Homeಮುಖಪುಟಮೈತಿ ವಿದ್ಯಾರ್ಥಿಗಳ ಹತ್ಯೆ ಖಂಡಿಸಿ ಪ್ರತಿಭಟನೆ: ಮಣಿಪುರದಲ್ಲಿ ಪುನಃ ಇಂಟರ್‌ನೆಟ್‌ ನಿಷೇಧ

ಮೈತಿ ವಿದ್ಯಾರ್ಥಿಗಳ ಹತ್ಯೆ ಖಂಡಿಸಿ ಪ್ರತಿಭಟನೆ: ಮಣಿಪುರದಲ್ಲಿ ಪುನಃ ಇಂಟರ್‌ನೆಟ್‌ ನಿಷೇಧ

- Advertisement -
- Advertisement -

ಜುಲೈನಲ್ಲಿ ನಾಪತ್ತೆಯಾಗಿದ್ದ ಮೈತಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ಘಟನೆ ಬೆನ್ನಲ್ಲೇ ಮಂಗಳವಾರ ಮಣಿಪುರ ಸರ್ಕಾರವು ಮುಂದಿನ ಐದು ದಿನಗಳವರೆಗೆ ಇಂಟರ್ನೆಟ್ ಸೇವೆಗಳ ಮೇಲೆ ಪುನಃ ನಿಷೇಧ ಹೇರಿದೆ.

ಮೇ 3ರಂದು ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರ ಆರಂಭವಾದ ನಂತರ ಇಂಟರ್‌ನೆಟ್‌ ನಿಷೇಧ ಹೇರಲಾಯಿತು. ಸೆಪ್ಟೆಂಬರ್ 23ರಂದು ರಾಜ್ಯದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಪುನಃ ಆರಂಭಿಸಲಾಗಿತ್ತು.

ಸೆಪ್ಟೆಂಬರ್ 27 ಮತ್ತು 28ರಂದು ಮಣಿಪುರದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಸರ್ಕಾರ ಮಂಗಳವಾರ ಆದೇಶಿಸಿದೆ.

ವಿದ್ಯಾರ್ಥಿಗಳಾದ ಹಿಜಾಮ್ ಲಿಂತೋಯಿಂಗಂಬಿ (17) ಮತ್ತು ಫಿಜಾಮ್ ಹೆಮ್ಜಿತ್ (20) ಅವರನ್ನು ಕುಕಿ ಉಗ್ರಗಾಮಿಗಳು ಕೊಂದಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಇಂಫಾಲ್ ಪೊಲೀಸರು ತಿಳಿಸಿದ್ದಾರೆ. ಅವರು ಕೊನೆಯದಾಗಿ ಜುಲೈ 6ರಂದು ಚುರಾಚಂದ್‌ಪುರ ಜಿಲ್ಲೆಯ ಪ್ರವಾಸಿ ತಾಣದಲ್ಲಿ ಕಾಣಿಸಿಕೊಂಡಿದ್ದರು.

ಭಾನುವಾರ, ಅವರ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಒಂದು ಫೋಟೋದಲ್ಲಿ, ಇಬ್ಬರು ವಿದ್ಯಾರ್ಥಿಗಳು ಪರಸ್ಪರರ ಪಕ್ಕದಲ್ಲಿ ಕುಳಿತಿರುವುದನ್ನು ಕಾಣಬಹುದು ಮತ್ತು ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಅವರ ಹಿಂದೆ ನಿಂತಿರುವುದನ್ನು ಕಾಣಬಹುದು. ಮತ್ತೊಂದು ಫೋಟೋದಲ್ಲಿ, ಅವರ ದೇಹಗಳು ನೆಲದ ಮೇಲೆ ಬಿದ್ದಿರುವುದು ಕಂಡುಬರುತ್ತದೆ, ಅವುಗಳಲ್ಲಿ ಒಂದು ಶಿರಚ್ಛೇದ ಮಾಡಲಾಗಿದೆ.

ಪ್ರಕರಣದ ವಿಚಾರಣೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವರ್ಗಾಯಿಸಲಾಗಿದೆ ಎಂದು ಮಣಿಪುರ ಸರ್ಕಾರ ಸೋಮವಾರ ತಿಳಿಸಿದೆ. ನಾಗರಿಕರು ಸಂಯಮದಿಂದ ವರ್ತಿಸಬೇಕು ಮತ್ತು ಇಬ್ಬರು ವಿದ್ಯಾರ್ಥಿಗಳ ಹತ್ಯೆಯ ತನಿಖೆಗೆ ಅಧಿಕಾರಿಗಳಿಗೆ ಅವಕಾಶ ನೀಡಬೇಕು ಎಂದು ಅದು ಒತ್ತಾಯಿಸಿದೆ.

ಆದಾಗ್ಯೂ, ಸರ್ಕಾರದ ಮನವಿಯ ಹೊರತಾಗಿಯೂ ಮಂಗಳವಾರ ಸಾವಿರಾರು ವಿದ್ಯಾರ್ಥಿಗಳು ಹತ್ಯೆಯನ್ನು ವಿರೋಧಿಸಿ ಇಂಫಾಲ್‌ನಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಹಾರಿಸುವುದನ್ನು ವೀಡಿಯೊಗಳು ತೋರಿಸಿವೆ.

ಸಂಜೆ, ಪ್ರತಿಭಟನೆಗಳು ಇನ್ನೂ ಜೋರಾಗಿ ಬೆಳೆದವು, ವಿಶೇಷವಾಗಿ ಸಿಂಗ್ಜಮೇಯ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತೆ ಅಶ್ರುವಾಯು ಶೆಲ್‌ಗಳನ್ನು ಬಳಸಿವೆ.

ಅಪರಾಧಿಗಳನ್ನು ಬಂಧಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಿಕಟವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜ್ಯದ ಜನತೆಗೆ ಭರವಸೆ ನೀಡಿದರು.

ಇದನ್ನೂ ಓದಿ: ಮಣಿಪುರದಲ್ಲಿ ಇಂದಿನಿಂದ ಇಂಟರ್‌ನೆಟ್ ನಿಷೇಧ ತೆರವು: ಸಿಎಂ ಬಿರೇನ್ ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...