Homeಮುಖಪುಟಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

ಮಣಿಪುರ | ಇಬ್ಬರ ಶವ ಪತ್ತೆ, ಪರಿಹಾರ ಶಿಬಿರದಿಂದ 6 ಮಂದಿ ನಾಪತ್ತೆ

- Advertisement -
- Advertisement -

ಮಣಿಪುರದ ಜಿರಿಬಾಮ್‌ನ ಬಳಿಯ ಮನೆಗಳಿಂದ ಮೈತೆಯಿ ಸಮುದಾಯದ ಇಬ್ಬರು ವ್ಯಕ್ತಿಗಳ ಶವಗಳನ್ನು ಮಂಗಳವಾರ ಬೆಳಗ್ಗೆ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಭದ್ರತಾ ಪಡೆಗಳು ಈ ಪ್ರದೇಶದಲ್ಲಿ 10 ಶಂಕಿತ ಉಗ್ರರನ್ನು ಹೊಡೆದುರುಳಿಸಿದ್ದಾಗಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ. ಮಣಿಪುರ

ಸೋಮವಾರ ನಡೆದ ಗುಂಡಿನ ಚಕಮಕಿಯಿಂದ ಆ ಪ್ರದೇಶದಲ್ಲಿನ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹ್ಮಾರ್ ಸಮುದಾಯ ಬಹುಸಂಖ್ಯಾತರಾಗಿರುವ ನೆರೆಯ ಫೆರ್ಜಾಲ್ ಜಿಲ್ಲೆಯ ಬೆಟ್ಟಗಳ ಸಮೀಪವಿರುವ ಜಿರಿಬಾಮ್ ಜಿಲ್ಲೆಯ ಜಕುರಾಧೋರ್ ಮತ್ತು ಬೊರೊಬೆಕ್ರಾ ಪ್ರದೇಶಗಳಲ್ಲಿ ಸೋಮವಾರ ಮಧ್ಯಾಹ್ನ ಹ್ಮಾರ್ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ದೊಡ್ಡ ಗುಂಡಿನ ಚಕಮಕಿಗೆ ನಡೆದಿತ್ತು. ಮಣಿಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜಕುರಾದೋರ್‌ನಲ್ಲಿರುವ ಸಿಆರ್‌ಪಿಎಫ್ ಪೋಸ್ಟ್ ಮತ್ತು ಹತ್ತಿರದ ಬೊರೊಬೆಕ್ರಾ ಪೊಲೀಸ್ ಠಾಣೆಯ ಮೇಲೆ ಗುಂಡಿನ ದಾಳಿ ನಡೆದ ನಂತರ ಈ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. ಶಂಕಿತ ಉಗ್ರರು ಮುಂಜಾನೆಯೇ ಈ ಪ್ರದೇಶದಲ್ಲಿನ ಮೈತೇಯಿ ಬಾಹುಳ್ಯದ ಪ್ರದೇಶಗಳ ಮನೆಗಳು ಮತ್ತು ಅಂಗಡಿಗಳ ಮೇಲೆ ದಾಳಿ ನಡೆಸಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ ಲೈಶ್ರಾಮ್ ಬರೇಲ್ ಸಿಂಗ್ (63) ಮತ್ತು ಮೈಬಮ್ ಕೇಶ್ವೋ ಸಿಂಗ್ (71) ಎಂದು ಗುರುತಿಸಲಾದ ಇಬ್ಬರ ಶವಗಳನ್ನು ಪೊಲೀಸರು ಜಕುರಾಧೋರ್ ಪ್ರದೇಶದ ಮನೆಗಳಿಂದ ವಶಪಡಿಸಿಕೊಂಡಿದ್ದಾರೆ. ಈ ಇಬ್ಬರು ಬೊರೊಬೆಕ್ರಾ ಪೊಲೀಸ್ ಠಾಣೆಯ ಪರಿಹಾರ ಶಿಬಿರದಲ್ಲಿ ತಂಗಿದ್ದರು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ. ಸೋಮವಾರದ ಗುಂಡಿನ ದಾಳಿಯಿಂದ ಶಿಬಿರದಿಂದ 10 ಮಂದಿ ನಾಪತ್ತೆಯಾಗಿದ್ದಾರೆ.

ಈ ವರ್ಷದ ಜೂನ್‌ನಲ್ಲಿ ಪ್ರದೇಶದಲ್ಲಿ ಮೊದಲ ಬಾರಿಗೆ ಹಿಂಸಾಚಾರ ಭುಗಿಲೆದ್ದು, ಬೆಂಕಿ ಹಚ್ಚಲ್ಪಟ್ಟ ನಂತರ ಸಮೀಪದ ಹಳ್ಳಿಗಳ ನಿವಾಸಿಗಳಿಗಾಗಿ ಪೊಲೀಸ್ ಠಾಣೆಯಲ್ಲಿ ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾತ್ತು. ಈ ಶಿಬಿರದಲ್ಲಿ 118 ಜನರು ತಂಗಿದ್ದಾರೆ ಎಂದು ನಿವಾಸಿ ಯುರೆಂಬಮ್ ಸಂಜೋಯ್ ಸಿಂಗ್ ಹೇಳಿದ್ದಾರೆ. ಈ ಪ್ರದೇಶದಿಂದ ಸ್ಥಳಾಂತರಗೊಂಡ ಉಳಿದ ಮೈತೇಯಿ ಜನರು 20 ಕಿಮೀ ದೂರದಲ್ಲಿರುವ ಜಿರಿಬಾಮ್ ಜಿಲ್ಲಾ ಕೇಂದ್ರದಲ್ಲಿರುವ ಪರಿಹಾರ ಶಿಬಿರಗಳಲ್ಲಿ ತಂಗಿದ್ದಾರೆ.

“ಹಗಲಿನ ವೇಳೆಯಲ್ಲಿ, ಪರಿಹಾರ ಶಿಬಿರದಲ್ಲಿ ವಾಸಿಸುವ ಜನರು ಹೊರಗೆ ಹೋಗುತ್ತಾರೆ. ನಿನ್ನೆಯ ಗುಂಡಿನ ದಾಳಿ ನಂತರ ಜನರು ಇಲ್ಲಿಂದ ಓಡಲು ಪ್ರಾರಂಭಿಸಿದರು. ದಾಳಿ ಕಡಿಮೆಯಾದ ನಂತರ, ಪರಿಹಾರ ಶಿಬಿರದಿಂದ 10 ಜನರು ನಾಪತ್ತೆಯಾಗಿರುವುದನ್ನು ನಾವು ಕಂಡುಕೊಂಡಿದ್ದೇವೆ.” ಎಂದು ಅವರು ಹೇಳಿದ್ದಾರೆ.

“ಇಂದು ಬೆಳಿಗ್ಗೆ, ಎರಡು ಶವಗಳು ಪತ್ತೆಯಾಗಿವೆ ಮತ್ತು ಇನ್ನಿಬ್ಬರು ಜೀವಂತವಾಗಿ ಪತ್ತೆಯಾಗಿದ್ದಾರೆ … ಆರು ಜನರು ಇನ್ನೂ ಕಾಣೆಯಾಗಿದ್ದಾರೆ, ಅವರಲ್ಲಿ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮತ್ತು ಅವರು ಎಲ್ಲಿರಬಹುದು ಅಥವಾ ಅವರಿಗೆ ಏನಾರಿರಬಹುದು ಎಂದು ನಾವು ಆತಂಕದಲ್ಲಿದ್ದೇವೆ” ಎಂದು ಅವರು ಹೇಳಿದರು. ಹಿಂಸಾಚಾರದ ನಂತರ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಇದನ್ನೂ ಓದಿ:11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

11 ಜನ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 44 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...