ಮಣಿಪುರದ ತೌಬಲ್ ಜಿಲ್ಲೆಯ ಭಾರತ ಮೀಸಲು ಬೆಟಾಲಿಯನ್‌ಗೆ ಸೇರಿದ ಹೊರಠಾಣೆಯಿಂದ ಶನಿವಾರ ರಾತ್ರಿ ಅಪರಿಚಿತ ಬಂದೂಕುಧಾರಿಗಳ ಗುಂಪೊಂದು ಶಸ್ತ್ರಾಸ್ತ್ರಗಳನ್ನು ದೋಚಿದೆ ಎಂದು ಪಿಟಿಐ ವರದಿ ಮಾಡಿದೆ. ಈ ಹೊರಠಾಣೆ ತೌಬಲ್ ಜಿಲ್ಲೆ ಕಾಕ್ಮಯೈ ಪ್ರದೇಶದಲ್ಲಿದೆ. ಮಣಿಪುರ
“08/02/2025 ರ ರಾತ್ರಿ, ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಸುಮಾರು 30 ಶಸ್ತ್ರಸಜ್ಜಿತ ದುಷ್ಕರ್ಮಿಗಳು, ತೌಬಲ್ ಜಿಲ್ಲೆಯ ಕಾಕ್ಮಯೈನಲ್ಲಿರುವ ಒಂದು ಪೊಲೀಸ್ ಹೊರಠಾಣೆ ಮೇಲೆ ನುಗ್ಗಿ, ಆ ಠಾಣೆಯಲ್ಲಿ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯನ್ನು ಬೆದರಿಸಿದ್ದಾರೆ” ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ಮಣಿಪುರ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಆದಾಗ್ಯೂ, ಭದ್ರತಾ ಸಿಬ್ಬಂದಿ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಹಿಜಮ್ ನಿಂಗ್ಥೆಮ್ ಸಿಂಗ್ ಎಂದು ಗುರುತಿಸಲಾಗಿದ್ದು, ಆತ ನಿಷೇಧಿತ ಪ್ರತ್ಯೇಕತಾವಾದಿ ಉಗ್ರಗಾಮಿ ಗುಂಪು ಕಾಂಗ್ಲೈಪಾಕ್ ಕಮ್ಯುನಿಸ್ಟ್ ಪಕ್ಷದ ಸದಸ್ಯ ಎನ್ನಲಾಗಿದೆ.
ಕದ್ದ ಒಂಬತ್ತು ಶಸ್ತ್ರಾಸ್ತ್ರಗಳಲ್ಲಿ ಎಂಟನ್ನು ವಶಪಡಿಸಿಕೊಂಡಿದ್ದೇವೆ ಎಂದು ಮಣಿಪುರ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೇ 2023 ರಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಿಂದ ಕನಿಷ್ಠ 258 ಜನರು ಸಾವನ್ನಪ್ಪಿದ್ದು, 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಮೈತೇಯಿ ಮತ್ತು ಕುಕಿ-ಜೋಮಿ-ಹ್ಮಾರ್ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದ ಮಧ್ಯೆ ಈ ಘಟನೆ ನಡೆದಿದೆ.
ಭಾನುವಾರ ಸಂಜೆ ಮಣಿಪುರದ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯದಲ್ಲಿ ಭುಗಿಲೆದ್ದ ಹಿಂಸಾಚಾರದ ವಿಚಾರದಲ್ಲಿ ಮುಖ್ಯಮಂತ್ರಿಯ ಪ್ರತಿಕ್ರಿಯೆ ಪಕ್ಷಪಾತದಿಂದ ಕೂಡಿದೆ ಮತ್ತು ಅವರು ಬಹುಸಂಖ್ಯಾತತೆಯನ್ನು ಪ್ರಚೋದಿಸಿದ್ದಾರೆ ಎಂದು ಕುಕಿ-ಜೋಮಿ-ಹ್ಮಾರ್ ಗುಂಪುಗಳು ನಿರಂತರ ಆರೋಪಗಳನ್ನು ಮಾಡಲುತ್ತಲೆ ಇವೆ. ಈ ನಡುವೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇದನ್ನೂಓದಿ: ಗಲಭೆ ಪೀಡಿತ ಮಣಿಪುರದ ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಅಧಿಕಾರ ಸ್ವೀಕಾರ
ಗಲಭೆ ಪೀಡಿತ ಮಣಿಪುರದ ನೂತನ ರಾಜ್ಯಪಾಲರಾಗಿ ಅಜಯ್ ಕುಮಾರ್ ಭಲ್ಲಾ ಅಧಿಕಾರ ಸ್ವೀಕಾರ


