Homeಮುಖಪುಟಮಣಿಪುರ | ಜಿರಿಬಾಮ್ ಸೇರಿದಂತೆ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನಃ AFSPA ಹೇರಿದ ಕೇಂದ್ರ...

ಮಣಿಪುರ | ಜಿರಿಬಾಮ್ ಸೇರಿದಂತೆ 6 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪುನಃ AFSPA ಹೇರಿದ ಕೇಂದ್ರ ಸರ್ಕಾರ

- Advertisement -
- Advertisement -

ಮಣಿಪುರದ ಕಣಿವೆ ಪ್ರದೇಶಗಳ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯಿದೆಯನ್ನು (AFSPA) ಮರು ಜಾರಿಗೊಳಿಸಿ ಕೇಂದ್ರ ಗೃಹ ಸಚಿವಾಲಯ (ಎಂಎಚ್‌ಎ) ಗುರುವಾರ ಆದೇಶ ಹೊರಡಿಸಿದೆ. ಸುಮಾರು 19 ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದ ಹಿನ್ನಲೆ ಈ ಪ್ರದೇಶಗಳನ್ನು ಕಾಯಿದೆ ಜಾರಿಯಾಗುವಂತೆ ‘ಅಡಚಣೆಯ ಪ್ರದೇಶಗಳು’ (Disturbed Areas)’ ಎಂದು ಘೋಷಿಸಲಾಗಿದೆ. ಮಣಿಪುರ

ರಾಜ್ಯದ ಮೈತೇಯಿ ಪ್ರಾಬಲ್ಯವಿರುವ ಕಣಿವೆ ಪ್ರದೇಶಗಳಲ್ಲಿನ 19 ಪೊಲೀಸ್ ಠಾಣೆಗಳನ್ನು ಹೊರತುಪಡಿಸಿ ಮಣಿಪುರದಾದ್ಯಂತ ಜಾರಿಯಲ್ಲಿದ್ದ ‘ಡಿಸ್ಟರ್ಬ್ಡ್ ಏರಿಯಾಸ್’ ಸ್ಥಿತಿಯನ್ನು ಈಗ ವಿಸ್ತರಿಸಲಾಗಿದೆ. ಇಂಫಾಲ್ ಪಶ್ಚಿಮದ ಸೆಕ್ಮಾಯಿ ಮತ್ತು ಲಮ್ಸಾಂಗ್ ಪೊಲೀಸ್ ಠಾಣೆಗಳು, ಇಂಫಾಲ್ ಪೂರ್ವದ ಲಾಮ್ಲೈ, ಬಿಷ್ಣುಪುರದಲ್ಲಿ ಮೊಯಿರಾಂಗ್, ಲೀಮಾಖೋಂಗ್ ಕಾಂಗ್ಪೊಕ್ಪಿ, ಮತ್ತು ಜಿರಿಬಾಮ್ ಪೊಲೀಸ್ ಠಾಣೆ ಈ ವಿಸ್ತರಣೆಯಲ್ಲಿ ಸೇರಿದೆ ಎಂದು ಅಧಿಸೂಚನೆಯಲ್ಲಿ ಗೃಹ ಸಚಿವಾಲಯ ಹೇಳಿದೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯಾವುದೇ ಕಾನೂನು ಅಥವಾ ಸುವ್ಯವಸ್ಥೆಗೆ ವಿರುದ್ಧವಾಗಿ ವರ್ತಿಸುವ ಯಾವುದೇ ವ್ಯಕ್ತಿಯ ವಿರುದ್ಧ ಗುಂಡು ಹಾರಿಸಲು ಅಥವಾ ಬಲವನ್ನು ಪ್ರಯೋಗಿಸಲು ಸಶಸ್ತ್ರ ಪಡೆಗಳ ಅಧಿಕಾರಿಗೆ AFSPA ಕಾಯಿದೆಯು ಅಧಿಕಾರ ನೀಡುತ್ತದೆ. ಗುಂಡು ಹಾರಿಸುವಾಗ ವ್ಯಕ್ತಿಯು ಸಾವಿಗೀಡಾದರೂ ಕೂಡಾ ಕಾಯಿದೆಯು ಗುಂಡು ಹಾರಿಸಲು ಪಡೆಗಳಿಗೆ ಅಧಿಕಾರ ನೀಡುತ್ತದೆ. ಅದೇ ವೇಳೆ ಕಾಯಿದೆಯ ಅಡಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿಯನ್ನು ಕಾನೂನು ಕ್ರಮದಿಂದ ಕಾಯಿದೆಯು ರಕ್ಷಿಸುತ್ತದೆ.

ಭದ್ರತಾ ಪರಿಸ್ಥಿತಿಯನ್ನು ಕಾಪಾಡಿಕೊಳ್ಳಲು ಈ ಆರು ಪ್ರದೇಶಗಳಲ್ಲಿ ‘ಡಿಸ್ಟರ್ಬ್ಡ್ ಏರಿಯಾಸ್’ ಸ್ಥಾನಮಾನವನ್ನು ಹೇರಲಾಗುತ್ತಿದೆ. ಜೊತೆಗೆ ಈ ಪ್ರದೇಶಗಳಲ್ಲಿ ದಂಗೆಕೋರ ಗುಂಪುಗಳ ಚಟುವಟಿಕೆಗಳನ್ನು ನಿಗ್ರಹಿಸಲು ಭದ್ರತಾ ಪಡೆಗಳ ಸುಸಂಘಟಿತ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಇದನ್ನು ಖಾತರಿಪಡಿಸಲಾಗಿದೆ ಎಂದು ಅದು ಹೇಳಿದೆ.

1980 ರಿಂದ ಮಣಿಪುರವು AFSPA ಅಡಿಯಲ್ಲಿ ‘ಡಿಸ್ಟರ್ಬ್ಡ್ ಏರಿಯಾ’ ಸ್ಥಾನಮಾನವನ್ನು ಹೊಂದಿದೆ. 2004 ರಲ್ಲಿ 32 ವರ್ಷದ ತಂಗ್ಜಮ್ ಮನೋರಮಾ ಹತ್ಯೆಯ ನಂತರ ಇಂಫಾಲ್ನ ಕೆಲವು ಭಾಗಗಳಿಂದ ಅದನ್ನು ಹಿಂತೆಗೆದುಕೊಳ್ಳಲಾಯಿತು. 2022 ರಿಂದ, ‘ಡಿಸ್ಟರ್ಬ್ಡ್ ಏರಿಯಾ’ ಎಂದು ಸೂಚಿಸಲಾದ ಪ್ರದೇಶಗಳನ್ನು ಹೆಚ್ಚಿಸಲಾಗಿದ್ದು, ಏಪ್ರಿಲ್ 1, 2023 ರಿಂದ ಜಾರಿಗೆ ತರಲಾಗಿತ್ತು. ಆದರೆ ಮೈತೇಯಿ ಪ್ರಾಬಲ್ಯದ ಕಣಿವೆಯ 19 ಪೊಲೀಸ್ ಠಾಣೆಗಳನ್ನು ಈ ವ್ಯಾಪ್ತಿಯಿಂದ ಹಿಂತೆಗೆದುಕೊಳ್ಳಲಾಗಿತ್ತು.

ಇದನ್ನೂ ಓದಿ: ‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

‘ಸಿಆರ್‌ಪಿಎಫ್‌ ಪಕ್ಷಪಾತ ಪ್ರದರ್ಶಿಸಿದೆ’ | ಮಣಿಪುರ ಹತ್ಯೆಯ ಕುರಿತು ಮಿಜೋ ನ್ಯಾಷನಲ್ ಫ್ರಂಟ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...