Homeಮುಖಪುಟಮಣಿಪುರ | ಮತ್ತೆ 20 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಿದ ಕೇಂದ್ರ ಸರ್ಕಾರ

ಮಣಿಪುರ | ಮತ್ತೆ 20 ಭದ್ರತಾ ಪಡೆಗಳ ತಂಡಗಳನ್ನು ನಿಯೋಜಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಸೋಮವಾರ ನಡೆದ ಗುಂಡಿನ ಚಕಮಕಿಯಲ್ಲಿ 10 ಜನರು ಸಾವಿಗೀಡಾದ ಹಿನ್ನಲೆ ಕುಕಿ ಜೊ ಸಂಘಟನೆಗಳು ಆಕ್ರೋಶಗೊಂಡಿದ್ದರೂ, ಕೇಂದ್ರ ಸರ್ಕಾರವು ಸುಮಾರು 2000 ಸಿಬ್ಬಂದಿ ಇರುವ 20 ಹೆಚ್ಚುವರಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ(ಸಿಎಪಿಎಫ್) ಕಂಪೆನಿಗಳನ್ನು ಮಣಿಪುರಕ್ಕೆ ರವಾನಿಸಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ TNIE ಬುಧವಾರ ವರದಿ ಮಾಡಿದೆ. ಮಣಿಪುರ

ಈ ಘಟಕಗಳ ಏರ್‌ಲಿಫ್ಟಿಂಗ್ ಮೂಲಕ ತಕ್ಷಣವೆ ನಿಯೋಜನೆ ಮಾಡಬೇಕು ಎಂದು ಗೃಹ ಸಚಿವಾಲಯ (ಎಂಎಚ್‌ಎ) ಮಂಗಳವಾರ ರಾತ್ರಿ ಆದೇಶ ಹೊರಡಿಸಿದೆ ಎಂದು ಮೂಲಗಳು ತಿಳಿಸಿವೆ ಎಂದು ಪಿಟಿಐ ವರದಿ ಮಾಡಿದೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಸೋಮವಾರ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಶಂಕಿತ ಉಗ್ರಗಾಮಿಗಳು ಹತರಾಗಿದ್ದಾರೆ ಎಂದು ಮಣಿಪುರ ಪೊಲೀಸರು ಹೇಳಿದ್ದಾರೆ. ಆದರೆ, ಇದನ್ನು ಕುಕಿ-ಜೊ ಸಂಘಟನೆಗಳು ನಿರಾಕರಿಸಿದ್ದು, ಮೃತರು ಗ್ರಾಮ ‘ಸ್ವಯಂಸೇವಕರು’ ಆಗಿದ್ದು, ಸೇನೆಯು ಅವರನ್ನು ಹೊಂಚುಹಾಕಿ ಕೊಂದಿದೆ ಎಂದು ಹೇಳಿದೆ.

”ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಶಸ್ತ್ರಸಜ್ಜಿತವಾದ ಬಂಡುಕೋರರು ಬೊರೊಬೆಕ್ರಾ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ” ಎಂದು ಪೊಲೀಸರು ಹೇಳಿದ್ದು, ಭೀಕರ ಗುಂಡಿನ ಚಕಮಕಿಯ ನಂತರ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಬೃಹತ್ ಸಂಗ್ರಹವನ್ನು ಪಡೆ ವಶಪಡಿಸಿಕೊಂಡಿದೆ ಎಂದು ತಿಳಿಸಿದೆ.

ಮಣಿಪುರಕ್ಕೆ ನಿಯೋಜಿಸಲು ಆದೇಶಿಸಿದ 20 ಹೊಸ ಸಿಎಪಿಎಫ್ ಕಂಪನಿಗಳಲ್ಲಿ 15 ಸಿಆರ್‌ಪಿಎಫ್ ಮತ್ತು ಐದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೇರಿವೆ ಎಂದು ಮೂಲಗಳು ತಿಳಿಸಿವೆ. ಜಿರಿಬಾಮ್‌ನಲ್ಲಿ ಹೊಸದಾಗಿ ನಡೆದ ಹಿಂಸಾಚಾರದಿಂದಾಗಿ ಕಳೆದ ವಾರದಿಂದ ಮಣಿಪುರದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ರಾಜ್ಯದಲ್ಲಿ ಪ್ರಾರಂಭವಾದ ಜನಾಂಗೀಯ ಹಿಂಸಾಚಾರದ ನಂತರ ಸುಮಾರು 200 ಜನರ ಹತ್ಯೆಗೀಡಾಗಿದ್ದಾರೆ. ಇದರ ನಂತರ ರಾಜ್ಯದಲ್ಲಿ ಈಗಾಗಲೇ ನೆಲೆಗೊಂಡಿರುವ ಸಿಎಪಿಎಫ್‌ನ 198 ಕಂಪನಿಗಳ ಜೊತೆಗೆ ಈ ಘಟಕಗಳನ್ನು ಸೇರಿಸಲಾಗುತ್ತವೆ ಎಂದು ವರದಿ ಹೇಳಿವೆ.

ಗೃಹ ಸಚಿವಾಲಯದ ಆದೇಶದಂತೆ ಈ ಎಲ್ಲಾ CAPF ಘಟಕಗಳು ನವೆಂಬರ್ 30 ರವರೆಗೆ ಮಣಿಪುರ ಸರ್ಕಾರದ ವಿಲೇವಾರಿಯಲ್ಲಿದ್ದು, ಈ ನಿಯೋಜನೆಯನ್ನು ವಿಸ್ತರಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಸೋಮವಾರದ ಘಟನೆಯ ನಂತರ, ಇಂಫಾಲ್ ಕಣಿವೆಯ ಅನೇಕ ಸ್ಥಳಗಳಲ್ಲಿ ಹೊಸದಾಗಿ ಹಿಂಸಾಚಾರ ನಡೆದಿರುವುದು ವರದಿಯಾಗಿದೆ.

ಇದನ್ನೂ ಓದಿ: BIG BREAKING | ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  97 ಮಂದಿಗೆ ಜಾಮೀನು

BIG BREAKING | ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ; ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ  97 ಮಂದಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...