Homeಮುಖಪುಟಮಣಿಪುರದಲ್ಲಿ ಪತ್ರಕರ್ತರ ಬಂಧನ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಮಾದ್ಯಮಗಳನ್ನು ಕಟ್ಟಿಹಾಕಲು ಯತ್ನ?

ಮಣಿಪುರದಲ್ಲಿ ಪತ್ರಕರ್ತರ ಬಂಧನ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಮಾದ್ಯಮಗಳನ್ನು ಕಟ್ಟಿಹಾಕಲು ಯತ್ನ?

- Advertisement -
- Advertisement -

ಮಣಿಪುರದಲ್ಲಿ ಒಂದೇ ವಾರದಲ್ಲಿ ಇಬ್ಬರು ಪತ್ರಕರ್ತರ ಬಂಧನವಾಗಿದ್ದು, ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಮಾದ್ಯಮಗಳು ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಬಲಪ್ರಯೋಗ ನಡೆಯುತ್ತಿದೆ. ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದ ವರದಿಗೆ ಸಂಬಂಧಿಸಿ ಸ್ಥಳೀಯ ಮಣಿಪುರ ಭಾಷಾ ಪತ್ರಿಕೆಯ ಸಂಪಾದಕನನ್ನು ಧರ್ಮ ಮತ್ತು ಜನಾಂಗದ ಆಧಾರದ ಮೇಲೆ ದ್ವೇಷವನ್ನು ಉತ್ತೇಜಿಸಿದ ಆರೋಪ ಹೊರಿಸಿ ಬಂಧಿಸಲಾಗಿದ್ದು, ಪತ್ರಕರ್ತರ ಪ್ರತಿಭಟನೆಗೆ ಕಾರಣವಾಗಿದೆ.

ಸಶಸ್ತ್ರ ದಾಳಿ ನಡೆದಿದ್ದ ಮೋರೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವರದಿ ಮಾಡಿದ ಕಾರಣಕ್ಕೆ ಇಂಫಾಲ್‌ನ ಹುಯೆಯೆನ್ ಲ್ಯಾನ್‌ಪಾವೊ ಸಂಪಾದಕರಾದ ಧನಬೀರ್ ಮೈಬಮ್ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು 1923ರ ರಹಸ್ಯ ಕಾಯಿದೆಯ ವಿವಿಧ ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಬಂಧಿಸಲಾಗಿದೆ.

ಅಕ್ಟೋಬರ್ 31 ರಿಂದ ಮ್ಯಾನ್ಮಾರ್ ಗಡಿಯಲ್ಲಿರುವ ಮೋರೆ ಪಟ್ಟಣದಲ್ಲಿ ನಡೆದ ದಾಳಿಗಳಲ್ಲಿ SDPO ಮೃತಪಟ್ಟು, ಒಂಬತ್ತು ಕಮಾಂಡೋಗಳಿಗೆ ಗಾಯಗಳಾಗಿತ್ತು. ಈ ಬಗ್ಗೆ ‘ಹುಯೆಯೆನ್ ಲ್ಯಾನ್‌ಪಾವೊ’ ಪತ್ರಿಕೆಯಲ್ಲಿ ಲೇಖನವನ್ನು ಬರೆಯಲಾಗಿದೆ. ಮೈಬಮ್ ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಅವರ ಬಂಧನವನ್ನು ಪತ್ರಕರ್ತರು ಮತ್ತು ವಿವಿಧ ಸಂಘಟನೆಗಳ ಸದಸ್ಯರು ಖಂಡಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಎಲೈಟ್ ಟಿವಿಯ ಸಂಪಾದಕ ಜೀತ್ ನಿಂಗೋಂಬಮ್ ಈ ಕುರಿತು ಪ್ರತಿಕ್ರಿಯಿಸಿದ್ದು ಪತ್ರಕರ್ತರ ಬಂಧನವನ್ನು ನಾವು ಖಂಡಿಸುತ್ತೇವೆ. ಅವರು ತಮ್ಮ ವರದಿಗಳಲ್ಲಿ ತಪ್ಪು ಮಾಡಿದ್ದರೆ ಸ್ಪಷ್ಟೀಕರಣವನ್ನು ನೀಡುವಂತೆ ಕೇಳಬಹುದಿತ್ತು ಎಂದು ಹೇಳಿದ್ದಾರೆ.

ಡಿ.2ರಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಲೈಶ್ರಾಮ್ ಮೀನಬಂಟ ಸಿಂಗ್ ಅವರ ದೂರಿನ ಮೇರೆಗೆ ಮಣಿಪುರ ಪೊಲೀಸರು  ‘ಕಂಗ್ಲೇಪಕ್ಕಿ ಮೀರಾ’ ಪತ್ರಿಕೆಯ ಸಂಪಾದಕ ವಾಂಗ್ಖೆಮ್ಚಾ ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದರು. ಮಣಿಪುರ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಮಾಜಿ ಅಧ್ಯಕ್ಷರಾಗಿದ್ದ ವಾಂಗ್ಖೆಮ್ಚಾ ಶ್ಯಾಮ್‌ಜೈ ಬಂಧನ ಟೀಕೆಗೆ ಕಾರಣವಾಗಿತ್ತು. ಮೊರೆಯಲ್ಲಿನ ಪರಿಸ್ಥಿತಿ ಬಗ್ಗೆ ವರದಿಗೆ ಬಂಧನವು ನಡೆದಿತ್ತು ಎಂದು ಪೊಲೀಸ್ ಮೂಲಗಳು ಹೇಳಿದ್ದವು.

ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಕುಕಿ ಸಮುದಾಯಕ್ಕೆ ಬಿಜೆಪಿಯ ಬೆಂಬಲವಿದೆಯೇ ಎಂದು ಪ್ರಶ್ನಿಸಿ ಪತ್ರಕರ್ತ ವಾಂಗ್‌ಖೇಮ್‌ಚಾ ಶ್ಯಾಮ್‌ಜೈ ಲೇಖನವನ್ನು ಬರೆದಿದ್ದರು.  ಶ್ಯಾಮ್‌ಜೈ ಅವರ ಲೇಖನವು ಮಣಿಪುರದಲ್ಲಿ ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಗಿದೆ ಎಂದು ಲೈಶ್ರಾಮ್ ಮೀನಾಬಂಟ ಸಿಂಗ್ ತಮ್ಮ ದೂರಿನಲ್ಲಿ ಆರೋಪಿಸಿದ್ದರು. ಗಲಭೆಗೆ ಪ್ರಚೋದನೆ ನೀಡುವುದು, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಕ್ರಿಮಿನಲ್ ಬೆದರಿಕೆ ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಶ್ಯಾಮ್‌ಜೈ ವಿರುದ್ಧ ಪ್ರಕರಣ ದಾಖಲಿಸಿದ್ದರು. ಶ್ಯಾಮ್‌ಜೈ ಅವರ ಬಂಧನವನ್ನು ಮಣಿಪುರ ಕಾಂಗ್ರೆಸ್‌ ಮುಖ್ಯಸ್ಥ ಕೇಶಾಮ್ ಮೇಘಚಂದ್ರ ಅವರು ಖಂಡಿಸಿ ಇದು ಮಾದ್ಯಮ ಮತ್ತು ವಾಕ್ ಸ್ವಾತಂತ್ರ್ಯದ ಮೇಲಿನ ಅನ್ಯಾಯದ ಜೀವಂತ ಉದಾಹರಣೆಯಾಗಿದೆ ಎಂದು ಹೇಳಿದ್ದರು.

ಮೈತೈ ಸಮುದಾಯಕ್ಕೆ ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನ ನೀಡುವುದನ್ನು ವಿರೋಧಿಸಿ ಮಣಿಪುರದ ಗುಡ್ಡಗಾಡು ಜಿಲ್ಲೆಗಳಲ್ಲಿ ಮೇ 3, 2023ರಂದು ‘ಬುಡಕಟ್ಟು ಐಕಮತ್ಯ ಮೆರವಣಿಗೆ’ ಆಯೋಜಿಸಲಾಗಿತ್ತು. ಇದು ಬಳಿಕ ಜನಾಂಗೀಯ ಹಿಂಸಾಚಾರಕ್ಕೆ ತಿರುಗಿತ್ತು. ಮೇ.3ರಿಂದ ಮಣಿಪುರದಲ್ಲಿ ಕುಕಿಗಳು ಮತ್ತು ಮೈತೈ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಿಂದ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ರಾಜ್ಯದಲ್ಲಿ ಕನಿಷ್ಠ 60,000 ಜನರು ನಿರಾಶ್ರಿತರಾಗಿದ್ದಾರೆ. ಡಿ.4ರಂದು ತೆಂಗೊಪಾಲ್ ಜಿಲ್ಲೆಯ ಲೀತು ಗ್ರಾಮದಲ್ಲಿ ನಡೆದ ಗುಂಡಿನ ಕಾಳಗದಲ್ಲಿ 13 ಮಂದಿ ಮೃತಪಟ್ಟಿದ್ದರು. ಕೆಲ ದಿನಗಳ ಕಾಲ ಶಾಂತವಾಗಿದ್ದ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಪ್ರತ್ಯೇಕವಾದ ಘಟನೆಯಲ್ಲಿ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೈತೈ ಮತ್ತು ಕುಕಿ ಗುಂಪುಗಳ ನಡುವೆ ನಡೆದ ಹಿಂಸಾಚಾರದಲ್ಲಿ ಮೈತೈ ಸಮುದಾಯದ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇದಲ್ಲದೆ ಮಣಿಪುರ ಗಡಿಭಾಗದ ಮೊರೆಹ್ ಪಟ್ಟಣದಲ್ಲಿ ಪೊಲೀಸ್ ಕಮಾಂಡೋಗಳು ಮತ್ತು ಸಶಸ್ತ್ರದಾರಿ ಗುಂಪಿನ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್‌ ಪೇದೆ ಗಾಯಗೊಂಡಿದ್ದರು.

ಇದನ್ನು ಓದಿ: ವೈಎಸ್‌ ಆರ್‌ ಕಾಂಗ್ರೆಸ್‌ಗೆ ಸೇರಿದ ಒಂದೇ ವಾರದಲ್ಲಿ ಪಕ್ಷ ತೊರೆದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...