Homeಮುಖಪುಟಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

ಮಣಿಪುರ | ರಾಜ್ಯ ಸರ್ಕಾರದ ವಿರುದ್ಧ ತಿರುಗಿ ಬಿದ್ದ 7 ಬಿಜೆಪಿ ಶಾಸಕರು!

- Advertisement -
- Advertisement -

ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕೇಂದ್ರ ಸರ್ಕಾರವು “ಸಾಮೂಹಿಕ ಕಾರ್ಯಾಚರಣೆ” ಪ್ರಾರಂಭಿಸಬೇಕೆಂದು ಒತ್ತಾಯಿಸಿ ಮಣಿಪುರದ ಆಡಳಿತಾರೂಢ ಎನ್‌ಡಿಎ ಶಾಸಕರು ಅಂಗೀಕರಿಸಿದ ನಿರ್ಣಯವು “ವಿಭಜಕ, ಏಕಪಕ್ಷೀಯ ಮತ್ತು ಕೋಮುವಾದ” ಆಗಿದೆ ಎಂದು ಕುಕಿ-ಹ್ಮಾರ್-ಜೋಮಿ ಬುಡಕಟ್ಟು ಸಮುದಾಯಗಳ ಹತ್ತು ಶಾಸಕರು ಹೇಳಿದ್ದಾರೆ. ಈ ಹತ್ತು ಶಾಸಕರಲ್ಲಿ 7 ಮಂದಿ ಬಿಜೆಪಿ ಪಕ್ಷದವರಾಗಿದ್ದು, ಒಬ್ಬರು ಪಕ್ಷೇತರ ಶಾಸಕ ಮತ್ತು ಇಬ್ಬರು ಕುಕಿ ಪೀಪಲ್ಸ್ ಅಲೈಯನ್ಸ್‌ ಶಾಸಕರಾಗಿದ್ದಾರೆ. ಮಣಿಪುರ

ಕೇವಲ ಒಂದು ಸಮುದಾಯದ ವಿರುದ್ಧ ಸಾಮೂಹಿಕ ಕಾರ್ಯಾಚರಣೆಯನ್ನು ಪ್ರಾರಂಭಿಸುವುದು ಪಕ್ಷಪಾತವಾಗಿದೆ ಎಂದು ಈ ಶಾಸಕರು ಹೇಳಿದ್ದಾರೆ. “ಎಲ್ಲಾ ಬಂಡುಕೋರ ಗುಂಪುಗಳಿಂದ ಎಲ್ಲಾ ಅಕ್ರಮ ಶಸ್ತ್ರಾಸ್ತ್ರಗಳನ್ನು ಮರುಪಡೆಯಲು ರಾಜ್ಯದಾದ್ಯಂತ ಸಾಮೂಹಿಕ ಕಾರ್ಯಾಚರಣೆಗಳನ್ನು ನಡೆಸಬೇಕು” ಎಂದು ಶಾಸಕರು ಹೇಳಿದ್ದಾರೆ. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಮಂದಿ ಶಾಸಕರ ಹೇಳಿಕೆಗೂ ಒಂದು ದಿನ ಮುಂಚಿತವಾಗಿ, ನವೆಂಬರ್ 18 ರಂದು, ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ನೇತೃತ್ವದ 28 ಎನ್‌ಡಿಎ ಶಾಸಕರು ನವೆಂಬರ್ 11 ರಂದು ಜಿರಿಬಾಮ್‌ನಲ್ಲಿ ಆರು ಮೈತೇಯಿ ಮಹಿಳೆಯರು ಮತ್ತು ಮಕ್ಕಳನ್ನು ಅಪಹರಿಸಿ ಹತ್ಯೆಗೈದ ಶಂಕಿತ ಕುಕಿ ಉಗ್ರಗಾಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ಣಯವನ್ನು ಅಂಗೀಕರಿಸಿದ್ದರು. ಈ ನಿರ್ಣಯದಲ್ಲಿ, ಏಳು ದಿನಗಳೊಳಗೆ ಶಂಕಿತ ಉಗ್ರರನ್ನು “ಕಾನೂನುಬಾಹಿರ ಸಂಘಟನೆ” ಎಂದು ಘೋಷಿಸುವಂತೆ ಕೇಂದ್ರವನ್ನು ಒತ್ತಾಯಿಸಲಾಗಿದೆ.

ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ರಾಜ್ಯದ ಐದು ಕಣಿವೆ ಜಿಲ್ಲೆಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA)ಯನ್ನು ಜಾರಿಗೊಳಿಸಿರುವುದನ್ನು ಪರಿಶೀಲಿಸುವಂತೆ ಎನ್‌ಡಿಎ ಶಾಸಕರು ಒತ್ತಾಯಿಸಿದ್ದರು. “ಸಾರ್ವಜನಿಕ ಸುವ್ಯವಸ್ಥೆಯ ನಿರ್ವಹಣೆ” ಗಾಗಿ ಶೋಧನೆ ನಡೆಸಲು, ಜನರನ್ನು ಬಂಧಿಸಲು ಮತ್ತು ಗುಂಡಿನ ದಾಳಿ ನಡೆಸಲು ಸೇನಾ ಸಿಬ್ಬಂದಿಗೆ AFSPA ಕಾಯಿದೆಯು ಅಧಿಕಾರವನ್ನು ನೀಡುತ್ತದೆ. ಒಂದು ವೇಳೆ ಈ ದಾಳಿಯಲ್ಲಿ ವ್ಯಕ್ತಿಯು ಮೃತಪಟ್ಟರೆ ಕಾಯಿದೆ ಸೇನಾ ಸಿಬ್ಬಂದಿಗೆ ರಕ್ಷಣೆ ನೀಡುತ್ತದೆ.

ಮುಖ್ಯಮಂತ್ರಿ ಬಿರೇನ್ ನೇತೃತ್ವದ ಎನ್‌ಡಿಎ ಶಾಸಕರ ಈ ನಿರ್ಣಯವನ್ನು ಕುಕಿ-ಹ್ಮಾರ್-ಝೋಮಿ ಸಮುದಾಯದ 10 ಶಾಸಕರು ವಿರೋಧಿಸಿದ್ದು, “ಏಕಪಕ್ಷೀಯವಾಗಿ ರಾಜ್ಯ ಸರ್ಕಾರವು ತಮಗೆ ಅನುಕೂಲಕರವಾಗಿ ಒಂದು ಬುಡಕಟ್ಟು ಸಮುದಾಯದ ಹಕ್ಕುಗಳನ್ನು ನಿಗ್ರಹಿಸುವ ಮತ್ತು ಮೊಟಕುಗೊಳಿಸುವಲ್ಲಿ ಜಿರಿಬಾಮ್ ಘಟನೆಯ ಅನಗತ್ಯ ಲಾಭವನ್ನು ಪಡೆಯುತ್ತಿದೆ. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರವನ್ನು ಬೆದರಿಸುವ ಮಟ್ಟಕ್ಕೂ ಧೈರ್ಯಶಾಲಿಯಾಗಿ ವರ್ತಿಸಿದೆ” ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚಿನ ಮೂರು ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ಹಸ್ತಾಂತರಿಸುವಂತೆ ಎನ್‌ಡಿಎ ಶಾಸಕರ ನಿರ್ಣಯವನ್ನು ಉಲ್ಲೇಖಿಸಿರುವ ಕುಕಿ-ಹ್ಮಾರ್-ಝೋಮಿ ಶಾಸಕರು, 2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೋ-ಹ್ಮಾರ್‌ಗಳ ನಡುವೆ ಘರ್ಷಣೆಗಳು ಭುಗಿಲೆದ್ದ ನಂತರ ನಡೆದ ಎಲ್ಲಾ ನಾಗರಿಕ ಹತ್ಯೆಗಳ ಪ್ರಕರಣಗಳನ್ನು ಎನ್‌ಐಎಗೆ ಹಸ್ತಾಂತರಿಸುವಂತೆ ಒತ್ತಾಯಿಸಿದ್ದಾರೆ.

2023ರ ಮೇ ತಿಂಗಳಲ್ಲಿ ಮೈತೇಯಿ ಮತ್ತು ಕುಕಿ-ಜೊ-ಹ್ಮಾರ್‌ ಸಮುದಾಯಗಳ ನಡುವೆ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಕನಿಷ್ಠ 255 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 59,000 ಕ್ಕೂ ಹೆಚ್ಚು ಜನರು ನಿರಾಶ್ರಿತರಾಗಿದ್ದಾರೆ. ನವೆಂಬರ್ 14 ರಂದು, ಜನಾಂಗೀಯ ಹಿಂಸಾಚಾರದ ಉಲ್ಬಣದ ನಂತರ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ AFSPA ಕಾಯಿದೆಯನ್ನು ಜಾರಿ ಮಾಡಲಾಗಿದೆ. ಮಾಡಲಾಗಿದೆ. ಮಾಡಲಾಗಿದೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಇದನ್ನೂ ಓದಿ: ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ಮಣಿಪುರ ಹಿಂಸಾಚಾರ: ‘ಜಿರಿಬಾಮ್ ಎನ್‌ಕೌಂಟರ್‌ನಲ್ಲಿ ಹತರಾದವರು ಹುತಾತ್ಮರು’ ಎಂದು ಪ್ರತಿಪಾದಿಸಿದ ಕುಕಿ ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...