ಮಣಿಪುರದಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ ಸೈನಿಕನೊಬ್ಬ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ಇಬ್ಬರು ಸಿಬ್ಬಂದಿಯನ್ನು ಕೊಂದು, ಎಂಟು ಜನರನ್ನು ಗಾಯಗೊಳಿಸಿದ್ದಲ್ಲದೆ, ನಂತರ ಸೇವಾ ಆಯುಧದಿಂದ ತನ್ನ ಮೇಲೆಯೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿದ್ದಾರೆ ಎಂದು ರಾಜ್ಯದ ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಣಿಪುರ
ಘಟನೆ ರಾತ್ರಿ 8 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ಮಣಿಪುರ ಪೊಲೀಸರು ತಿಳಿಸಿದ್ದಾರೆ. ಮೃತ ಸೈನಿಕನನ್ನು ಅರೆಸೈನಿಕ ಪಡೆಯ 120 ನೇ ಬೆಟಾಲಿಯನ್‌ಗೆ ಸೇರಿದ ಹವಿಲ್ದಾರ್ ಸಂಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಅವರು ಒಬ್ಬ ಕಾನ್‌ಸ್ಟೆಬಲ್ ಮತ್ತು ಸಬ್-ಇನ್ಸ್‌ಪೆಕ್ಟರ್‌ರನ್ನು ಗುಂಡು ಹಾರಿಸಿ ಕೊಂದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಗಾಯಗೊಂಡ ಎಂಟು ಸಿಬ್ಬಂದಿಯನ್ನು ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಗುಂಡಿನ ದಾಳಿಗೆ ಕಾರಣವೇನೆಂದು ತನಿಖೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಸಿಆರ್‌ಪಿಎಫ್ ಇನ್ನೂ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.
ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಾಲ್ಕು ದಿನಗಳ ನಂತರ, ಕೇಂದ್ರ ಸರ್ಕಾರ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಿದೆ. 2027 ರವರೆಗೆ ಅಧಿಕಾರಾವಧಿಯನ್ನು ಹೊಂದಿರುವ ವಿಧಾನಸಭೆಯನ್ನು ಅವರು ಅಮಾನತು ಮಾಡಿದ್ದಾರೆ. ಮಣಿಪುರ
ಮೇ 2023 ರಲ್ಲಿ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 250 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಸಾವಿರಾರರು ಜನರು ಗಾಯಗೊಂಡಿದ್ದಾರೆ. ಹಿಂಸಾಚಾರದಿಂದ 60 ಸಾವಿರಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ಹಿಂಸಾಚಾರದ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಕಳೆದ ಎರಡು ವರ್ಷಗಳಿಂದ ವಿಪಕ್ಷಗಳು ಆಗ್ರಹಿಸುತ್ತಲೆ ಇದ್ದವು. ಅಲ್ಲದೆ, ಹಿಂಸಾಚಾರ ಪೀಡಿತ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡಿ ರಾಜ್ಯದ ಜನರೊಂದಿಗೆ ಮಾತನಾಡಬೇಕು ಎಂದು ಈಗಲೂ ಆಗ್ರಹಿಸುತ್ತಿವೆ.
ಈ ನಡುವೆ ಮುಖ್ಯಮಂತ್ರ ಬಿರೇನ್ ಸಿಂಗ್ ಇತ್ತಿಚೆಗೆ ರಾಜೀನಾಮೆ ನೀಡಿದ್ದು, ವಿಶೇಷವಾಗಿ ರಾಜ್ಯ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಕಾಂಗ್ರೆಸ್ ಮುಂದಾಗಿತ್ತು. ಈ ವೇಳೆ ಕೆಲವು ಬಿಜೆಪಿ ಶಾಸಕರು ಈ ನಿರ್ಣಯದ ಪರವಾಗಿ ಮತ ಚಲಾಯಿಸಬಹುದು ಎಂಬ ವರದಿಗಳಿದ್ದವು. ಹಾಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂಓದಿ: ಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!
ಎರಡನೇ ಸುತ್ತಿನ ಜಾತಿ ಸಮೀಕ್ಷೆಗೆ ಮುಂದಾದ ತೆಲಂಗಾಣದ ಕಾಂಗ್ರೆಸ್ ಸರ್ಕಾರ!


