Homeಮುಖಪುಟಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

ಮಣಿಪುರ: ಉಗ್ರರ ದಾಳಿಯಲ್ಲಿ ಸೇನಾ ಕರ್ನಲ್, ಪತ್ನಿ, ಮಗು ಸೇರಿ 7 ಮಂದಿ ಸಾವು

- Advertisement -
- Advertisement -

ಮಣಿಪುರದ ಮ್ಯಾನ್ಮಾರ್ ಗಡಿಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಅಸ್ಸಾಂ ಸೇನಾ ಕರ್ನಲ್, ಅವರ ಪತ್ನಿ ಮತ್ತು ಎಂಟು ವರ್ಷದ ಮಗ ಸೇರಿದಂತೆ 7 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಪ್ರದೇಶದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ ಎನ್ನಲಾಗಿದೆ.

46 ಅಸ್ಸಾಂ ರೈಫಲ್ಸ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಅವರು ಶನಿವಾರ ಕ್ಯಾಂಪ್‌ನಿಂದ  ಹಿಂದಿರುಗುತ್ತಿದ್ದಾಗ ಬೆಳಗ್ಗೆ 11 ಗಂಟೆಗೆ ದಾಳಿ ನಡೆದಿದೆ.

“46 ಅಸ್ಸಾಂ ರೈಫಲ್ಸ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿಪ್ಲವ್ ತ್ರಿಪಾಠಿ ಸೇರಿದಂತೆ ಐವರು ಸೈನಿಕರು ಕರ್ತವ್ಯದಲ್ಲಿದ್ದಾಗ ಪ್ರಾಣ ತ್ಯಾಗ ಮಾಡಿದ್ದಾರೆ. ಕಮಾಂಡಿಂಗ್ ಅಧಿಕಾರಿಯ ಪತ್ನಿ ಮತ್ತು ಮಗು ಸಹ ಪ್ರಾಣ ಕಳೆದುಕೊಂಡಿದ್ದಾರೆ” ಎಂದು ಅಸ್ಸಾಂ ರೈಫಲ್ಸ್ ಹೇಳಿಕೆಯಲ್ಲಿ ತಿಳಿಸಿದೆ.

ಮಣಿಪುರ ಮೂಲದ ಭಯೋತ್ಪಾದಕ ಗುಂಪು ಪೀಪಲ್ಸ್ ಲಿಬರೇಶನ್ ಆರ್ಮಿ ಈ ದಾಳಿಯ ಹಿಂದೆ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಯಾವುದೇ ಗುಂಪು ಇನ್ನೂ ದಾಳಿಯ ಹೊಣೆಯನ್ನು ವಹಿಸಿಕೊಂಡಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ. “ಮಣಿಪುರದಲ್ಲಿ ನಡೆದ ಅಸ್ಸಾಂ ರೈಫಲ್ಸ್ ಬೆಂಗಾವಲು ಪಡೆಯ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಇಂದು ಹುತಾತ್ಮರಾದ ಯೋಧರು ಮತ್ತು ಕುಟುಂಬ ಸದಸ್ಯರಿಗೆ ನಾನು ಗೌರವ ಸಲ್ಲಿಸುತ್ತೇನೆ. ಅವರ ತ್ಯಾಗವನ್ನು ಎಂದಿಗೂ ಮರೆಯುವುದಿಲ್ಲ” ಎಂದಿದ್ದಾರೆ.

ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಕೂಡ ಘಟನೆಯನ್ನು ಖಂಡಿಸಿದ್ದು, ಇದೊಂದು ಹೇಡಿತನದ ದಾಳಿ ಎಂದಿದ್ದಾರೆ. ಈ ಘಟನೆಗೆ ಕಾರಣವಾದ ಉಗ್ರಗಾಮಿಗಳನ್ನು ಪತ್ತೆ ಹಚ್ಚುವ ಕೆಲಸದಲ್ಲಿ ರಾಜ್ಯ ಪಡೆಗಳು ಮತ್ತು ಪ್ಯಾರಾ ಮಿಲಿಟರಿ ಪಡೆಗಳು ಈಗಾಗಲೇ ತೊಡಗಿವೆ’ ಎಂದು ಬಿರೇನ್ ಸಿಂಗ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

2015 ರಲ್ಲಿ, ಮಣಿಪುರದಲ್ಲಿ ನಡೆದಿದ್ದ ಭಯೋತ್ಪಾದಕರ ದಾಳಿಯಲ್ಲಿ 20 ಸೈನಿಕರು ಸಾವನ್ನಪ್ಪಿದರು. ನಂತರ ಸೇನೆಯು ಭಯೋತ್ಪಾದಕರಶಿಬಿರದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.


ಇದನ್ನೂ ಓದಿ: ‘ಮಿಸ್ಟರ್‌ 56 ಚೀನಾಗೆ ಹೆದರುತ್ತಿದ್ದಾರೆ’ – ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...