತಿಕರವಾಗಿಲ್ಲ” ಎಂದು ಒಕೆಂಡ್ರೊ ತಿಳಿಸಿದ್ದಾರೆ.

ಆಗಸ್ಟ್ 10 ರಂದು ನಡೆಯುವ ಒಂದು ದಿನದ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಲು ಮತ್ತು ಅವಿಶ್ವಾಸ ನಿರ್ಣಯಕ್ಕೆ ಬೆಂಬಲವಾಗಿ ಮತ ಚಲಾಯಿಸಲು 24 ಜನ ಶಾಸಕರಿಗೆ ಕಾಂಗ್ರೆಸ್ ವಿಪ್ ನೀಡಿದೆ. ಅದರಲ್ಲಿ ಆ ಇಬ್ಬರು ಶಾಸಕರು ಸೇರಿದ್ದಾರೆ.

ಓ ಇಬೋಬಿ ಸಿಂಗ್ ನೇತೃತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಧಾರಕ್ಕೆ ಅನುಗುಣವಾಗಿ ಮತ ಚಲಾಯಿಸುವಂತೆ ಎಲ್ಲ ಸದಸ್ಯರಿಗೆ ನಿರ್ದೇಶಿಸಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಗೋವಿಂದಾಸ್ ಕೊಂಥೌಜಮ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಯಂತೆಯೇ ಸೋಮವಾರ ವಿಶ್ವಾಸಮತಯಾಚನೆ ನಡೆದರೂ ಹಲವಾರು ಕಾಂಗ್ರೆಸ್ ಶಾಸಕರು ನಮ್ಮ ಸರ್ಕಾರವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಆದರೂ ಕಾಂಗ್ರೆಸ್‌ ಮುಖಂಡ ಒಕೆಂಡ್ರೊ ಆತ್ಮವಿಶ್ವಾಸದಿಂದ “ಸ್ವಲ್ಪ ಕಾದು ನೋಡಿ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಮಣಿಪುರದಲ್ಲಿ ಆಪರೇಷನ್ ಹಸ್ತ: ಸರ್ಕಾರ ಉಳಿಸಿಕೊಳ್ಳಲು CBI ಅಸ್ತ್ರ ಬಳಸಿತೇ BJP?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...