Homeಮುಖಪುಟಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

ಮಣಿಪುರ ಬೆತ್ತಲೆ ಮೆರವಣಿಗೆ: ಗಲಭೆಕೋರರ ಗುಂಪಿಗೆ ಮಹಿಳೆಯರನ್ನು ಒಪ್ಪಿಸಿದ್ದ ಪೊಲೀಸರು, ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳು ಉಲ್ಲೇಖ

- Advertisement -
- Advertisement -

ಮಣಿಪುರ ಹಿಂಸಾಚಾರದ ಸಮಯದಲ್ಲಿ ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಚಾರ್ಜ್‌ಶೀಟ್‌ನಲ್ಲಿ ಮಹತ್ವದ ಅಂಶಗಳ ಉಲ್ಲೇಖವಾಗಿದ್ದು, ಮಹಿಳೆಯರನ್ನು ಗಲಭೆಕೋರರ ಗುಂಪಿಗೆ ಪೊಲೀಸರೇ ಒಪ್ಪಿಸಿದ್ದಾರೆ ಎಂದು ತಿಳಿಸಿದೆ.

ಪೊಲೀಸರ ಜಿಪ್ಸಿಯಲ್ಲಿ ಆಶ್ರಯ ಪಡೆದಿದ್ದ ಕುಕಿ-ಜೋ ಸಮುದಾಯದ ಇಬ್ಬರು ಮಹಿಳೆಯರನ್ನು ಮಣಿಪುರ ಪೊಲೀಸ್ ಸಿಬ್ಬಂದಿ ಕಾಂಗ್‌ಪೋಪಿ ಜಿಲ್ಲೆಯಲ್ಲಿ ಸುಮಾರು 1,000 ಮೈತೈ ಗಲಭೆಕೋರರಿದ್ದ ಗುಂಪಿಗೆ ತಲುಪಿಸಿದ್ದಾರೆ ಎಂಬ ಅಚ್ಚರಿಯ ಅಂಶ ಸಿಬಿಐ ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅದೇ ಕುಟುಂಬಕ್ಕೆ ಸೇರಿದ ಮೂರನೇ ಮಹಿಳೆಯ ಮೇಲೂ ಜನಸಮೂಹವು ಹಲ್ಲೆ ನಡೆಸಿದೆ ಮತ್ತು ಆಕೆಯನ್ನು  ವಿವಸ್ತ್ರಗೊಳಿಸಲು ಪ್ರಯತ್ನಿಸಿದೆ ಆದರೆ ಮಹಿಳೆ ಮೊಮ್ಮಗಳನ್ನು ಬಿಗಿಯಾಗಿ ಹಿಡಿದಿದ್ದರಿಂದ ಪ್ರಯತ್ನದಲ್ಲಿ ವಿಫಲರಾದರು ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಆಕೆಯ ಮೇಲೆ ದಾಳಿ ಮಾಡಿದ ಗುಂಪು ಭತ್ತದ ಗದ್ದೆಗಳಲ್ಲಿ ಪೀಡನೆಗೊಳಪಡುತ್ತಿದ್ದ ಇತರ ಇಬ್ಬರು ಸಂತ್ರಸ್ತರ ಕಡೆಗೆ ಓಡಿ ಹೋದ ನಂತರ ಆಕೆ ತಪ್ಪಿಸಿಕೊಂಡಿದ್ದಾರೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಮೂವರೂ ಸಂತ್ರಸ್ತರು ಕೂಡ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಸಹಾಯವನ್ನು ಕೋರಿದ್ದಾರೆ. ಆದರೆ ಅವರಿಗೆ ಯಾವುದೇ ಸಹಾಯವನ್ನು ನೀಡಲಾಗಿಲ್ಲ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಗಿಲ್ ಯುದ್ಧದ ಯೋಧನ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆಯೊಬ್ಬರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿ ಬಳಿ ಬೇಡಿಕೊಂಡಿದ್ದಾರೆ, ಈ ವೇಳೆ ವಾಹನದ ಕೀ ಇಲ್ಲ ಎಂದ ಪೊಲೀಸರು ಯಾವುದೇ ಸಹಾಯ ಮಾಡಲು ಮುಂದಾಗಿಲ್ಲ ಎನ್ನುವ ಅಚ್ಚರಿ ಅಂಶ ತನಿಖೆಯ ವೇಳೆ ಬಯಲಾಗಿದೆ.

2023ರ ಮೇ 4ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದಿತ್ತು. ಇದಾದ ಸುಮಾರು ಎರಡು ತಿಂಗಳ ನಂತರ ಜುಲೈನಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಕಳೆದ ವರ್ಷ ಅಕ್ಟೋಬರ್ 16ರಂದು ಗುವಾಹಟಿಯ ಸಿಬಿಐ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ಸಿಬಿಐ ಆರು ಆರೋಪಿಗಳ ವಿರುದ್ಧ ಮತ್ತು ಓರ್ವ ಅಪ್ರಾಪ್ತನ ವಿರುದ್ಧ (CCL) ವರದಿಯನ್ನು ಸಲ್ಲಿಸಿತು.

ಎಕೆ ರೈಫಲ್‌ಗಳು, ಎಸ್‌ಎಲ್‌ಆರ್, ಐಎನ್‌ಎಸ್‌ಎಎಸ್ ಮತ್ತು 303 ರೈಫಲ್‌ಗಳಂತಹ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಸುಮಾರು 900-1,000 ಜನರ ಗುಂಪಿನಿಂದ ಇಬ್ಬರು ಮಹಿಳೆಯರು ತಪ್ಪಿಸಿಕೊಂಡು ಪೊಲೀಸರ ಬಳಿ ಹೋಗಿದ್ದರು. ಕಾಂಗ್‌ಪೋಕ್ಪಿ ಜಿಲ್ಲೆಯ ಬಿ ಫೈನೋಮ್ ಗ್ರಾಮದ ಎಲ್ಲಾ ಮನೆಗಳನ್ನು ಉದ್ರಿಕ್ತರು ಧ್ವಂಸ ಮಾಡಿದ್ದಾರೆ. ಈ ವೇಳೆ ಜನಸಮೂಹದಿಂದ ತಪ್ಪಿಸಿಕೊಳ್ಳಲು 10ಜನರು ಅರಣ್ಯಕ್ಕೆ ಓಡಿ ಹೋಗಿದ್ದರು. ಅವರನ್ನು ಉದ್ರಿಕ್ತರ ಬೇರೆ ಬೇರೆ ಗುಂಪು ವಶಕ್ಕೆ ತೆಗೆದುಕೊಂಡಿತ್ತು.

ಇನ್ನೊಂದು ಹಳ್ಳಿಯ ಗಲಭೆಕೋರರು ಗುಂಪಿನೊಂದಿಗೆ ಸೇರಿಕೊಂಡರು ಮತ್ತು ಎಲ್ಲರೂ ಬಲಿಪಶುಗಳನ್ನು ಹೊಡೆಯಲು ಪ್ರಾರಂಭಿಸಿದ್ದಾರೆ. ಅವರಿಂದ ತಪ್ಪಿಸಿಕೊಂಡು ಬಂದು ಪೊಲೀಸ್‌ ವಾಹನದಲ್ಲಿ ಬಂದು ಕುಳಿತಾಗ ಅಲ್ಲೂ ಗುಂಪು ಹಲ್ಲೆ ನಡೆಸಿದೆ ಆದರೆ ಪೊಲೀಸರು ಸಂತ್ರಸ್ತರಿಗೆ ಸಹಾಯ ಮಾಡಲಿಲ್ಲ ಎಂದು ಸಿಬಿಐ ಆರೋಪಿಸಿದೆ.

ಪೊಲೀಸ್ ಜಿಪ್ಸಿಯ ಚಾಲಕ ವಾಹನವನ್ನು ಚಲಾಯಿಸಿ ಸುಮಾರು 1,000 ಜನರಿರುವ ಗುಂಪಿನ ಕಡೆ ವಾಹನವನ್ನು ತಂದು ನಿಲ್ಲಿಸಿದ್ದಾನೆ. ಸಂತ್ರಸ್ತರು ತಮ್ಮನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲು ಪೊಲೀಸ್ ಸಿಬ್ಬಂದಿಯನ್ನು ಹಲವು ಬಾರಿ ಬೇಡಿಕೊಂಡಿದ್ದಾರೆ, ಆದರೆ ಅವರಿಗೆ ಯಾವುದೇ ಸಹಾಯವನ್ನು ಒದಗಿಸಲಿಲ್ಲ. ಇದರಿಂದ ಪೊಲೀಸರೇ ಮಹಿಳೆಯರನ್ನು ಗುಂಪಿಗೆ ಹಸ್ತಾಂತರಿಸಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ.

ಇಬ್ಬರು ಮಹಿಳೆಯರೊಂದಿಗೆ ಪೊಲೀಸ್‌ ಜಿಪ್ಸಿಯಲ್ಲಿ ಕುಳಿತಿದ್ದ ಓರ್ವನಿಗೆ ಜನಸಮೂಹವು  ಹತ್ಯೆ ಮಾಡಿದೆ. ಆತನ ತಂದೆಯನ್ನು ಗುಂಪು ಮೊದಲೇ ಹತ್ಯೆ ಮಾಡಿತ್ತು. ಅವರ ಶವಗಳನ್ನು ಗ್ರಾಮದ ಬಳಿಯ ಒಣ ನದಿ ತಟದಲ್ಲಿ ಎಸೆಯಲಾಯಿತು. ಗಲಭೆಕೋರರ ಗುಂಪು ಪೊಲೀಸ್‌ ವಾಹನದ ಕಡೆಗೆ ಬಂದಾಗ ಸಂತ್ರಸ್ತರನ್ನು ಬಿಟ್ಟು ಘಟನಾ ಸ್ಥಳದಿಂದ ಪೊಲೀಸ್ ಸಿಬ್ಬಂದಿ ಓಡಿ ಹೋಗಿದ್ದಾರೆ. ಗಲಭೆಕೋರರು ಮಹಿಳೆಯರನ್ನು ಹೊರಗೆ ಎಳೆದೊಯ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯವೆಸಗುವ ಮೊದಲು ಬೆತ್ತಲೆ ಮೆರವಣಿಗೆ ಮಾಡಿದರು ಎಂದು ಚಾರ್ಜ್ ಶೀಟ್ ಹೇಳಿದೆ.

ಇದನ್ನು ಓದಿ: ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...