ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ

ಮೈತೇಯಿ ಸಂಘಟನೆ ಆರಂಬೈ ತೆಂಗೋಲ್‌ನ ನಾಯಕನ ಬಂಧನ ವಿರೋಧಿಸಿ ಮಣಿಪುರದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿವೆ. ಶನಿವಾರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಭಾನುವಾರವೂ ಹಾಗೆಯೇ ಮುಂದುವರಿದಿದೆ. ಆಡಳಿತವು ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದೆ. ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್, ಬಿಷ್ಣುಪುರ ಮತ್ತು ಕಾಕ್ಚಿಂಗ್ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಕಣಿವೆ ಪ್ರದೇಶಗಳಲ್ಲಿ VSAT ಮತ್ತು VPN ಸೌಲಭ್ಯಗಳು ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ … Continue reading ಮಣಿಪುರ ಮತ್ತೆ ಉದ್ವಿಗ್ನ: ಐದು ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿ, ಇಂಟರ್ನೆಟ್ ಸ್ಥಗಿತ