Homeಮುಖಪುಟಮಣಿಪುರ| ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಮೃತ ಸ್ಥಿತಿಯಲ್ಲಿ ಪತ್ತೆ; ಚುರಾಚಂದ್‌ಪುರ ಉದ್ವಿಗ್ನ

ಮಣಿಪುರ| ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬ ಮೃತ ಸ್ಥಿತಿಯಲ್ಲಿ ಪತ್ತೆ; ಚುರಾಚಂದ್‌ಪುರ ಉದ್ವಿಗ್ನ

- Advertisement -
- Advertisement -

ಮಣಿಪುರದ ಚುರಾಚಂದ್‌ಪುರದ 45 ವರ್ಷದ ವ್ಯಕ್ತಿಯೊಬ್ಬ ಬಿಷ್ಣುಪುರ ಜಿಲ್ಲೆಯ ಬಳಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ತುಯಿಬಾಂಗ್ ನಿವಾಸಿ ಸೋಖೊಂಗಮ್ ಬೈಟೆ ಗುರುವಾರ ಸಂಜೆ ಬಿದಿರಿನ ಕಳಲೆ ಸಂಗ್ರಹಿಸಲು ಕಾಡಿಗೆ ತೆರಳಿದ ನಂತರ ಕಾಣೆಯಾಗಿದ್ದಾನೆ ಎಂದು ಅವರು ಹೇಳಿದರು. ಘಟನೆಯ ನಂತರ ರಾತ್ರಿ ಚುರಾಚಂದ್‌ಪುರ ಪಟ್ಟಣದಲ್ಲಿ ಸ್ವಲ್ಪ ಸಮಯದವರೆಗೆ ಉದ್ವಿಗ್ನತೆ ಆವರಿಸಿತು.

ಚುರಾಚಂದ್‌ಪುರ ಮತ್ತು ಬಿಷ್ಣುಪುರ ಜಿಲ್ಲೆಗಳಲ್ಲಿ ನಿಯೋಜಿಸಲಾದ ಭದ್ರತಾ ಸಿಬ್ಬಂದಿ ಬೈಟೆಗಾಗಿ ಹುಡುಕಾಟ ನಡೆಸಿದರು. ಆದರೆ, ಅವರ ಶವವು ಅವರ ಮನೆಯಿಂದ ಸುಮಾರು 13 ಕಿ.ಮೀ ದೂರದಲ್ಲಿರುವ ಟೋರ್‌ಬಂಗ್ ಪ್ರದೇಶದ ವಿದ್ಯುತ್ ಪರಿವರ್ತಕದ ಬಳಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕ ವೋಲ್ಟೇಜ್ ವಿದ್ಯುತ್ ತಂತಿಗಳು ಇದ್ದ ಕಾರಣ ರಾತ್ರಿಯವರೆಗೆ ಶವವನ್ನು ಹೊರತೆಗೆಯಲು ಸಾಧ್ಯವಾಗಲಿಲ್ಲ. ಶುಕ್ರವಾರ ಬೆಳಿಗ್ಗೆ ಅದನ್ನು ಹೊರತೆಗೆಯಲಾಯಿತು. ಮರಣೋತ್ತರ ಪರೀಕ್ಷೆಗಾಗಿ ಚುರಾಚಂದ್‌ಪುರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದರು.

“ಮರಣೋತ್ತರ ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ. ವಿದ್ಯುತ್ ಆಘಾತದಿಂದ ಅವರು ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಕಿ ಸಮುದಾಯದ ಜನರು ಚುರಚಂದ್‌ಪುರದಲ್ಲಿ ವಾಸಿಸುತ್ತಿದ್ದರೆ, ಬಿಷ್ಣುಪುರ ಜಿಲ್ಲೆಯಲ್ಲಿ ಮೈತೇಯಿಗಳು ಪ್ರಾಬಲ್ಯ ಹೊಂದಿದ್ದಾರೆ. ಮೇ 2023 ರಲ್ಲಿ ಕುಕಿಗಳು ಮತ್ತು ಮೈತೇಯಿಗಳ ನಡುವೆ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ 260 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಘರ್ಷಣೆಗೆ ಕಾರಣವಾದ ಮೊದಲ ಹಿಂಸಾಚಾರದ ಘಟನೆಗಳು ಟೋರ್ಬಂಗ್‌ನಿಂದ ವರದಿಯಾಗಿವೆ, ಅಲ್ಲಿ ಶವ ಪತ್ತೆಯಾಗಿತ್ತು.

ಜಮ್ಮು-ಕಾಶ್ಮೀರ ಮೇಘಸ್ಪೋಟ| ಕಿಶ್ತ್ವಾರ್‌ನಲ್ಲಿ ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆ; ಎನ್‌ಡಿಆರ್‌ಎಫ್‌ ಕಾರ್ಯಾಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....