Homeಮುಖಪುಟಮಣಿಪುರ| ಹಮರ್ ಬುಡಕಟ್ಟು ನಾಯಕನ ಮೇಲೆ ಹಲ್ಲೆ; ಚುರಾಚಂದ್‌ಪುರದಲ್ಲಿ ಕರ್ಫ್ಯೂ ಜಾರಿ

ಮಣಿಪುರ| ಹಮರ್ ಬುಡಕಟ್ಟು ನಾಯಕನ ಮೇಲೆ ಹಲ್ಲೆ; ಚುರಾಚಂದ್‌ಪುರದಲ್ಲಿ ಕರ್ಫ್ಯೂ ಜಾರಿ

- Advertisement -
- Advertisement -

ಮಣಿಪುರದ ಕುಕಿ ಪ್ರಾಬಲ್ಯದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಹಮರ್ ಬುಡಕಟ್ಟು ಸಂಘಟನೆಯ ನಾಯಕನನ್ನು ಅಪರಿಚಿತ ಜನರು ಥಳಿಸಿದ ನಂತರ ಕರ್ಫ್ಯೂ ವಿಧಿಸಲಾಗಿದೆ. ಇದು ಹಮರ್ ಬುಡಕಟ್ಟು ಜನರಿಂದ ಭಾರಿ ಪ್ರತಿಭಟನೆಗೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಮರ್ ಇನ್‌ಪುಯಿ ಪ್ರಧಾನ ಕಾರ್ಯದರ್ಶಿ ರಿಚರ್ಡ್ ಹಮರ್ ಅವರ ವಾಹನವು ದ್ವಿಚಕ್ರ ವಾಹನ ಸವಾರನೊಂದಿಗೆ ಅಪಘಾತಕ್ಕೀಡಾದಾಗ ವಾಗ್ವಾದ ಪ್ರಾರಂಭವಾಯಿತು.

ಹಮರ್ ಬುಡಕಟ್ಟು ಜನಾಂಗದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ನಾಯಕನನ್ನು ಜನರ ಗುಂಪೊಂದು ಥಳಿಸಿದಾಗ ವಿವಾದ ಉಲ್ಬಣಗೊಂಡಿತು ಎಂದು ಅವರು ಹೇಳಿದರು.

“ರಿಚರ್ಡ್‌ ಹಮರ್ ಇನ್ಪುಯಿ ಪ್ರಧಾನ ಕಾರ್ಯದರ್ಶಿ ಮನೆಗೆ ಹೋಗುವಾಗ ಕೆಲವು ಪುರುಷರ ಗುಂಪೊಂದು ಅವರನ್ನು ಹಿಡಿದು, ಝೆನ್‌ಹಾಂಗ್ ಲಮ್ಕಾದ ವಿಕೆ ಮಾಂಟೆಸ್ಸರಿ ಶಾಲೆಯ ಆವರಣದಲ್ಲಿ ತನ್ನ ಗುರುತು ಹೇಳಿದ ನಂತರವೂ ಅವರ ಕಣ್ಣುಗಳಿಗೆ ಬಟ್ಟೆ ಕಟ್ಟಿ ನಿರಂತರವಾಗಿ ಥಳಿಸಿದರು. ರಿಚರ್ಡ್ ಹಮರ್ ಮೇಲೆ ಹಲ್ಲೆ ನಡೆಸಿದ ಸ್ವಲ್ಪ ಸಮಯದ ನಂತರ, ಪ್ರಧಾನ ಕಾರ್ಯದರ್ಶಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಹಮರ್ ಇನ್ಪುಯಿ ಭಾನುವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗಡುವು ಮುಗಿದ ನಂತರ, ಚುರಾಚಂದ್‌ಪುರದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಹಮರ್ ಬುಡಕಟ್ಟಿನ ನೂರಾರು ಸದಸ್ಯರು ಬೀದಿಗಿಳಿದು ಘೋಷಣೆಗಳನ್ನು ಕೂಗುತ್ತಾ ಕಲ್ಲುಗಳನ್ನು ಎಸೆದರು ಎಂದು ಮೂಲಗಳು ತಿಳಿಸಿವೆ.

ಉಲ್ಬಣಗೊಳ್ಳುವ ನಿರೀಕ್ಷೆಯಿದ್ದ ಅಧಿಕಾರಿಗಳು, 2023 ರ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ರ ಸೆಕ್ಷನ್ 163 ರ ಅಡಿಯಲ್ಲಿ ಪಟ್ಟಣದಲ್ಲಿ ಕರ್ಫ್ಯೂ ಜಾರಿಗೊಳಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳನ್ನು ಕರೆದರು ಎಂದು ಮೂಲಗಳು ತಿಳಿಸಿವೆ.

ಚುರಾಚಂದ್‌ಪುರ ಮೂಲದ ಮೂಲಗಳು ತಿಳಿಸಿರುವ ಪ್ರಕಾರ, ಝೋಮಿ ಬುಡಕಟ್ಟು ಜನಾಂಗದವರ ವಿರುದ್ಧ ಹಮರ್ ಮತ್ತು ಕುಕಿ ಬುಡಕಟ್ಟು ಜನಾಂಗದವರ ಗುಂಪಿನ ನಡುವೆ ಘರ್ಷಣೆಮ ಕಲ್ಲು ತೂರಾಟಗಳು ವರದಿಯಾಗಿವೆ.

ಸ್ಥಳದ ದೃಶ್ಯಗಳಲ್ಲಿ ಪ್ರತಿಭಟನಾಕಾರರು ಮೊಬೈಲ್ ಟವರ್‌ನಿಂದ ಜೋಮಿ ಬುಡಕಟ್ಟು ಜನಾಂಗದವರು ಬಳಸುತ್ತಿದ್ದ ಧ್ವಜವನ್ನು ಕಿತ್ತೆಸೆದಿರುವುದನ್ನು ತೋರಿಸಲಾಗಿದೆ.

ಹತ್ರಾಸ್| ಹಲವು ವಿದ್ಯಾರ್ಥಿನಿಯರ ಮೇಲೆ ಪ್ರಾಧ್ಯಾಪಕರಿಂದ ಲೈಂಗಿಕ ದೌರ್ಜನ್ಯ; ವೀಡಿಯೊಗಳು ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...