Homeಮುಖಪುಟಎಸ್‌ಟಿ ಪಟ್ಟಿಗೆ 'ಮೈತೇಯಿ' ಸೇರ್ಪಡೆ ನಿರ್ದೇಶನ ರದ್ದುಗೊಳಿಸಿದ ಮಣಿಪುರ ಹೈಕೋರ್ಟ್‌

ಎಸ್‌ಟಿ ಪಟ್ಟಿಗೆ ‘ಮೈತೇಯಿ’ ಸೇರ್ಪಡೆ ನಿರ್ದೇಶನ ರದ್ದುಗೊಳಿಸಿದ ಮಣಿಪುರ ಹೈಕೋರ್ಟ್‌

- Advertisement -
- Advertisement -

ಮಣಿಪುರದಲ್ಲಿ ಹಿಂಸಾಚಾರ ಭುಗಿಲೇಳಲು ಕಾರಣವಾಗಿದ್ದ ಮೈತೇಯಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರ್ಪಡೆ ಮಾಡುವಂತೆ ತಾನು ರಾಜ್ಯ ಸರ್ಕಾರಕ್ಕೆ ನೀಡಿದ್ದ ನಿರ್ದೇಶನವನ್ನು ಮಣಿಪುರ ಹೈಕೋರ್ಟ್‌ ರದ್ದುಗೊಳಿಸಿದೆ.

ನ್ಯಾಯಾಲಯಗಳು ಎಸ್‌ಟಿ ಪಟ್ಟಿಯನ್ನು ಮಾರ್ಪಡಿಸಲು, ತಿದ್ದುಪಡಿ ಮಾಡಲು ಅಥವಾ ಬದಲಾಯಿಸಲು ಸಾಧ್ಯವಿಲ್ಲ ಎಂದು ಮಹಾರಾಷ್ಟ್ರ ಸರ್ಕಾರ ಮತ್ತು ಮಿಲಿಂದ್‌ ಹಾಗೂ ಇನ್ನಿತರರ ನಡುವಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿಗೆ ಈ ನಿರ್ದೇಶನ ವಿರುದ್ಧವಾಗಿದೆ ಎಂದು ತಿಳಿಸಿರುವ ನ್ಯಾ. ಗೊಲ್ಮೇಯಿ ಗೈಫುಲ್‌ಶಿಲು ನಿರ್ದೇಶನವನ್ನು ಆದೇಶದಿಂದ ತೆಗೆದುಹಾಕಲು ಸೂಚಿಸಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಈ ವಿವಾದಾತ್ಮಕ ನಿರ್ದೇಶನವನ್ನು ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಂ ವಿ ಮುರಳೀಧರನ್ ಅವರು ಮಾರ್ಚ್ 27, 2023 ರಂದು ರಾಜ್ಯ ಸರ್ಕಾರಕ್ಕೆ ನೀಡಿದ್ದರು.

ಇದು ಕಳೆದ ವರ್ಷ ರಾಜ್ಯದಲ್ಲಿ ವ್ಯಾಪಕ ಹಿಂಸಾಚಾರಕ್ಕೆ ಕಾರಣವಾಗಿತ್ತು. ಅಂತಿಮವಾಗಿ ಸುಪ್ರೀಂ ಕೋರ್ಟ್‌ ಸ್ವಯಂಪ್ರೇರಿತವಾಗಿ ವಿಚಾರಣೆಗೆ ಮುಂದಾಗುವಂತೆ ಮಾಡಿತ್ತು. ನಂತರ ನ್ಯಾಯಮೂರ್ತಿ ಮುರಳೀಧರನ್ ಅವರನ್ನು ಕಲ್ಕತ್ತಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿತ್ತು.

ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಆಲಿಸಲು ಮಣಿಪುರ ಹೈಕೋರ್ಟ್‌ ವಿಭಾಗೀಯ ಪೀಠ ಕಳೆದ ಅಕ್ಟೋಬರ್‌ನಲ್ಲಿ ಸಮ್ಮತಿಸಿತ್ತು. 2023ರ ತೀರ್ಪು ಹೊರಬಿದ್ದ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ತಮ್ಮನ್ನು ಪಕ್ಷಕಕಾರರನ್ನಾಗಿ ಮಾಡಿಕೊಂಡಿಲ್ಲ ಎಂದು ಅಖಿಲ ಮಣಿಪುರ ಬುಡಕಟ್ಟು ಒಕ್ಕೂಟ ಮತ್ತು ವಿವಿಧ ಗುಂಪುಗಳು ಮೇಲ್ಮನವಿ ಸಲ್ಲಿಸಿದ್ದವು.

ಮಣಿಪುರದ 34 ಮಾನ್ಯತೆ ಪಡೆದ ಬುಡಕಟ್ಟು ಜನಾಂಗಗಳ ಮೂಲಭೂತ ಮತ್ತು ಸಾಂವಿಧಾನಿಕ ಹಕ್ಕುಗಳ ಮೇಲೆ 2023ರ ತೀರ್ಪು ಪ್ರತಿಕೂಲ ಪರಿಣಾಮ ಬೀರಿದೆ. ಮೈತೇಯಿ ಸಮುದಾಯ ಆರ್ಥಿಕವಾಗಿ, ರಾಜಕೀಯವಾಗಿ ಮತ್ತು ಶೈಕ್ಷಣಿಕವಾಗಿ ಮುಂದುವರಿದಿರುವುದರಿಂದ, ವಿಧಾನಸಭೆ ಸೇರಿದಂತೆ ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಸ್ಥಾನಗಳನ್ನು ಅದು ಕಸಿದುಕೊಳ್ಳಲಿದೆ ಎಂದು ವಾದಿಸಲಾಗಿತ್ತು.

ತೀರ್ಪಿನಿಂದ ಬುಡಕಟ್ಟು ಸಮುದಾಯವನ್ನು ಪ್ರತಿನಿಧಿಸುವ ಗುಂಪುಗಳ ಯಾವುದೇ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ನ್ಯಾ. ಮುರಳೀಧರನ್‌ ಅವರಿಂದ ನಿರ್ದೇಶನ ಪಡೆದಿದ್ದ ಮೂಲ ಅರ್ಜಿದಾರರು ಸಮರ್ಥಿಸಿಕೊಂಡಿದ್ದರು.

ಮೈತೇಯಿ ಸಮುದಾಯವನ್ನು ಎಸ್‌ಟಿ ಸಮುದಾಯಕ್ಕೆ ಸೇರ್ಪಡೆ ಮಾಡುವನ್ನು ಸರ್ಕಾರ ಪರಿಗಣಿಸಬೇಕು. ಆದರೆ ಈ ಕುರಿತು ನಿರ್ಧಾರ ಕೈಗೊಳ್ಳುವುದು ಸಂಪೂರ್ಣವಾಗಿ ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಅರ್ಜಿದಾರರು ವಿವರಿಸಿದ್ದರು. ಈ ಮಧ್ಯೆ ಹೈಕೋರ್ಟ್‌ಗೆ ತೀರ್ಪನ್ನು ಮರುಪರಿಶೀಲಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಕಳೆದ 15 ವರ್ಷಗಳಲ್ಲಿ ಪುನರಾಯ್ಕೆಗೊಂಡಿರುವ 23 ಸಂಸದರ ಆಸ್ತಿ ಮೌಲ್ಯ ಸರಾಸರಿ ಶೇ.1,045ರಷ್ಟು ಏರಿಕೆ: ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...