Homeಮುಖಪುಟಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

ಮಣಿಪುರ: ಚುನಾವಣೆ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವು

- Advertisement -
- Advertisement -

ಮಾರ್ಚ್ 5 ರಂದು ಎರಡನೇ ಹಂತದ ವಿಧಾನಸಭೆ ಚುನಾವಣೆಯು ಮಣಿಪುರದಲ್ಲಿ ನಡೆದಿದ್ದು, ಚುನಾವಣಾ ಸಂಬಂಧಿತ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶೇಕಡಾ 78.49 ಮತದಾನವಾಗಿದ್ದು, ಮತದಾನ ವೇಳೆಯ ಹಿಂಸಾಚಾರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ವರದಿಯ ಪ್ರಕಾರ, ಒಂದು ಘಟನೆ ತೌಬಲ್ ಜಿಲ್ಲೆಯಲ್ಲಿ ನಡೆದಿದ್ದು, ಎರಡನೆಯ ಘಟನೆ ಸೇನಾಪತಿ ಜಿಲ್ಲೆಯಲ್ಲಿ ನಡೆದಿದೆ.

ಇಂಡಿಯಾ ಟುಡೇ ಪ್ರಕಾರ, ಸೇನಾಪತಿ ಜಿಲ್ಲೆಯ ಮತಗಟ್ಟೆಯೊಂದರಲ್ಲಿ ನಡೆದ ವಾಗ್ವಾದದ ಪರಿಣಾಮವಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಕೆ ಲಾಂಗ್ವಾವೋ ಎಂದು ಗುರುತಿಸಲಾದ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ವಿ ಸಾಪೆ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಣಿಪುರದ ಕರೋಂಗ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚುನಾವಣಾ ಆಯೋಗಕ್ಕೆ ಘಟನೆಯನ್ನು ವರದಿ ಮಾಡಿದ್ದಾರೆ. “ಸರಿಯಾದ ಕಾರಣ” ಇಲ್ಲದೆ ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಎಂದು ದೂರಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಯವರು ವರದಿಗಾಗಿ ಕಾಯುತ್ತಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

ತೌಬಲ್‌ನಲ್ಲಿ ಎರಡನೇ ಸಾವು ಸಂಭವಿಸಿದೆ. ಮತದಾನ ಪ್ರಾರಂಭವಾಗುವ ಮೊದಲು ಕಾಂಗ್ರೆಸ್ ಬೆಂಬಲಿಗರಿಂದ ಗುಂಡು ಹಾರಿಸಲಾಗಿದ್ದು, ಬಿಜೆಪಿ ಕಾರ್ಯಕರ್ತನ ಸಾವಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮೃತರನ್ನು 25 ವರ್ಷದ ಎಲ್ ಅಮುಬಾ ಸಿಂಗ್ ಎಂದು ಗುರುತಿಸಲಾಗಿದೆ.

ಚುನಾವಣಾ ಪ್ರಚಾರವನ್ನು ನಿಲ್ಲಿಸುವಂತೆ ಹೇಳಲು ಸಿಂಗ್ ಅವರು ಬಿಜೆಪಿಯ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಕಾರ್ಯಕರ್ತರ ಮನೆಗೆ ಭೇಟಿ ನೀಡಿದ್ದರು ಎಂದು ಅಧಿಕಾರಿಯೊಬ್ಬರು ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಗಾಯಗೊಳಿಸಿದ್ದು, ಈ ವೇಳೆ ನಡೆದ ವಾಗ್ವಾದದ ವೇಳೆ ಸಿಂಗ್ ಅವರ ಮೇಲೆ ಗುಂಡು ಹಾರಿಸಲಾಗಿದೆ ಎಂದು ವರದಿ ಹೇಳಿದೆ.

ಮಣಿಪುರದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಒಕ್ರಾಮ್ ಇಬೋಬಿ ಸಿಂಗ್ ಅವರು ಶನಿವಾರ ಬೆಳಗ್ಗೆ ಮತ ಚಲಾಯಿಸಿದರು, ತಾಂತ್ರಿಕ ದೋಷದಿಂದ ಮತದಾನ ಕೇಂದ್ರದಲ್ಲಿ ಸ್ವಲ್ಪ ವಿಳಂಬವಾಗಿತ್ತು. “ಕೆಲವು ತಾಂತ್ರಿಕ ದೋಷವಿದೆ” ಎಂದು ಅವರು ದೂರಿದ್ದರು.

ಈ ಹಂತದಲ್ಲಿ ಆರು ಜಿಲ್ಲೆಗಳ 22 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, 92 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಚುನಾವಣೆಗಾಗಿ ಒಟ್ಟು 1,274 ಮತಗಟ್ಟೆಗಳನ್ನು ತೆರೆಯಲಾಗಿತ್ತು.


ಇದನ್ನೂ ಓದಿರಿ: ದೆಹಲಿಯಲ್ಲಿ ಮದ್ಯ ಮಾರಾಟ ದ್ವಿಗುಣ: ರಿಯಾಯಿತಿ ಹಿಂಪಡೆದ ದೆಹಲಿ ಸರ್ಕಾರ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸ್ಪರ್ಧಿಸುವ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ನಡೆದಿದ್ಯಾ ಅಕ್ರಮ?

0
ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆಯಾ? ಹೌದು ಈಗೊಂದು ಆರೋಪವನ್ನು ಸ್ಪರ್ಧೆಯ ಆಕಾಂಕ್ಷಿಗಳಾಗಿದ್ದ ಹಲವು ಅಭ್ಯರ್ಥಿಗಳು ಮಾಡಿದ್ದಾರೆ. ವಾರಾಣಾಸಿಯಲ್ಲಿ ಚುನಾವಣಾಧಿಕಾರಿಗಳು ಮತ್ತು ಬಿಜೆಪಿ-ಆರ್‌ಎಸ್‌ಎಸ್‌ನೊಂದಿಗೆ ನಂಟು ಹೊಂದಿದ್ದ...