Homeಮುಖಪುಟಮಣಿಪುರ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಮೊದಲ ಬುಡಕಟ್ಟು ಮಹಿಳೆ ನೇಮಕ

ಮಣಿಪುರ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಮೊದಲ ಬುಡಕಟ್ಟು ಮಹಿಳೆ ನೇಮಕ

- Advertisement -
- Advertisement -

ಮದ್ರಾಸ್ ಮತ್ತು ಮಣಿಪುರದ ಹೈಕೋರ್ಟ್‌ಗಳಲ್ಲಿ ಮೂವರು ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದು, ಮಣಿಪುರದಲ್ಲಿ ಇದೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆ ಓರ್ವರು ಹೈಕೋರ್ಟ್‌ ಜಡ್ಜ್‌ ಆಗಿ ನೇಮಕಗೊಂಡಿದ್ದಾರೆ.

ಕೇಂದ್ರ ಸರ್ಕಾರ ನೇಮಿಸಿರುವ ಮೂವರು ಜಡ್ಜ್‌ಗಳಲ್ಲಿ ಓರ್ವರು ಬುಡಕಟ್ಟು ಮಹಿಳೆ ಮತ್ತೋರ್ವರು ಪರಿಶಿಷ್ಟ ಜಾತಿಗೆ ಸೇರಿದವರು ಹಾಗೂ ಮತ್ತೊಬ್ಬರು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಈ ಕುರಿತ ಅಧಿಸೂಚನೆ ಶೀಘ್ರದಲ್ಲೇ ಹೊರಬೀಳಲಿದೆ.

ಗೊಲ್ಮೀ ಗೈಫುಲ್ ಶಿಲ್ಲು ಕಬೈ ಅವರ ನೇಮಕಾತಿ ಪ್ರಸ್ತಾಪ ಕಳೆದ ಜ.10ರಿಂದ ಬಾಕಿ ಇತ್ತು. ಇತರ ಇಬ್ಬರು ವಕೀಲರಾದ ಎನ್.ಸೆಂಥಿಲ್ ಕುಮಾರ್ ಮತ್ತು ಜಿ.ಅರುಲ್ ಮುರುಗನ್ ಅವರು ಮದ್ರಾಸ್ ಹೈಕೋರ್ಟ್‌ಗೆ ನೇಮಕಗೊಂಡಿದ್ದಾರೆ.

ಭಾರತದ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ಕೊಲಾಜಿಯಂ ಈ ಹೆಸರುಗಳನ್ನು ಶಿಫಾರಸ್ಸು ಮಾಡಿತ್ತು.

ಸೆಂಥಿಲ್‌ಕುಮಾರ್ ಅವರು ಬಾರ್‌ನಲ್ಲಿ 28 ವರ್ಷಗಳಿಗಿಂತ ಅಧಿಕ ಕಾಲ ಸದಸ್ಯತ್ವವನ್ನು ಹೊಂದಿದ್ದಾರೆ. ಮದ್ರಾಸ್ ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಕ್ರಿಮಿನಲ್, ಸೇವಾ ಮತ್ತು ಸಿವಿಲ್‌ ವಲಯಗಳಲ್ಲಿ ಅನುಭವವನ್ನು ಹೊಂದಿದ್ದಾರೆ. ಇದಲ್ಲದೆ ಅವರು ಪರಿಶಿಷ್ಟ ಜಾತಿಗೆ ಸೇರಿದವರು. ಅವರನ್ನು ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕ ಮಾಡುವುದರಿಂದ ಅಂಚಿನಲ್ಲಿರುವ ಸಮುದಾಯಗಳಿಗೆ ಪೀಠದಲ್ಲಿ ಪ್ರಾತಿನಿಧ್ಯವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗಿದೆ.

ಮುರುಗನ್ ಅವರು ಬಾರ್‌ನಲ್ಲಿ 24 ವರ್ಷಗಳ ಕಾಲ ಸದಸ್ಯತ್ವವನ್ನು ಹೊಂದಿದ್ದಾರೆ ಮತ್ತು ಸಿವಿಲ್, ಕ್ರಿಮಿನಲ್ ಮತ್ತು ರಿಟ್ ಪ್ರಕರಣಗಳಲ್ಲಿ ಪರಿಣತಿ ಹೊಂದಿದ್ದಾರೆ ಎಂದು ಕೊಲಿಜಿಯಂ ಗಮನಸೆಳೆದಿದೆ. ಅವರು ಒಬಿಸಿ ವರ್ಗಕ್ಕೆ ಸೇರಿದವರು. ನ್ಯಾಯಾಧೀಶರಾಗಿ ಅವರ ನೇಮಕವು ಉನ್ನತ ನ್ಯಾಯಾಂಗದ ನೇಮಕಾತಿಯಲ್ಲಿ OBC ಗಳಿಗೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿದಂತಾಗುತ್ತದೆ ಎಂದು ಹೇಳಲಾಗಿದೆ.

ಮಾರ್ಚ್‌ನಲ್ಲಿ ಲೋಕಸಭೆಯಲ್ಲಿ ಸರ್ಕಾರ ಮಂಡಿಸಿದ ಮಾಹಿತಿಯ ಪ್ರಕಾರ, 2018 ರಿಂದ ನೇಮಕಗೊಂಡ 575 ಹೈಕೋರ್ಟ್ ನ್ಯಾಯಾಧೀಶರಲ್ಲಿ 67 ಒಬಿಸಿ ವರ್ಗಕ್ಕೆ, 17 ಎಸ್‌ಸಿ ವರ್ಗಕ್ಕೆ, 9 ಎಸ್‌ಟಿ ವರ್ಗಕ್ಕೆ ಮತ್ತು 18 ಅಲ್ಪಸಂಖ್ಯಾತ ಸಮುದಾಯಗಳಿಗೆ ಸೇರಿದವರಾಗಿದ್ದಾರೆ.

ಇದನ್ನು ಓದಿ: ಮಣಿಪುರ: ಮೈತಿ ವಿದ್ಯಾರ್ಥಿಗಳ ಬರ್ಬರ ಹತ್ಯೆ ಪ್ರಕರಣ; ಐದನೇ ಆರೋಪಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...