Homeಮುಖಪುಟಮಣಿಪುರ: ಪೊಲೀಸರ ತೆರವಿಗೆ ಕೇಂದ್ರವನ್ನು ಒತ್ತಾಯಿಸಿದ ಕುಕಿ ಗುಂಪುಗಳು

ಮಣಿಪುರ: ಪೊಲೀಸರ ತೆರವಿಗೆ ಕೇಂದ್ರವನ್ನು ಒತ್ತಾಯಿಸಿದ ಕುಕಿ ಗುಂಪುಗಳು

- Advertisement -
- Advertisement -

ಗಡಿ ಪಟ್ಟಣ ಮೊರೆಯಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಗಡಿ ಭದ್ರತಾ ಪಡೆ (ಬಿಎಸ್ಎಫ್)ಗಳ ಮೇಲಿನ ದಾಳಿಯಲ್ಲಿ ವಿದೇಶಿ ಬಂಡುಕೋರರು ಭಾಗಿಯಾಗಿರಬಹುದು ಎಂಬ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಆರೋಪವನ್ನು ಕುಕಿ ಗುಂಪುಗಳು ತಳ್ಳಿಹಾಕಿವೆ.

ಕುಕಿ ಬುಡಕಟ್ಟು ಜನಾಂಗದವರು ವಾಸಿಸುವ ಪ್ರದೇಶಗಳಲ್ಲಿ 24 ಗಂಟೆಗಳ ನಿಷೇಧಾಜ್ಞೆ ನಂತರ, ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ (ITLF) ಮತ್ತು ಬುಡಕಟ್ಟು ಏಕತೆಯ ಸಮಿತಿ (CoTU) ನೇತೃತ್ವದ ಗುಂಪುಗಳು ಬೇಡಿಕೆ ಮುಂದಿಟ್ಟಿದ್ದು, ಕುಕಿಗಳು ನೆಲೆಸಿರುವ ಬೆಟ್ಟದ ಪ್ರದೇಶಗಳಿಂದ ಮಣಿಪುರ ಪೊಲೀಸರನ್ನು ತೆರವುಗೊಳಿಸಿ, ಕೇಂದ್ರೀಯ ಪಡೆಗಳನ್ನು ಮಾತ್ರ ಇರಿಸುವಂತೆ ಒತ್ತಾಯಿಸಿವೆ.

ಕುಕಿ ಗುಂಪುಗಳು ಮಣಿಪುರ ಪೊಲೀಸರು ಹೇಗೆ ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದರ ಬಗ್ಗೆ ಆರೋಪಿಸಿದ್ದಾರೆ. ಇಡೀ ಇಂಫಾಲ ಕಣಿವೆಯಲ್ಲಿ ಸಶಸ್ತ್ರ ಪಡೆಗಳ (ವಿಶೇಷ ಅಧಿಕಾರ) ಕಾಯಿದೆಯನ್ನು (ಎಎಫ್ಎಸ್‌ಪಿಎ) ಮರು ಜಾರಿಗೊಳಿಸುವಂತೆ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದರು.

ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ತಾನು ‘ಅತ್ಯಂತ ಅಸಮಾಧಾನಗೊಂಡಿದ್ದೇನೆ’ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಎಎಫ್ಎಸ್‌ಪಿಎ ಮರುಸ್ಥಾಪನೆ ಸೇರಿದಂತೆ ಯಾವುದೇ ಕಟ್ಟುನಿಟ್ಟಿನ ಕೇಂದ್ರ ಸರ್ಕಾರದ ಕ್ರಮಕ್ಕೆ ಅದರಲ್ಲಿ ತೊಡಗಿರುವವರೆ ಜವಾಬ್ದಾರರಾಗಿರುತ್ತಾರೆ ಎಂದಿದ್ದಾರೆ.

‘ಸಮಾಜದಲ್ಲಿ ಈಗ ಏನೇ ನಡೆಯುತ್ತಿದ್ದರೂ ಅದು ವಿಪರೀತವಾಗಿದೆ. ಯಾರಾದರೂ ಅಥವಾ ಯಾವುದೇ ಗುಂಪು ಕಾನೂನನ್ನು ಕೈಗೆತ್ತಿಕೊಂಡರೆ ಸರ್ಕಾರಕ್ಕೆ ಸಹಿಸಿಕೊಳ್ಳುವುದು ನಿಜವಾಗಿಯೂ ಕಷ್ಟವಾಗುತ್ತದೆ. ಕೇಂದ್ರ ಸರ್ಕಾರವು ನೋಡುತ್ತಲೇ ಇಲ್ಲ. ಮತ್ತೆ ಎಎಫ್ಎಸ್‌ಪಿಎ ವಿಧಿಸಿದರೆ ಅವರನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು’ ಎಂದು ಅವರು ಈ ವಾರದ ಆರಂಭದಲ್ಲಿ ಮಣಿಪುರದ ತೌಬಲ್ ಜಿಲ್ಲೆಯ ಲಿಲಾಂಗ್ ಚಿಂಗ್ಜಾವೊ ಪ್ರದೇಶದಲ್ಲಿ ನಡೆದ ಗುಂಡಿನ ಘಟನೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ನಂತರ ಹೇಳಿದರು.

ಸೋಮವಾರ ಲಿಲಾಂಗ್ ಚಿಂಗ್ಜಾವೊದಲ್ಲಿ ನಿಷೇಧಿತ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ಎ) ಯ ರಾಜಕೀಯ ವಿಭಾಗವಾದ ರೆವಲ್ಯೂಷನರಿ ಪೀಪಲ್ಸ್ ಫ್ರಂಟ್ (ಆರ್‌ಪಿಎಫ್) ದಂಗೆಕೋರರು ನಾಲ್ವರನ್ನು ಕೊಂದಿದ್ದಾರೆ. ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಕ್ರಮ ಡ್ರಗ್ಸ್ ದಂಧೆ ಮೂಲಕ ಸಂಗ್ರಹಿಸಿದ ಹಣದ ವಿವಾದದ ಹಿನ್ನೆಲೆಯಲ್ಲಿ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಯ ನಂತರ ಸ್ಥಳೀಯರು ದಾಳಿಕೋರರು ಆಗಮಿಸಿದ್ದ ನಾಲ್ಕು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಇದಕ್ಕೂ ಮುನ್ನ ಜನವರಿ 2ರಂದು ಮಣಿಪುರದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಮಣಿಪುರದ ಗಡಿ ಪಟ್ಟಣ ಮೊರೆಹ್‌ನಲ್ಲಿ ಶಂಕಿತ ಬಂಡುಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸ್ ಕಮಾಂಡೋಗಳು ಮತ್ತು ಮೂವರು ಬಿಎಸ್ಎಫ್ ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...